AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಮತ್ತೆ ಬಾಂಬ್ ದಾಳಿಯ ಭೀತಿ; ತಾಜ್ ಹೋಟೆಲ್, ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ

ಮುಂಬೈನ ತಾಜ್ ಹೋಟೆಲ್ ಮೇಲೆ ನಡೆದ ಭೀಕರ ಬಾಂಬ್ ದಾಳಿಯ ಘಟನೆ ಇನ್ನೂ ಜನರ ಮನಸಿನಿಂದ ಸರಿದಿಲ್ಲ. ಅಷ್ಟರಲ್ಲಾಗಲೇ ಮತ್ತೆ ತಾಜ್ ಹೋಟೆಲ್, ಮುಂಬೈ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಪೊಲೀಸರಿಗೆ ಬೆದರಿಕೆ ಕರೆ ಬಂದಿದೆ.

ಮುಂಬೈನಲ್ಲಿ ಮತ್ತೆ ಬಾಂಬ್ ದಾಳಿಯ ಭೀತಿ; ತಾಜ್ ಹೋಟೆಲ್, ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ
ಮುಂಬೈನ ತಾಜ್ ಹೋಟೆಲ್
ಸುಷ್ಮಾ ಚಕ್ರೆ
|

Updated on:May 27, 2024 | 8:13 PM

Share

ಮುಂಬೈ: ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಇಂದು (ಸೋಮವಾರ) ತಾಜ್ ಹೋಟೆಲ್ (Taj Hotel), ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಫೋಟಿಸುವ ಬಾಂಬ್ ಬೆದರಿಕೆ ಕರೆ ಬಂದಿದೆ. ” ಇಂದು ಮಧ್ಯಾಹ್ನದ ಸುಮಾರಿಗೆ ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆ ಬಂದಿದೆ. ಮುಂಬೈನ ತಾಜ್ ಹೋಟೆಲ್ ಮತ್ತು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಕರೆ ಮಾಡಿದವರು ಪೊಲೀಸರಿಗೆ ತಿಳಿಸಿದ್ದಾರೆ” ಎಂದು ಮೂಲಗಳು ತಿಳಿಸಿವೆ.

ಬಾಂಬ್ ಸ್ಫೋಟದ ಬೆದರಿಕೆಯ ಗಂಭೀರತೆಯನ್ನು ಪರಿಗಣಿಸಿದ ಪೊಲೀಸರು, ಹೋಟೆಲ್ ಮತ್ತು ವಿಮಾನ ನಿಲ್ದಾಣದಲ್ಲಿ ಶೋಧ ನಡೆಸಿದ್ದಾರೆ. ಆದರೆ ಅಲ್ಲಿ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಬಾಂಬ್ ಬೆದರಿಕೆ ಕರೆಯನ್ನು ಉತ್ತರ ಪ್ರದೇಶದಿಂದ ಮಾಡಲಾಗಿದ್ದು, ಕರೆ ಮಾಡಿದವರನ್ನು ಹಿಡಿಯಲು ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ರಾಮೇಶ್ವರಂ‌ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ: 5ನೇ ಆರೋಪಿ ಬಂಧನ

ಈ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಾಗಿದೆ. ಉತ್ತರ ಪ್ರದೇಶದಿಂದ ಕರೆ ಬಂದಿದ್ದು, ಕರೆ ಮಾಡಿದವರಿಗಾಗಿ ಶೋಧ ನಡೆಸಲಾಗುತ್ತಿದೆ. ಭಾನುವಾರ ನಸುಕಿನಲ್ಲಿ ಬಾಂಬ್ ಬೆದರಿಕೆ ಬಂದ ನಂತರ ಚೆನ್ನೈ ವಿಮಾನ ನಿಲ್ದಾಣದಲ್ಲಿ ಉದ್ವಿಗ್ನತೆ ಉಂಟಾಗಿದ್ದ ಬೆನ್ನಲ್ಲೇ ಮುಂಬೈನಲ್ಲೂ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:11 pm, Mon, 27 May 24