AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ಪಾಕ್ ಮೇಲೆ ಏರ್​ಸ್ಟ್ರೈಕ್ ಬೆನ್ನಲ್ಲೇ ಮುಂಬೈ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ

ಮುಂಬೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಇಂಡಿಗೋ ವಿಮಾನದಲ್ಲಿ ಸ್ಫೋಟಕಗಳನ್ನು ಇಟ್ಟಿರುವುದಾಗಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಭಾರತ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದ ನಂತರ ಇದು ನಡೆದಿದೆ. ಅಧಿಕಾರಿಗಳು ತುರ್ತು ಕ್ರಮ ಕೈಗೊಂಡಿದ್ದು, ಭದ್ರತಾ ಸಂಸ್ಥೆಗಳು ಪರಿಶೀಲನೆ ನಡೆಸುತ್ತಿವೆ.

Bomb Threat:  ಪಾಕ್ ಮೇಲೆ ಏರ್​ಸ್ಟ್ರೈಕ್ ಬೆನ್ನಲ್ಲೇ ಮುಂಬೈ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ
ಇಂಡಿಗೋ ವಿಮಾನ
ನಯನಾ ರಾಜೀವ್
|

Updated on:May 07, 2025 | 9:50 AM

Share

ಮುಂಬೈ, ಮೇ 07: ಇಂಡಿಗೋ(IndiGo) ವಿಮಾನವನ್ನು ಸ್ಫೋಟಿಸುವುದಾಗಿ ಎಚ್ಚರಿಕೆ ಬಂದಿದೆ. ಅತ್ತ ಪಾಕಿಸ್ತಾನ(Pakistan)ದ ಮೇಲೆ ಭಾರತ ದಾಳಿ ಮಾಡಿದ ಬಳಿಕ ಈ ಘಟನೆ ನಡೆದಿದೆ. ಮುಂಬೈ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದ್ದು, ಇಂಡಿಗೋ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಕರೆ ಬಂದಿದೆ.

ಭಾರತ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದ ನಂತರ ಇದು ನಡೆದಿದೆ. ಅಧಿಕಾರಿಗಳು ತುರ್ತು ಕ್ರಮ ಕೈಗೊಂಡಿದ್ದು, ಭದ್ರತಾ ಸಂಸ್ಥೆಗಳು ಪರಿಶೀಲನೆ ನಡೆಸುತ್ತಿವೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿ ಅಮಾಯಕರನ್ನು ಹತ್ಯೆ ಮಾಡಿದ್ದರು. ಅದಕ್ಕೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನ 9 ಉಗ್ರರ ನೆಲೆ ಮೇಲೆ ದಾಳಿ ನಡೆಸಿದೆ. 100ಕ್ಕೂ ಅಧಿಕ ಉಗ್ರರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ ಯಾವುದೇ ಅಧಿಕೃತ ಹೇಳಿಕೆಗಳು ಇನ್ನೂ ಹೊರಬಂದಿಲ್ಲ.

ಇದನ್ನೂ ಓದಿ
Image
ಜೈ ಹಿಂದ್, ಜಸ್ಟೀಸ್ ಸರ್ವ್ಡ್: ಆಪರೇಷನ್ ಬೆನ್ನಲ್ಲೇ ಭಾರತೀಯ ಸೇನೆ ಪೋಸ್ಟ್
Image
ಆಪರೇಷನ್ ಸಿಂಧೂರ್: ಪ್ರಧಾನಿ ಮೋದಿ ನಿರಂತರ ಮೇಲ್ವಿಚಾರಣೆ
Image
ಆಪರೇಷನ್ ಸಿಂಧೂರ್ ಎಂದರೇನು? ಈ ದಾಳಿಗೆ ಭಾರತ ಇದೇ ಹೆಸರಿಟ್ಟಿದ್ದೇಕೆ?
Image
ಆಪರೇಷನ್ ಸಿಂಧೂರ್, ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ಪ್ರತೀಕಾರದ ದಾಳಿ

ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೊಯ್ಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ಗೆ ಸಂಬಂಧಿಸಿದ ಒಂಬತ್ತು ನೆಲೆಗಳನ್ನು ಗುರಿಯಾಗಿಸಿಕೊಂಡಿತ್ತು.

ಆಪರೇಷನ್ ಸಿಂಧೂರ್ ನಂತರ, ಭಾರತೀಯ ವಾಯುಪ್ರದೇಶವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ ಮತ್ತು ಪರಿಸ್ಥಿತಿಯನ್ನು ರಾಷ್ಟ್ರೀಯ ತುರ್ತುಸ್ಥಿತಿ ಎಂದು ಕರೆದವು. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಬೆಳವಣಿಗೆಗಳನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಸರ್ಕಾರಿ ಮೂಲಗಳ ಪ್ರಕಾರ ಪ್ರಯಾಣಿಕರ ಸುರಕ್ಷತೆಯು ಪ್ರಮುಖ ಆದ್ಯತೆಯಾಗಿದೆ ಎಂದು ಒತ್ತಿ ಹೇಳುತ್ತದೆ.

ಮತ್ತಷ್ಟು ಓದಿ: Operation Sindoor: ಆಪರೇಷನ್ ಸಿಂಧೂರ್ ಪರಿಣಾಮ, ಭಾರತದ ವಿವಿಧೆಡೆ ವಿಮಾನ ಸಂಚಾರ ವ್ಯತ್ಯಯ; ಇಲ್ಲಿದೆ ಮಾಹಿತಿ

ಶ್ರೀನಗರ, ಜಮ್ಮು, ಅಮೃತಸರ, ಲೇಹ್, ಚಂಡೀಗಢ ಮತ್ತು ಧರ್ಮಶಾಲಾಗೆ ಹೋಗುವ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ.   ಇಂದು ಶ್ರೀನಗರ ವಿಮಾನ ನಿಲ್ದಾಣದಿಂದ ಯಾವುದೇ ಪ್ರಯಾಣಿಕ ವಿಮಾನಗಳು ಕಾರ್ಯನಿರ್ವಹಿಸುವುದಿಲ್ಲ. ಇಂದಿನ ಎಲ್ಲಾ ವಿಮಾನಗಳನ್ನು ರದ್ದುಪಡಿಸಲಾಗಿದೆ. ಏತನ್ಮಧ್ಯೆ, ಇಂಡಿಗೊ ಏರ್​ಲೈನ್ಸ್ ಕೂಡ ಪ್ರಯಾಣ ಪ್ರಕಟಣೆ ಹೊರಡಿಸಿದೆ. ಶ್ರೀನಗರ, ಜಮ್ಮು, ಅಮೃತಸರ, ಲೇಹ್, ಚಂಡೀಗಢ ಮತ್ತು ಧರ್ಮಶಾಲಾಕ್ಕೆ ಹೋಗುವ ಮತ್ತು ಅಲ್ಲಿಂದ ಹೊರಡುವ ವಿಮಾನಗಳ ಮೇಲೆ ಪರಿಣಾಮ ಬೀರಿದೆ ಎಂದು ಇಂಡಿಗೋ ಅಧಿಕೃತ ಪ್ರಕಟಣೆ ತಿಳಿಸಿದೆ.

ವಿಮಾನ ನಿಲ್ದಾಣ ತಲುಪುವ ಮೊದಲು ಪ್ರಯಾಣಿಕರು ಇಂಡಿಗೊದ ವೆಬ್‌ಸೈಟ್‌ನಲ್ಲಿ ಅಪ್​ಡೇಟ್​​ಗಳನ್ನು ತಿಳಿದುಕೊಮಡು ಬರಬೇಕು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಬಿಕಾನೆರ್‌ಗೆ ತೆರಳಿದ ಮತ್ತು ಅಲ್ಲಿಂದ ಹೊರಡುವ ವಿಮಾನಗಳ ಮೇಲೆ ವೈಮಾನಿಕ ನಿರ್ಬಂಧಗಳು ಪರಿಣಾಮ ಬೀರುತ್ತವೆ ಎಂದು ಇಂಡಿಗೋ ಏರ್‌ಲೈನ್ಸ್ ಎಕ್ಸ್​ ಪೋಸ್ಟ್​​ನಲ್ಲಿ ಮಾಹಿತಿ ನೀಡಿದೆ. ವಿಮಾನ ನಿಲ್ದಾಣಕ್ಕೆ ಬರುವ ಮೊದಲು ಏರ್​ಲೈನ್ಸ್​ನ ಅಧಿಕೃತ ವೆಬ್​ಸೈಟ್​​ನಲ್ಲಿ ಪರಿಶೀಲಿಸಲು ವಿನಂತಿಸುತ್ತೇವೆ . ಮಂಗಳವಾರ ಸಂಜೆ ಭಾರತ ಸರ್ಕಾರವು ಪಾಕಿಸ್ತಾನ ಗಡಿಯಲ್ಲಿ ವೈಮಾನಿಕ ಕಾರ್ಯಾಚರಣೆಗಾಗಿ ನೋಟಾಮ್ (NOTAM) ಹೊರಡಿಸಿತ್ತು ಎಂದು ಇಂಡಿಗೋ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:39 am, Wed, 7 May 25

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?