AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗ್ನಲ್ ಜಂಪ್​ ಮಾಡಿ ಹೋಗುತ್ತಿದ್ದ ಕಾರನ್ನು ತಡೆಯಲು ಹೋದ ಟ್ರಾಫಿಕ್​ ಪೊಲೀಸ್​ರನ್ನು ಬಾನೆಟ್​ ಮೇಲೆ 20 ಕಿ.ಮೀ ಎಳೆದೊಯ್ದ ಚಾಲಕ

ಟ್ರಾಫಿಕ್ ನಿಯಮ(Traffic Rules) ವನ್ನು ಉಲ್ಲಂಘಿಸಿರುವ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಟ್ರಾಫಿಕ್​ ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ 20 ಕಿ.ಮೀ ಎಳೆದೊಯ್ದಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಸಿಗ್ನಲ್ ಜಂಪ್​ ಮಾಡಿ ಹೋಗುತ್ತಿದ್ದ ಕಾರನ್ನು ತಡೆಯಲು ಹೋದ ಟ್ರಾಫಿಕ್​ ಪೊಲೀಸ್​ರನ್ನು  ಬಾನೆಟ್​ ಮೇಲೆ 20 ಕಿ.ಮೀ ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್
ನಯನಾ ರಾಜೀವ್
|

Updated on: Apr 16, 2023 | 12:00 PM

Share

ಟ್ರಾಫಿಕ್ ನಿಯಮ(Traffic Rules) ವನ್ನು ಉಲ್ಲಂಘಿಸಿರುವ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಟ್ರಾಫಿಕ್​ ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ 20 ಕಿ.ಮೀ ಎಳೆದೊಯ್ದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ, ಸಿಗ್ನಲ್​ ಜಂಪ್ ಮಾಡಿ ಹೋಗಲು ಯತ್ನಿಸುತ್ತಿದ್ದ ಚಾಲಕನನ್ನು ತಡೆಯಲು ಹೋದ ಟ್ರಾಫಿಕ್ ಪೊಲೀಸರೊಬ್ಬರನ್ನು ಬಾನೆಟ್​ ಮೇಲೆ 20 ಕಿ.ಮೀ ದೂರ ಎಳೆದೊಯ್ದಿರುವ ಘಟನೆ ವರದಿಯಾಗಿದೆ. ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಪೊಲೀಸರು ಕಾರು ಚಾಲಕ ನೆರೂಲ್ ನಿವಾಸಿ ಆದಿತ್ಯ ಬೆಮ್ಡೆ (23) ನನ್ನು ಬಂಧಿಸಿದ್ದಾರೆ.

ಕುಡಿದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಟ್ರಾಫಿಕ್ ಕಾನ್‌ಸ್ಟೆಬಲ್ ಸಿದ್ಧೇಶ್ವರ ಮಾಳಿ (37) ಕಾರಿನ ಮುಂಭಾಗದಲ್ಲಿ ತೀವ್ರವಾಗಿ ಸಿಕ್ಕಿಹಾಕಿಕೊಂಡಿದ್ದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಸಾಮಾನ್ಯವಾಗಿ ಈ ದೂರವನ್ನು ಕ್ರಮಿಸಲು ಕನಿಷ್ಠ 15-20 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಪಾಮ್ ಬೀಚ್ ರಸ್ತೆಯ ಹಲವೆಡೆ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಘಟನೆ ಸೆರೆಯಾಗಿದೆ.

ಕಾನ್ಸ್‌ಟೇಬಲ್ ಸಿದ್ಧೇಶ್ವರ ಮಾಳಿ ಅವರು ಬ್ಲೂ ಡೈಮಂಡ್ ಜಂಕ್ಷನ್‌ನಲ್ಲಿ ಸಿಗ್ನಲ್ ಜಂಪ್ ಮಾಡಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಕಾರು ಚಾಲಕನನ್ನು ನಿಲ್ಲಿಸಲು ಪ್ರಯತ್ನಿಸಿದರು. ಆದರೆ ಚಾಲಕ ವೇಗ ಹೆಚ್ಚಿಸಿದ್ದ, ಪೊಲೀಸ್​ ಕಾರಿನ ಬಾನೆಟ್​ ಮೇಲೆ ಬಿದ್ದರೂ ನಿಲ್ಲಿಸಿದ ವ್ಯಕ್ತಿ ಬರೋಬ್ಬರಿ 20 ಕಿ.ಮೀ ಕಾರು ಚಲಾಯಿಸಿದ್ದಾನೆ.

ಮತ್ತಷ್ಟು ಓದಿ: ಹೆಲ್ಮೆಟ್​ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಮಹಿಳಾ ಪೊಲೀಸರ ಫೋಟೊ ವೈರಲ್, ಇಲಾಖೆ ಹೇಳಿದ್ದೇನು?

ವಾಶಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಶಶಿಕಾಂತ್ ಚಂಡೇಕರ್ ಮಾತನಾಡಿ, ಚಾಲಕನ ವೈದ್ಯಕೀಯ ಪರೀಕ್ಷೆಯಲ್ಲಿ ಕುಡಿದಿರುವುದು ತಿಳಿದುಬಂದಿದೆ, ಬಂಧಿತ ವ್ಯಕ್ತಿಯ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಲಾಗಿದೆ ಮತ್ತು ಮಾದಕ ದ್ರವ್ಯಗಳು ಮತ್ತು ಸೈಕೋಟ್ರೋಪಿಕ್ ಪದಾರ್ಥಗಳ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿಯೂ ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು