ಮುಂಬೈಯಲ್ಲಿ 739 ಹೊಸ ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಪ್ರಕರಣಗಳ ಸಂಖ್ಯೆ 1,081ಕ್ಕೆ ಏರಿಕೆ

ಧಾರಾವಿ ಕೊಳಚೆಗೇರಿಯಲ್ಲಿ ಹೊಸ 10 ಪ್ರಕರಣಗಳು ಪತ್ತೆಯಾಗಿದೆ ಎಂದು ಬಿಎಂಸಿ ಅಧಿಕಾರಿಗಳು ಹೇಳಿದ್ದಾರೆ. ಈ ಪ್ರಕರಣಗಳೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 37ಕ್ಕೇರಿದೆ. ಮೇ ತಿಂಗಳ ಆರಂಭ ವಾರದಲ್ಲಿ ಇಲ್ಲಿ ಯಾವುದೇ...

ಮುಂಬೈಯಲ್ಲಿ 739 ಹೊಸ ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಪ್ರಕರಣಗಳ ಸಂಖ್ಯೆ 1,081ಕ್ಕೆ ಏರಿಕೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 01, 2022 | 8:33 PM

ಮುಂಬೈ: ಮಹಾರಾಷ್ಟ್ರದಲ್ಲಿ ಮತ್ತೆ ಕೊವಿಡ್ (Covid-19) ಪ್ರಕರಣ ಏರಿಕೆ ಆಗಿದ್ದು ಬುಧವಾರ 1,081 ಹೊಸ ಪ್ರಕರಣಗಳು ವರದಿ ಆಗಿವೆ. ಫೆಬ್ರುವರಿ 24ರಲ್ಲಿ 1,124 ಪ್ರಕರಣಗಳೊಂದಿಗೆ ಅತೀ ಹೆಚ್ಚು ಕೊವಿಡ್ ಪ್ರಕರಣಗಳು ವರದಿ ಆಗಿದ್ದು, ಇದಾದ ನಂತರ ಇವತ್ತು ಅತೀ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ ಮುಂಬೈಯಲ್ಲಿ 739 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಏತನ್ಮಧ್ಯೆ, ಬೃಹನ್ಮುಂಬೈ ಕಾರ್ಪೊರೇಷನ್ (Brihanmumbai Municipal Corporation) ಕಮಿಷನರ್ ಇಕ್ಬಾಲ್ ಸಿಂಗ್ ಚಹಾಲ್ ಅವರು ಸೋಂಕು ಪತ್ತೆ ಮತ್ತು ಲಸಿಕೆ ಪ್ರಕ್ರಿಯೆಗಳನ್ನು ಹೆಚ್ಚಿಸುವಂತೆ ಆದೇಶಿಸಿದ್ದಾರೆ. ಮುಂಗಾರು ಸನಿಹವಾಗುತ್ತಿದ್ದಂತೆ ರೋಗ ಲಕ್ಷಣಗಳಿರುವ ಕೊವಿಡ್-19 ಪ್ರಕರಣಗಳು ಹೆಚ್ಚುವ ಸಾಧ್ಯತೆ ಇದೆ ಎಂದು ಕಮಿಷನರ್ ಹೇಳಿದ್ದಾರೆ.

ಧಾರಾವಿ ಕೊಳಚೆಗೇರಿಯಲ್ಲಿ 10 ಪ್ರಕರಣಗಳು ಪತ್ತೆ

ಧಾರಾವಿ ಕೊಳಚೆಗೇರಿಯಲ್ಲಿ ಹೊಸ 10 ಪ್ರಕರಣಗಳು ಪತ್ತೆಯಾಗಿದೆ ಎಂದು ಬಿಎಂಸಿ ಅಧಿಕಾರಿಗಳು ಹೇಳಿದ್ದಾರೆ. ಈ ಪ್ರಕರಣಗಳೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 37ಕ್ಕೇರಿದೆ. ಮೇ ತಿಂಗಳ ಆರಂಭ ವಾರದಲ್ಲಿ ಇಲ್ಲಿ ಯಾವುದೇ ಕೊವಿಡ್ ಪ್ರಕರಣಗಳು ವರದಿ ಆಗಿರಲಿಲ್ಲ. ಆದರೆ ಮೇ 15ರ ನಂತರ ಪ್ರಕರಣಗಳ ಸಂಖ್ಯೆ ಧುತ್ತನೆ ಏರಿದೆ. ಕೊವಿಡ್ ಸಾಂಕ್ರಾಮಿಕ ಹಬ್ಬಿದ ನಂತರ ಧಾರಾವಿಯಲ್ಲಿ ಇಲ್ಲಿಯವರೆಗೆ 8,707 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 8,252 ಮಂದಿ ಚೇತರಿಸಿಕೊಂಡಿದ್ದು, 419 ಮಂದಿ ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಮಂಗಳವಾರ 711 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಮವಾರ 431 ಸೋಂಕುಗಳು ದಾಖಲಾಗಿವೆ. ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 4,032 ಆಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಯಾವುದೇ ಕೊವಿಡ್ ಸಂಬಂಧಿತ ಸಾವುಗಳು ವರದಿಯಾಗಿಲ್ಲ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್