ಸಿಜೆಪಿ ಪ್ರತಿಭಟನೆ ವೇಳೆ ಎದೆನೋವು: ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೆ 75 ವರ್ಷದ ಹಿರಿಯ ನಾಗರಿಕ ಸಾವು

ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆದ CJP ಪ್ರತಿಭಟನೆಯಲ್ಲಿ 75 ವರ್ಷದ ಗೋಪಾಲಕೃಷ್ಣ ಪಿಳ್ಳೈ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮತದಾರರ ಪಟ್ಟಿ ಅಕ್ರಮ ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿದ್ದ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪಿಳ್ಳೈ, ತೀವ್ರ ಎದೆನೋವಿನಿಂದ ಬಳಲಿದರು. ಆಸ್ಪತ್ರೆಗೆ ಸಾಗಿಸುವ ಮುನ್ನವೇ ಕೊನೆಯುಸಿರೆಳೆದಿದ್ದು, ಪ್ರಕರಣ ದಾಖಲಾಗಿದೆ. ಈ ದುರ್ಘಟನೆ ಪ್ರತಿಭಟನಾ ನಿರತರಲ್ಲಿ ಆಘಾತ ತಂದಿದೆ.

ಸಿಜೆಪಿ ಪ್ರತಿಭಟನೆ ವೇಳೆ ಎದೆನೋವು: ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೆ 75 ವರ್ಷದ ಹಿರಿಯ ನಾಗರಿಕ ಸಾವು
ಪ್ರತಿಭಟನೆ ವೇಳೆ ಹೃದಯಾಘಾತ
Image Credit source: PTI

Updated on: Oct 03, 2026 | 7:06 AM

ಮುಂಬೈ, ಅ.3: ಮುಂಬೈನ  ಶಿವಾಜಿ ಪಾರ್ಕ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನಾ ಸಮಾವೇಶದ ವೇಳೆ ಅಘಾತಕಾರಿ ಘಟನೆಯೊಂದು ಸಂಭವಿಸಿದೆ. ಮತದಾರರ ಪಟ್ಟಿಯ ಎಸ್​​​ಆರ್​​ಐಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 75 ವರ್ಷದ ಹಿರಿಯ ನಾಗರಿಕರೊಬ್ಬರು ತೀವ್ರ ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ. ಮೃತರನ್ನು ನೆರೆಹೊರೆಯ ಠಾಣೆ ಜಿಲ್ಲೆಯ ದೋಸ್ತಿ ವೆಸ್ಟ್ ಕೌಂಟಿ (ಬಿ-ವಿಂಗ್) ನಿವಾಸಿ ಗೋಪಾಲಕೃಷ್ಣ ಸುಬ್ಬಯ್ಯ ಪಿಳ್ಳೈ (75) ಎಂದು ಮುಂಬೈನ ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯ ಅಧಿಕಾರಿಗಳು ಗುರುತಿಸಿದ್ದಾರೆ.

ಶುಕ್ರವಾರ (ಅ.2) ಸಂಜೆ ಸಿಜೆಪಿ  ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಗೋಪಾಲಕೃಷ್ಣ ಪಿಳ್ಳೈ ಅವರು  ಸುಮಾರು 4:30 ರ ವೇಳೆಗೆ ಶಿವಾಜಿ ಪಾರ್ಕ್ ತಲುಪಿದ್ದರು. 5:00 ಗಂಟೆಯ ಸುಮಾರಿಗೆ ಅವರು ತೀವ್ರವಾದ ಎದೆನೋವಿನಿಂದ ಬಳಲುತ್ತಿರುವುದಾಗಿ ಜೊತೆಯಲ್ಲಿದ್ದ ಸ್ನೇಹಿತರಲ್ಲಿ ತಿಳಿಸಿದ್ದಾರೆ.

ಇಲ್ಲಿದೆ ನೋಡಿ ವಿಡಿಯೋ


ತಕ್ಷಣವೇ ಕಾರ್ಯಪ್ರವೃತ್ತರಾದ ಪ್ರತಿಭಟನಾ ಸ್ಥಳದಲ್ಲಿದ್ದ ಪೋಲೀಸ್ ಸಿಬ್ಬಂದಿ ಹಾಗೂ ಅವರ ಸ್ನೇಹಿತರು, ಅವರನ್ನು ಹತ್ತಿರದ ಆಸ್ಪತ್ರೆಗೆ ತುರ್ತಾಗಿ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷೆಯಾಗಿ ಆರಾಧನಾ ಮಿಶ್ರಾ ನೇಮಕ; ಬ್ರಾಹ್ಮಣ, ಮಹಿಳಾ ಮತಬ್ಯಾಂಕ್ ಸೆಳೆಯಲು ಮಾಸ್ಟರ್ ಪ್ಲಾನ್

ಘಟನೆಗೆ ಸಂಬಂಧಿಸಿದಂತೆ ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us