ವ್ಯಕ್ತಿ ತಮ್ಮ 7 ವಾಹನಗಳಿಗೆ ಮಾಡಿಸಿದ್ದ ವಿಮೆ ನಕಲಿ, ಇನ್ಶೂರೆನ್ಸ್​ ಮಾಡಿಸುವ ಮುನ್ನ ಎಚ್ಚರ

ವಾಹನಗಳ ನಕಲಿ ವಿಮಾ ಪಾಲಿಸಿಗಳನ್ನು ಆಟೋಮೊಬೈಲ್ ಬಿಡಿಭಾಗಗಳ ಅಂಗಡಿ ಮಾಲೀಕರಿಗೆ ನೀಡಿದ ಆರೋಪದ ಮೇಲೆ ಮುಂಬೈ ಪೊಲೀಸರು ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ವ್ಯಕ್ತಿ ತಮ್ಮ 7 ವಾಹನಗಳಿಗೆ ಮಾಡಿಸಿದ್ದ ವಿಮೆ ನಕಲಿ, ಇನ್ಶೂರೆನ್ಸ್​ ಮಾಡಿಸುವ ಮುನ್ನ ಎಚ್ಚರ
ವಿಮೆ
Image Credit source: NDTV

Updated on: Jul 02, 2023 | 11:18 AM

ವಾಹನಗಳ ನಕಲಿ ವಿಮಾ ಪಾಲಿಸಿಗಳನ್ನು ಆಟೋಮೊಬೈಲ್ ಬಿಡಿಭಾಗಗಳ ಅಂಗಡಿ ಮಾಲೀಕರಿಗೆ ನೀಡಿದ ಆರೋಪದ ಮೇಲೆ ಮುಂಬೈ ಪೊಲೀಸರು ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಜೂನ್ 2018 ರಲ್ಲಿ, ಕಲಾಂಬೋಲಿ ಪ್ರದೇಶದಲ್ಲಿ ಅಂಗಡಿಯನ್ನು ನಡೆಸುತ್ತಿದ್ದ ವ್ಯಕ್ತಿಯು, ತನ್ನ ಏಳು ವಾಹನಗಳಿಗೆ  ಇನ್ಶೂರೆನ್ಸ್​ ಪಡೆಯಲು ಆರೋಪಿಗೆ 46,370 ರೂ. ಪಾವತಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನವೊಂದು ಅಪಘಾತಕ್ಕೀಡಾದಾಗ ಸಂದರ್ಭದಲ್ಲಿ ವಿಮೆಗಾಗಿ ಅರ್ಜಿ ಸಲ್ಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪರಿಶೀಲನೆಯ ವೇಳೆ ಆರೋಪಿ ನೀಡಿದ ಪಾಲಿಸಿ ನಕಲಿ ಎಂಬುದು ತಿಳಿದುಬಂದಿದೆ ಎಂದು ಎಪಿಎಂಸಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅರುಣ್ ಬಿಲಾರೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: Health Insurance: ತೂಕ ಕಡಿಮೆ ಮಾಡಿಕೊಂಡ್ರೆ ಸಿಗುತ್ತೆ ಅಗ್ಗದ ಆರೋಗ್ಯ ವಿಮೆ!

ಬಳಿಕ ಎಲ್ಲಾ ವಾಹನಗಳಿಗೆ ನೀಡಲಾಗಿರುವ ಇನ್ಶೂರೆನ್ಸ್ ಪೇಪರ್​ಗಳು ನಕಲಿ ಎಂಬುದು ತಿಳಿದುಬಂದಿದೆ.
ದೂರಿನ ಆಧಾರದ ಮೇರೆಗೆ, ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 420 (ವಂಚನೆ ), 406 ,  465 (ನಕಲಿ) ಅಡಿ ಘನ್ಸೋಲಿ ಪ್ರದೇಶದ ನಿವಾಸಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us