ಮುಂಬೈ: ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಇಂದು (ಸೋಮವಾರ) ತಾಜ್ ಹೋಟೆಲ್ (Taj Hotel), ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಫೋಟಿಸುವ ಬಾಂಬ್ ಬೆದರಿಕೆ ಕರೆ ಬಂದಿದೆ. ” ಇಂದು ಮಧ್ಯಾಹ್ನದ ಸುಮಾರಿಗೆ ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆ ಬಂದಿದೆ. ಮುಂಬೈನ ತಾಜ್ ಹೋಟೆಲ್ ಮತ್ತು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಕರೆ ಮಾಡಿದವರು ಪೊಲೀಸರಿಗೆ ತಿಳಿಸಿದ್ದಾರೆ” ಎಂದು ಮೂಲಗಳು ತಿಳಿಸಿವೆ.
ಬಾಂಬ್ ಸ್ಫೋಟದ ಬೆದರಿಕೆಯ ಗಂಭೀರತೆಯನ್ನು ಪರಿಗಣಿಸಿದ ಪೊಲೀಸರು, ಹೋಟೆಲ್ ಮತ್ತು ವಿಮಾನ ನಿಲ್ದಾಣದಲ್ಲಿ ಶೋಧ ನಡೆಸಿದ್ದಾರೆ. ಆದರೆ ಅಲ್ಲಿ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಬಾಂಬ್ ಬೆದರಿಕೆ ಕರೆಯನ್ನು ಉತ್ತರ ಪ್ರದೇಶದಿಂದ ಮಾಡಲಾಗಿದ್ದು, ಕರೆ ಮಾಡಿದವರನ್ನು ಹಿಡಿಯಲು ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mumbai Police control room today received a call that a bombs have been placed at Taj Hotel and airport in the city. Police conducted search at the locations but nothing suspicious was found. The call originated from Uttar Pradesh and search for the caller is underway: Mumbai…
— ANI (@ANI) May 27, 2024
ಇದನ್ನೂ ಓದಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ: 5ನೇ ಆರೋಪಿ ಬಂಧನ
ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದೆ. ಉತ್ತರ ಪ್ರದೇಶದಿಂದ ಕರೆ ಬಂದಿದ್ದು, ಕರೆ ಮಾಡಿದವರಿಗಾಗಿ ಶೋಧ ನಡೆಸಲಾಗುತ್ತಿದೆ. ಭಾನುವಾರ ನಸುಕಿನಲ್ಲಿ ಬಾಂಬ್ ಬೆದರಿಕೆ ಬಂದ ನಂತರ ಚೆನ್ನೈ ವಿಮಾನ ನಿಲ್ದಾಣದಲ್ಲಿ ಉದ್ವಿಗ್ನತೆ ಉಂಟಾಗಿದ್ದ ಬೆನ್ನಲ್ಲೇ ಮುಂಬೈನಲ್ಲೂ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:11 pm, Mon, 27 May 24