ಮುಂಬೈ: ಕಳೆದೊಂದು ವಾರದಿಂದ ದಕ್ಷಿಣ ಭಾರತದಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕ, ಕೇರಳ ಸೇರಿದಂತೆ ಹಲವೆಡೆ ವರುಣನ ಆರ್ಭಟ (Weather Today) ಹೆಚ್ಚಾಗಿದೆ. ಪಕ್ಕದ ರಾಜ್ಯವಾದ ಮಹಾರಾಷ್ಟ್ರದಲ್ಲೂ (Maharashtra Rain) ಕಳೆದೆರಡು ವಾರಗಳಿಂದ ಮಳೆ ಸುರಿಯುತ್ತಿದೆ. ಮುಂಬೈನಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಜನಜೀವ ಅಸ್ತವ್ಯಸ್ತವಾಗಿದೆ. ಮಳೆಯಿಂದ ಮುಂಬೈನಲ್ಲಿ (Mumbai Rains) ಬಸ್, ರೈಲು ಸಂಚಾರ ಸ್ಥಗಿತಗೊಂಡಿದೆ. ಅಂಧೇರಿಯಲ್ಲಿ ಮಹಿಳೆಯೊಬ್ಬಳು ಮ್ಯಾನ್ಹೋಲ್ನಲ್ಲಿ ಕೊಚ್ಚಿಹೋಗಿರುವ ಘಟನೆಯೂ ನಡೆದಿದೆ.
ಮುಂಬೈ, ಥಾಣೆ, ನವಿ ಮುಂಬೈ, ಪಲ್ಘಾರ್ ಮುಂತಾದ ಪ್ರದೇಶದಲ್ಲಿ ಮಳೆ ಹೆಚ್ಚಾಗಿದೆ. ಮಹಾರಾಷ್ಟ್ರದ ಬಹುತೇಕ ಕಡೆ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯ ಆರ್ಭಟವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬೈ ಸುತ್ತಮುತ್ತಲಿನ ರಸ್ತೆಗಳೆಲ್ಲ ನದಿಗಳಂತಾಗಿದ್ದು, ಜನರು ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಪರದಾಡುತ್ತಿದ್ದಾರೆ. ಅಂಧೇರಿ, ಚೆಂಬೂರ್, ಸಿಯೋನ್, ಮುಂಬೈನಲ್ಲಿ ರಸ್ತೆಗಳಲ್ಲಿ ನೀರು ತುಂಬಿ ಬಸ್ ಸಂಚಾರ ವ್ಯತ್ಯಯವಾಗಿದೆ.
ಮುಂಬೈನ ಮಳೆಯ ಅವಾಂತರಗಳ ವಿಡಿಯೋಗಳು ಕೂಡ ವೈರಲ್ ಆಗುತ್ತಿವೆ. ಮುಂದಿನ 24 ಗಂಟೆಗಳ ಕಾಲ ಮುಂಬೈನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಇನ್ನೂ ಮೂರ್ನಾಲ್ಕು ದಿನ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮಳೆಯಿಂದ ಮುಂಬೈನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬಹುತೇಕ ರಸ್ತೆಗಲ್ಲಿ ನೀರು ತುಂಬಿರುವುದರಿಂದ ವಾಹನ ಸಂಚಾರ ಅಸಾಧ್ಯವಾಗಿದೆ. ಬಸ್ ಮತ್ತು ರೈಲು ಸಂಚಾರದ ಮಾರ್ಗವೂ ಬದಲಾಗಿದೆ.
#WATCH | Maharashtra: Dahisar area of Mumbai waterlogged following heavy rainfall in the city this morning. pic.twitter.com/OdA7YAa14l
— ANI (@ANI) July 16, 2021
ಪೂರ್ವ ಅರಬ್ಬಿ ಸಮುದ್ರದಲ್ಲಿ ಮಳೆ ಸುರಿಯುತ್ತಿರುವುದರಿಂದ ದಕ್ಷಿಣ ಭಾರತದಲ್ಲಿ ಮಳೆ ಹೆಚ್ಚಾಗಿದೆ. ಕರ್ನಾಟಕದಲ್ಲೂ ಕಳೆದ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದ್ದು, ಇಂದಿನಿಂದ ಜು.18ರವರೆಗೆ ವರುಣನ ಆರ್ಭಟ ಮುಂದುವರೆಯಲಿದೆ. ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ.
#WATCH | Maharashtra: Parts of Mumbai face waterlogging, following heavy rainfall this morning. Visuals from Wadala
Regional Meteorological Centre, Mumbai predicts “light to moderate rain in city & suburbs with possibility of heavy rainfall at isolated places” for next 24 hours. pic.twitter.com/wPgOZUukms
— ANI (@ANI) July 16, 2021
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 18ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
#MumbaiRains condition of Dahisar. Can’t drive further pic.twitter.com/Aai8ltGZER
— Vivek G (@Vivek_BG) July 16, 2021
ಮಹಾರಾಷ್ಟ್ರದ ಮುಂಬೈನ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಜನರು ಎತ್ತರದ ಪ್ರದೇಶಗಳಿಗೆ ತೆರಳುವಂತೆ ಮುಂಬೈ ಮಹಾನಗರ ಪಾಲಿಕೆ ಸೂಚನೆ ನೀಡಿದೆ. ಅಂಧೇರಿಯಲ್ಲಿ ಮಹಿಳೆಯೊಬ್ಬರು ಕಾಲು ಜಾರಿ ಮ್ಯಾನ್ಹೋಲ್ಗೆ ಬಿದ್ದು, ಕೊಚ್ಚಿಹೋಗಿದ್ದಾರೆ. ಅವರ ದೇಹವಿನ್ನೂ ಪತ್ತೆಯಾಗಿಲ್ಲ.
ಇದನ್ನೂ ಓದಿ: Crime News: ಮಹಾರಾಷ್ಟ್ರದಲ್ಲಿ ಮನೆಯೊಳಗೆ ಜನರೇಟರ್ ಸ್ಫೋಟ; ಒಂದೇ ಕುಟುಂಬದ 6 ಜನ ಸಾವು
(Mumbai Rains LIVE Updates Heavy Rains in Maharashtra Trains and Buses Affected Weather Today)