ಮುಂಬೈ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ (Nupur Sharma) ಅವರು ಸುದ್ದಿವಾಹಿನಿಯ ಚರ್ಚೆಯ ಸಂದರ್ಭದಲ್ಲಿ ಪ್ರವಾದಿ ಮೊಹಮ್ಮದ್ (Prophet Mohammed) ವಿರುದ್ಧ ಮಾಡಿದ ಹೇಳಿಕೆಗಳ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದ ಮೇಲೆ ಮುಂಬೈ ಪೊಲೀಸರು (Mumbai police) ಶನಿವಾರ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಝಾ ಅಕಾಡೆಮಿಯ ದೂರಿನ ಆಧಾರದ ಮೇಲೆ ಪೈಧೋನಿ ಪೊಲೀಸರು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವುದು, ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾರ್ವಜನಿಕ ದುಷ್ಪರಿಣಾಮಕ್ಕೆ ಕಾರಣವಾದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ರಾಝಾ ಅಕಾಡೆಮಿಯ ಮುಂಬೈ ವಿಭಾಗದ ಜಂಟಿ ಕಾರ್ಯದರ್ಶಿ ಇರ್ಫಾನ್ ಶೇಖ್ ಅವರ ಹೇಳಿಕೆಯನ್ನು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಅವರ ಹೇಳಿಕೆಯ ಪ್ರಕಾರ, ನೂಪುರ್ ಶರ್ಮಾ ಭಾಗವಹಿಸಿದ ಜ್ಞಾನವಾಪಿ ವಿಷಯದ ಚರ್ಚೆಯ ಬಗ್ಗೆ ವಾಟ್ಸಾಪ್‌ನಲ್ಲಿ ಲಿಂಕ್ ಸಿಕ್ಕಿತು. ಪ್ರವಾದಿ ಮತ್ತು ಅವರ ಪತ್ನಿಯ ಬಗ್ಗೆ ಶರ್ಮಾ ಅವರು ಮಾಡಿದ ಕಾಮೆಂಟ್‌ಗಳನ್ನು ನೋಡಿ ನನಗೆ ನೋವಾಗಿದೆ ಎಂದು ಶೇಖ್ ಹೇಳಿದ್ದಾರೆ. ನಾನು ಪೈಧೋನಿ ಪೊಲೀಸರನ್ನು ಸಂಪರ್ಕಿಸಿ ಶರ್ಮಾ ವಿರುದ್ಧ ಲಿಖಿತ ದೂರು ನೀಡಿದ್ದೇನೆ. ಶೇಖ್ ಅವರು ಪೊಲೀಸರಿಗೆ ಚರ್ಚೆಯ ವಿಡಿಯೊ ಲಿಂಕ್ ಅನ್ನು ಕೊಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳೀಯ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295-ಎ (ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶ), 153-ಎ (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 505 (II) (ಸಾರ್ವಜನಿಕ ಕಿಡಿಗೇಡಿತನಕ್ಕೆ ಅನುಕೂಲಕರವಾದ ಹೇಳಿಕೆಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
:@DelhiPolice @CPDelhi I am getting continuous death and beheading threats against my family and myself which are egged on by @zoo_bear because of his attempts to incite communal passions and vitiate the atmosphere by building a fake narrative.
ಇದನ್ನೂ ಓದಿAttaching a few pics. Please note. pic.twitter.com/QmgA2uRCrS
— Nupur Sharma (@NupurSharmaBJP) May 27, 2022
ಶುಕ್ರವಾರದ ಚರ್ಚೆಯ ನಂತರ ತನಗೆ ಮತ್ತು ತನ್ನ ಕುಟುಂಬಕ್ಕೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಶರ್ಮಾ ಸ್ಕ್ರೀನ್‌ಶಾಟ್‌ಗಳನ್ನು ಟ್ವೀಟ್ ಮಾಡಿದ್ದಾರೆ. ಶರ್ಮಾ ಅವರು ಇದನ್ನು ದೆಹಲಿ ಪೊಲೀಸರ ಟ್ವಿಟರ್ ಹ್ಯಾಂಡಲ್‌ಗೆ ಟ್ಯಾಗ್ ಮಾಡಿದ ನಂತರ ಶ್ರೀಘ್ರದಲ್ಲೇ ನಿಮ್ಮನ್ನು ಸಂಪರ್ಕಿಸಲಾಗುವುದು ಎಂದು ಪೊಲೀಸರು ಪ್ರತಿಕ್ರಿಯಿಸಿದ್ದರು.
ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ
Published On - 5:59 pm, Sun, 29 May 22