ಮುಂಬೈನ 5 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ

ಮುಂಬೈನ ಝವೇರಿ ಬಜಾರ್ ಪ್ರದೇಶದಲ್ಲಿ 5 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. 12ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿವೆ.

ಮುಂಬೈನ 5 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ
ಬೆಂಕಿ
Image Credit source: NDTV

Updated on: Jun 09, 2023 | 7:39 AM

ಮುಂಬೈನ ಝವೇರಿ ಬಜಾರ್ ಪ್ರದೇಶದಲ್ಲಿ 5 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. 12ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿವೆ. ಮುಂಬೈನ ಝವೇರಿ ಬಜಾರ್ ಪ್ರದೇಶದಲ್ಲಿನ ಕಟ್ಟಡದಲ್ಲಿ ಬೆಂಕಿಯು ಮೂರನೇ ಹಂತಕ್ಕೆ ತಲುಪಿದೆ. ಶುಕ್ರವಾರ ಮುಂಜಾನೆ 1.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕಟ್ಟಡದಲ್ಲಿ ಸಿಲುಕಿದ್ದ ಎಲ್ಲ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಇಲ್ಲಿಯವರೆಗೆ ಯಾವುದೇ ಗಾಯ ಅಥವಾ ಕಾರಣ ವರದಿಯಾಗಿಲ್ಲ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ