ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ನೂಪುರ್ ಶರ್ಮಾಗೆ ಸಮನ್ಸ್ ಕಳಿಸಲಿದೆ ಮುಂಬೈ ಪೊಲೀಸ್

| Updated By: ರಶ್ಮಿ ಕಲ್ಲಕಟ್ಟ

Updated on: Jun 06, 2022 | 7:54 PM

ಜ್ಞಾನವಾಪಿ ಮಸೀದಿ ವಿಷಯದ ಕುರಿತು ಸುದ್ದಿವಾಹಿನಿಯ ಚರ್ಚೆಯ ಸಂದರ್ಭದಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಮುಂಬೈ ಪೊಲೀಸರು ಶೀಘ್ರದಲ್ಲೇ ಸಮನ್ಸ್ ಕಳುಹಿಸಲಿದ್ದಾರೆ.

ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ನೂಪುರ್ ಶರ್ಮಾಗೆ ಸಮನ್ಸ್ ಕಳಿಸಲಿದೆ ಮುಂಬೈ ಪೊಲೀಸ್
ನೂಪುರ್ ಶರ್ಮಾ
Follow us on

ಮುಂಬೈ: ಪ್ರವಾದಿ ಮೊಹಮ್ಮದ್  (Prophet Muhammad) ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ಅಮಾನತುಗೊಂಡಿರುವ ಬಿಜೆಪಿಯ (BJP) ವಕ್ತಾರೆ ನೂಪುರ್ ಶರ್ಮಾ (Nupur Sharma) ಅವರಿಗೆ ಮುಂಬೈ ಪೊಲೀಸರು (Mumbai Police) ಶೀಘ್ರದಲ್ಲೇ ಸಮನ್ಸ್ ಕಳುಹಿಸಲಿದ್ದಾರೆ ಎಂದು ಮುಂಬೈ ಉನ್ನತ ಪೊಲೀಸ್ ಸಂಜಯ್ ಪಾಂಡೆ ಎಎನ್‌ಐಗೆ ತಿಳಿಸಿದ್ದಾರೆ. ಜ್ಞಾನವಾಪಿ ಮಸೀದಿ ವಿಷಯದ ಕುರಿತು ಸುದ್ದಿವಾಹಿನಿಯ ಚರ್ಚೆಯ ಸಂದರ್ಭದಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಮುಂಬೈ ಪೊಲೀಸರು ಶೀಘ್ರದಲ್ಲೇ ಸಮನ್ಸ್ ಕಳುಹಿಸಲಿದ್ದಾರೆ ಮತ್ತು ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಿದ್ದಾರೆ” ಎಂದು ಪಾಂಡೆ ಹೇಳಿದ್ದಾರೆ. ಟಿವಿ ಸುದ್ದಿ ಚರ್ಚೆಯೊಂದರಲ್ಲಿ ಪ್ರವಾದಿ ಮೊಹಮ್ಮದ್ ಮತ್ತು ಇಸ್ಲಾಂ ಧರ್ಮದ ಬಗ್ಗೆ ಅವರು ಮಾಡಿದ ಹೇಳಿಕೆಯ ವಿವಾದವು ಭಾರೀ ವಿವಾದವನ್ನು ಉಂಟುಮಾಡಿದ ನಂತರ ಶರ್ಮಾ ಅವರನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ. ಅದೇ ವೇಳೆ ಬಿಜೆಪಿಯ ದೆಹಲಿ ಮಾಧ್ಯಮ ಮುಖ್ಯಸ್ಥ ನವೀನ್ ಜಿಂದಾಲ್ ಅವರು ಸಾಮಾಜಿಕ ಮಾಧ್ಯಮದಲ್ಲಿನ ಅವರ ಅಭಿಪ್ರಾಯಗಳು ಕೋಮು ಸೌಹಾರ್ದತೆಗೆ ಧಕ್ಕೆ ತಂದಿದೆ ಎಂದು ಪಕ್ಷ ಹೇಳಿದೆ. ಕತಾರ್, ಕುವೈತ್, ಇರಾನ್ ಮತ್ತು ಸೌದಿ ಅರೇಬಿಯಾ ಸೇರಿದಂತೆ ಹಲವಾರು ದೇಶಗಳು ಪಕ್ಷ ಕೈಗೊಂಡ ಕ್ರಮವನ್ನು ಸ್ವಾಗತಿಸಿದ್ದು ಹೇಳಿಕೆಯನ್ನು ಖಂಡಿಸಿದೆ.

ಅಮಾನತುಗೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶರ್ಮಾ, “ನನ್ನ ಮಾತುಗಳು ಯಾರಿಗಾದರೂ ತೊಂದರೆ ಉಂಟುಮಾಡಿದರೆ ಅಥವಾ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡಿದರೆ, ನಾನು ಈ ಮೂಲಕ ಬೇಷರತ್ತಾಗಿ ನನ್ನ ಹೇಳಿಕೆಯನ್ನು ಹಿಂತೆಗೆದುಕೊಳ್ಳುತ್ತೇನೆ. ಯಾರ ಧಾರ್ಮಿಕ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ ಎಂದಿದ್ದಾರೆ.

ಭಾರತದಲ್ಲಿ, ಪ್ರತಿಪಕ್ಷಗಳು ಆಡಳಿತಾರೂಢ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ದೂಷಿಸಲು ಕಾರಣವಲಾಗಿದೆ ಎಂದು ಆರೋಪಿಸಿದೆ. ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಪ್ರವಾದಿ ವಿರುದ್ಧದ ಆಕ್ಷೇಪಾರ್ಹ ಹೇಳಿಕೆಗಳ ಬಗ್ಗೆ ಅಂತರಾಷ್ಟ್ರೀಯ ಆಕ್ರೋಶದ ನಂತರ ಅವರನ್ನು ಬಂಧಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ.

ಇದನ್ನೂ ಓದಿ
ನಿಮ್ಮಂತೆ ಮತಾಂಧರನ್ನು ಸ್ತುತಿಸುವುದಿಲ್ಲ; ಪಾಕ್ ಪ್ರಧಾನಿ ಟ್ವೀಟ್​ಗೆ ಭಾರತ ತಿರುಗೇಟು
ಪ್ರವಾದಿ ಬಗ್ಗೆ ಹೇಳಿಕೆ ವಿವಾದ: ಒಐಸಿ ಟೀಕೆ ಅನಗತ್ಯ ಮತ್ತು ಸಂಕುಚಿತ ಮನಸ್ಸಿನದ್ದು ಎಂದ ಭಾರತ
Nupur Sharma: ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮ ಯಾರು?
ಪ್ರವಾದಿ ಮೊಹಮ್ಮದ್​ರ ಅವಹೇಳನ: ಇಸ್ಲಾಮಿಕ್ ದೇಶಗಳಿಂದ ಆಕ್ಷೇಪ, ಭಾರತದ ಉತ್ಪನ್ನ ಬಹಿಷ್ಕಾರಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಕರೆ

“ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ದೂಷಿಸಿದ ಪಕ್ಷದಲ್ಲಿನ ಸಮಾಜವಿರೋಧಿಗಳ ವಿರುದ್ಧ ಕ್ರಮದ ನಾಟಕವನ್ನು ಮಾಡುವ ಬದಲು, ತಕ್ಷಣವೇ ಅವರನ್ನು ಬಂಧಿಸಬೇಕು” ಎಂದು ಕಾಂಗ್ರೆಸ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 7:22 pm, Mon, 6 June 22