Raigad Landslide: ರಾಯಘಡದಲ್ಲಿ ಭೂಕುಸಿತಕ್ಕೆ 36 ಬಲಿ; ಸಾವನ್ನಪ್ಪಿದವರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಮೋದಿ

ಮುಂಬೈ: ಮಹಾರಾಷ್ಟ್ರದ ರಾಯಘಡ (Raigad Landslide) ಜಿಲ್ಲೆಯ ಮೂರು ಕಡೆ ಭಾರೀ ಭೂಕುಸಿತ ಸಂಭವಿಸಿದ್ದು, 36 ಜನರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ (Maharashtra Rain) ಇನ್ನೂ 30 ಜನರು ನಾಪತ್ತೆಯಾಗಿದ್ದು, ಮಣ್ಣಿನಡಿ ಸಿಲುಕಿದ್ದ 15 ಜನರನ್ನು ರಕ್ಷಿಸಲಾಗಿದೆ. ಉಳಿದವರಿಗಾಗಿ ಎನ್‌ಡಿಆರ್‌ಎಫ್‌ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕರೆ ಮಾಡಿ ಅಲ್ಲಿನ ಪರಿಸ್ಥಿತಿ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಮಾಹಿತಿ ಪಡೆದಿದ್ದು, ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಸಹಾಯ ನೀಡುವುದಾಗಿ ತಿಳಿಸಿದ್ದಾರೆ. […]

Raigad Landslide: ರಾಯಘಡದಲ್ಲಿ ಭೂಕುಸಿತಕ್ಕೆ 36 ಬಲಿ; ಸಾವನ್ನಪ್ಪಿದವರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಮೋದಿ
ರಾಯಘಡದಲ್ಲಿ ಪ್ರವಾಹದ ದೃಶ್ಯ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 23, 2021 | 5:32 PM

ಮುಂಬೈ: ಮಹಾರಾಷ್ಟ್ರದ ರಾಯಘಡ (Raigad Landslide) ಜಿಲ್ಲೆಯ ಮೂರು ಕಡೆ ಭಾರೀ ಭೂಕುಸಿತ ಸಂಭವಿಸಿದ್ದು, 36 ಜನರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ (Maharashtra Rain) ಇನ್ನೂ 30 ಜನರು ನಾಪತ್ತೆಯಾಗಿದ್ದು, ಮಣ್ಣಿನಡಿ ಸಿಲುಕಿದ್ದ 15 ಜನರನ್ನು ರಕ್ಷಿಸಲಾಗಿದೆ. ಉಳಿದವರಿಗಾಗಿ ಎನ್‌ಡಿಆರ್‌ಎಫ್‌ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕರೆ ಮಾಡಿ ಅಲ್ಲಿನ ಪರಿಸ್ಥಿತಿ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಮಾಹಿತಿ ಪಡೆದಿದ್ದು, ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಸಹಾಯ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಭೂಕುಸಿತದಿಂದ ಸಾವನ್ನಪ್ಪಿರುವ 36 ಜನರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ರಾಯಘಡದ ಭೂಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಈ ಶಕ್ತಿಯನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ. ಈ ದುರಂತದಲ್ಲಿ ಗಾಯಗೊಂಡಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮಹಾರಾಷ್ಟ್ರದ ಪ್ರವಾಹಪೀಡಿತ ಸ್ಥಳಗಳಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನೂ ಕೇಂದ್ರ ಸರ್ಕಾರ ಕಲ್ಪಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಮಹಾರಾಷ್ಟ್ರದ ರಾಯಘಡದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ಪರಿಹಾರ ನಿಧಿಯಿಂದ ಹೆಚ್ಚುವರಿಯಾಗಿ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿಗಳ ಕಚೇರಿ ಘೋಷಿಸಿದೆ. ಹಾಗೇ, ಭೂಕುಸಿತದಲ್ಲಿ ಗಾಯಗೊಂಡಿರುವವರಿಗೆ 50 ಸಾವಿರ ರೂ. ನೀಡುವುದಾಗಿ ಘೋಷಿಸಲಾಗಿದೆ.

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು, ತಗ್ಗು ಪ್ರದೇಶದ ಮತ್ತು ಸೂಕ್ಷ್ಮ ವಲಯದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗುತ್ತಿದೆ. ಭೂಕುಸಿತ ಮತ್ತು ಭಾರೀ ಪ್ರವಾಹದಿಂದ ನೂರಾರು ಜನರು ಸಿಲುಕಿಕೊಂಡಿದ್ದು, ಅವರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲು ಹೆಲಿಕಾಪ್ಟರ್​ಗಳನ್ನು ಬಳಸಲಾಗುತ್ತಿದೆ. ರಾಯಘಡದಿಂದ ಹೆಲಿಕಾಪ್ಟರ್ ಮೂಲಕ ಜನರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮುಂಬೈ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇನ್ನೂ ನಾಲ್ಕೈದು ದಿನಗಳ ಭಾರೀ ಮಳೆಯಾಗುವುದರಿಂದ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಇದನ್ನೂ ಓದಿ: Mumbai Rains: ಮಹಾರಾಷ್ಟ್ರದ ರಾಯಘಡದಲ್ಲಿ ಭಾರೀ ಭೂಕುಸಿತ; ಮಣ್ಣಿನಡಿ ಸಿಲುಕಿ 36 ಜನ ಸಾವು

Uttara Kannada Rain: ಅಂಕೋಲದಲ್ಲಿ ಪ್ರವಾಹ ಭೀತಿ; ಹಿಚ್ಕಡ ಗ್ರಾಮದಲ್ಲಿ ಕಣ್ಣೆದುರೇ ಕುಸಿದು ಬಿತ್ತು ಎರಡಂತಸ್ತಿನ ಮನೆ

(Mumbai Rains Live Updates PM Narendra Modi announced Rs 2 lakh each to kin Family who Died in Raigad landslide)

Published On - 5:25 pm, Fri, 23 July 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್