AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ವರುಣನ ಅಬ್ಬರ: ಬಹುಮಹಡಿ ಕಟ್ಟಡ ಕುಸಿದು ಆರು ಮಂದಿ ಸಾವು, ಶಾಲಾ-ಕಾಲೇಜುಗಳಿಗೆ ರಜೆ, ರೈಲು ಸೇವೆ ಸ್ಥಗಿತ

Mumbai Rains: ಮುಂಬೈನಲ್ಲಿ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಖುರ್ಡ್‌ನಲ್ಲಿ ಕಟ್ಟಡ ಕುಸಿದು ಆರು ಮಂದಿ ಸಾವನ್ನಪ್ಪಿದ್ದಾರೆ. ನಗರದಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರೈಲು ಸೇವೆಗಳು ಮತ್ತು ವಿಮಾನ ಹಾರಾಟ ಸ್ಥಗಿತಗೊಂಡಿದ್ದು, ಭೂಕುಸಿತದಿಂದ ಮುಂಬೈ-ಪುಣೆ ಮಾರ್ಗ ಬಂದ್ ಆಗಿದೆ. ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಿಸಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಮುಂಬೈನಲ್ಲಿ ವರುಣನ ಅಬ್ಬರ:  ಬಹುಮಹಡಿ ಕಟ್ಟಡ ಕುಸಿದು ಆರು ಮಂದಿ ಸಾವು, ಶಾಲಾ-ಕಾಲೇಜುಗಳಿಗೆ ರಜೆ, ರೈಲು ಸೇವೆ ಸ್ಥಗಿತ
ಮುಂಬೈ
ನಯನಾ ರಾಜೀವ್
|

Updated on:Jul 06, 2026 | 10:10 AM

Share

ಮುಂಬೈ, ಜುಲೈ 06: ವಾಣಿಜ್ಯ ನಗರಿ ಮುಂಬೈನಲ್ಲಿ ಭಾನುವಾರ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆ(Rain)ಗೆ ಇಡೀ ಜನಜೀವನ ತತ್ತರಗೊಂಡಿದೆ. ಮಂಖುರ್ಡ್ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನಾಲ್ಕು ಅಂತಸ್ತಿನ ಕಟ್ಟಡವೊಂದರ ಭಾಗ ಕುಸಿದು ಬಿದ್ದು ಆರು ಜನರು ಸಾವನ್ನಪ್ಪಿದ್ದಾರೆ. ನಗರದಾದ್ಯಂತ ರಸ್ತೆಗಳು ಜಲಾವೃತಗೊಂಡಿದ್ದು, ಮರಗಳು ಉರುಳಿಬಿದ್ದು ಅಪಾರ ಹಾನಿ ಸಂಭವಿಸಿದೆ. ಹವಾಮಾನ ಇಲಾಖೆ ತೀವ್ರ ಮಳೆಯ ಮುನ್ನೆಚ್ಚರಿಕೆ ನೀಡಿರುವುದರಿಂದ ಮುಂಬೈ, ಥಾಣೆ, ಪಾಲ್ಘಢ ಮತ್ತು ಪುಣೆ ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕಟ್ಟಡ ಕುಸಿತಕ್ಕೆ ಆರು ಬಲಿ ಭಾನುವಾರ ರಾತ್ರಿ 8.30 ರ ಸುಮಾರಿಗೆ ಮಂಖುರ್ಡ್‌ನ ಜನತಾ ನಗರದಲ್ಲಿರುವ ನಾಲ್ಕು ಅಂತಸ್ತಿನ ಚಾಲ್ ಕಟ್ಟಡದ ಒಂದು ಭಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಪರಿಣಾಮವಾಗಿ ಹಲವು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡರು. ಮುಂಬೈ ಅಗ್ನಿಶಾಮಕ ದಳ (MFB), ಮುಂಬೈ ಪೊಲೀಸ್ ಮತ್ತು ಬಿಎಂಸಿ (BMC) ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ ಭಾರಿ ರಕ್ಷಣಾ ಕಾರ್ಯಾಚರಣೆ ನಡೆಸಿದರಾದರೂ, ಆರು ಜನರು ಈ ದುರಂತದಲ್ಲಿ ಸಾವನ್ನಪ್ಪಿದ್ದಾರೆ.

ಉರುಳಿಬಿದ್ದ ಮರಗಳು, ವಿಮಾನ ಸೇವೆಗೂ ಅಡ್ಡಿ ಮುಂಬೈನಾದ್ಯಂತ ಹಲವೆಡೆ ಮರಗಳು ಬುಡಸಮೇತ ಉರುಳಿಬಿದ್ದಿವೆ. ಕುರ್ಲಾ ಪ್ರದೇಶದಲ್ಲಿ ಅಂಗಡಿಯೊಂದರ ಮೇಲೆ ಮರ ಬಿದ್ದು 63 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಬಾಂದ್ರಾ ಮತ್ತು ವರ್ಲಿ ಭಾಗಗಳಲ್ಲೂ ಕಾರು ಹಾಗೂ ರಸ್ತೆಗಳ ಮೇಲೆ ಮರಗಳು ಬಿದ್ದಿದ್ದು, ಕೆಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಇನ್ನು ಮುಂಬೈ ವಿಮಾನ ನಿಲ್ದಾಣದಲ್ಲೂ ಭಾರೀ ಮಳೆಯಿಂದಾಗಿ ಸುಮಾರು ಒಂದು ಗಂಟೆಗಳ ಕಾಲ ವಿಮಾನಗಳ ಹಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು.

ಮುಂಬೈ-ಪುಣೆ ರೈಲು ಕಾರಿಡಾರ್‌ನಲ್ಲಿ ಭೂಕುಸಿತ ಮಹಾರಾಷ್ಟ್ರದ ಅತ್ಯಂತ ಜನನಿಬಿಡ ರೈಲ್ವೆ ಮಾರ್ಗಗಳಲ್ಲಿ ಒಂದಾದ ಮುಂಬೈ-ಪುಣೆ ರೈಲು ಕಾರಿಡಾರ್ ಸೋಮವಾರ ಮುಂಜಾನೆ ಸಂಪೂರ್ಣ ಬಂದ್ ಆಗಿದೆ. ಕರ್ಜತ್-ಲೋನಾವಾಲ ಭೋರ್ ಘಾಟ್ ವಿಭಾಗದ ಠಾಕೂರ್ವಾಡಿ ಮತ್ತು ಮಂಕಿ ಹಿಲ್ ಬಳಿ ನಿರಂತರ ಮಳೆಯಿಂದಾಗಿ ಭಾರಿ ಭೂಕುಸಿತ ಸಂಭವಿಸಿದೆ.

ಬೆಟ್ಟದ ಮಣ್ಣು ಮತ್ತು ಬಂಡೆಗಳು ರೈಲ್ವೆ ಹಳಿಗಳ ಮೇಲೆ ಬಿದ್ದಿದ್ದರಿಂದ ಘಾಟ್ ವಿಭಾಗದ ಮೂರೂ ರೈಲ್ವೆ ಮಾರ್ಗಗಳು ಬಂದ್ ಆಗಿವೆ. ಇದರಿಂದಾಗಿ ಕೇಂದ್ರ ರೈಲ್ವೆ ಇಲಾಖೆಯು ಹಲವಾರು ಪ್ರಯಾಣಿಕ ಹಾಗೂ ದೂರದ ರೈಲುಗಳನ್ನು ರದ್ದುಗೊಳಿಸಿದೆ ಮತ್ತು ಮಾರ್ಗ ಬದಲಾವಣೆ ಮಾಡಿದೆ. ಹಳಿಗಳ ಮೇಲಿನ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ಯುದ್ಧೋಪಾದಿಯಲ್ಲಿ ಸಾಗುತ್ತಿದೆ.

ಮತ್ತಷ್ಟು ಓದಿ: Karnataka Weather Forecast: ಕರಾವಳಿಯಲ್ಲಿ ಮಳೆಯ ಅಬ್ಬರ! 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಆರೆಂಜ್ ಅಲರ್ಟ್ ಘೋಷಣೆ ಕಳೆದ 24 ಗಂಟೆಗಳಲ್ಲಿ ಮುಂಬೈನ ಹಲವು ಭಾಗಗಳಲ್ಲಿ 200 ಮಿ.ಮೀ ನಿಂದ 300 ಮಿ.ಮೀ ನಷ್ಟು ದಾಖಲೆ ಪ್ರಮಾಣದ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಮುಂಬೈಗೆ ‘ಆರೆಂಜ್ ಅಲರ್ಟ್’ ಘೋಷಿಸಿದ್ದು, ಮುಂದಿನ 24 ಗಂಟೆಗಳಲ್ಲಿ ಗಂಟೆಗೆ 60-70 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಹಾಗೂ ಅತಿ ಹೆಚ್ಚು ಮಳೆಯಾಗುವ ಮುನ್ನೆಚ್ಚರಿಕೆ ನೀಡಿದೆ. ಅಗತ್ಯವಿದ್ದರೆ ಮಾತ್ರ ಸಾರ್ವಜನಿಕರು ಹೊರಗೆ ಹೋಗುವಂತೆ ಮತ್ತು ರೈಲು ನಿಲ್ದಾಣಗಳಿಗೆ ಹೋಗುವ ಮುನ್ನ ರೈಲುಗಳ ಸ್ಥಿತಿಯನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:07 am, Mon, 6 July 26

Follow Us
ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು
ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
ಸಿಪಿ ಯೋಗೇಶ್ವರ್ ಪುತ್ರನಿಗೆ ಶುಭ ಹಾರೈಸಿದ ಸಿಎಂ ಹೇಳಿದ್ದೇನು? ವಿಡಿಯೋ ನೋಡಿ
ಸಿಪಿ ಯೋಗೇಶ್ವರ್ ಪುತ್ರನಿಗೆ ಶುಭ ಹಾರೈಸಿದ ಸಿಎಂ ಹೇಳಿದ್ದೇನು? ವಿಡಿಯೋ ನೋಡಿ
ಕೆ ಸುಧಾಕರ್‌ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ?
ಕೆ ಸುಧಾಕರ್‌ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ?
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?