Baba Siddique: ಬಾಬಾ ಸಿದ್ದಿಕಿ ಹಂತಕರು ಯೂಟ್ಯೂಬ್ ನೋಡಿ ಶೂಟಿಂಗ್ ಅಬ್ಯಾಸ ಮಾಡಿದ್ರು
ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಆರೋಪಿಗಳು ಯೂಟ್ಯೂಬ್ ನೋಡಿ ಶೂಟಿಂಗ್ ಅಭ್ಯಾಸ ಮಾಡಿದ್ದರು ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಗುರ್ಮೈಲ್ ಸಿಂಗ್ ಮತ್ತು ಧರ್ಮರಾಜ್ ಕಶ್ಯಪ್ ಅವರು ಯೂಟ್ಯೂಬ್ ವೀಡಿಯೊಗಳನ್ನು ನೋಡುವ ಮೂಲಕ ಶೂಟ್ ಮಾಡಲು ಕಲಿತಿದ್ದರು ಎಂದು ಮುಂಬೈ ಪೊಲೀಸರು ಹೇಳಿದ್ದಾಗಿ ಎಎನ್ಐ ವರದಿ ಮಾಡಿದೆ.
ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಆರೋಪಿಗಳು ಯೂಟ್ಯೂಬ್ ನೋಡಿ ಶೂಟಿಂಗ್ ಅಭ್ಯಾಸ ಮಾಡಿದ್ದರು ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಗುರ್ಮೈಲ್ ಸಿಂಗ್ ಮತ್ತು ಧರ್ಮರಾಜ್ ಕಶ್ಯಪ್ ಅವರು ಯೂಟ್ಯೂಬ್ ವೀಡಿಯೊಗಳನ್ನು ನೋಡುವ ಮೂಲಕ ಶೂಟ್ ಮಾಡಲು ಕಲಿತಿದ್ದರು ಎಂದು ಮುಂಬೈ ಪೊಲೀಸರು ಹೇಳಿದ್ದಾಗಿ ಎಎನ್ಐ ವರದಿ ಮಾಡಿದೆ.
ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಮೂವರು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಹಲವು ತಂಡಗಳನ್ನು ರಚಿಸಲಾಗಿದೆ. ಮುಂಬೈ ಪೊಲೀಸರ ಅಪರಾಧ ವಿಭಾಗವು ಪ್ರಕರಣದ ತನಿಖೆ ನಡೆಸುತ್ತಿದೆ ಮತ್ತು 7.62 ಎಂಎಂ ಗನ್ ಇರುವ ಕಪ್ಪು ಬ್ಯಾಗ್ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಡೆಯುವ 25 ದಿನಗಳ ಮೊದಲು ಶೂಟರ್‌ಗಳು ಅವರ ನಿವಾಸ ಮತ್ತು ಕಚೇರಿ ಎದುರು ಓಡಾಡಿದ್ದರು. ಮುಂಬೈನಲ್ಲಿ ಮ್ಯಾಗಜೀನ್ ಇಲ್ಲದೆ ಶೂಟಿಂಗ್ ಅಭ್ಯಾಸ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕ್ರಮ್ ಪುಣೆಯಲ್ಲಿ ಸ್ಕ್ರ್ಯಾಪ್ ಡೀಲರ್ ಆಗಿ ಕೆಲಸ ಮಾಡುತ್ತಿದ್ದು, ಪಿತೂರಿಯ ಭಾಗವಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ. ಮೂವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳಾದ ಧರ್ಮರಾಜ್ ಮತ್ತು ಶಿವಪ್ರಸಾದ್ ಗೌತಮ್ ಅವರು ಬಾಲಕ್ರಮ್ ಅವರ ಸ್ಕ್ರ್ಯಾಪ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು.
ಮತ್ತಷ್ಟು ಓದಿ: ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಪ್ರೇಯಸಿಯನ್ನು ಜೀವಂತವಾಗಿ ಸುಟ್ಟು ಹಾಕಿದ್ರಾ?
ಬಾಬಾ ಸಿದ್ದಿಕ್ (66) ಅವರನ್ನು ಮುಂಬೈನ ನಿರ್ಮಲ್ ನಗರ ಪ್ರದೇಶದಲ್ಲಿ ಅವರ ಶಾಸಕ ಪುತ್ರ ಜೀಶಾನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ಮೂವರು ವ್ಯಕ್ತಿಗಳು ಶನಿವಾರ ರಾತ್ರಿ ಗುಂಡಿಕ್ಕಿ ಕೊಂದಿದ್ದಾರೆ.ಕೂಡಲೇ ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಅವರನ್ನು ಭಾನುವಾರ ಅಂತ್ಯಕ್ರಿಯೆ ಮಾಡಲಾಯಿತು.
ಬಾಬಾ ಸಿದ್ದಿಕಿ ಹತ್ಯೆಯ ಸಂಪೂರ್ಣ ಯೋಜನೆ ಪುಣೆಯಲ್ಲಿ ನಡೆದಿದೆ. ಮುಂಬೈ ಕ್ರೈಂ ಬ್ರಾಂಚ್ ಇದುವರೆಗೆ 15 ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಬಾಬಾ ಸಿದ್ದಿಕಿ ಹತ್ಯೆ ಹಿಂದೆ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಕೈವಾಡವಿದೆ. ಆತನ ಸಹಚರರು ಆರೋಪಿಗಳಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸಿದ್ದರು. ಲಾರೆನ್ಸ್ ಜೈಲಿನಲ್ಲಿದ್ದುಕೊಂಡೇ ಸಲ್ಮಾನ್ ಖಾನ್ ಹತ್ಯೆಗೆ 60 ಶೂಟರ್ಸ್ಗಳನ್ನು ನೇಮಿಸಿಕೊಂಡಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ