AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಅಪ್ಪ; ಡಿಎನ್​ಎ ಪರೀಕ್ಷೆಯಲ್ಲಿ ಸತ್ಯ ಬಯಲು

20 ವರ್ಷದ ಮಾನಸಿಕ ಅಸ್ವಸ್ಥ ಯುವತಿಯೊಬ್ಬಳು ಗರ್ಭಿಣಿಯಾಗಿದ್ದಳು. ಆಕೆಯ ಮೇಲೆ ಅತ್ಯಾಚಾರ ನಡೆದಿತ್ತು. ಆದರೆ, ಆಕೆಗೆ ತನ್ನ ಮೇಲೆ ಈ ಕೃತ್ಯ ನಡೆಸಿದವರನ್ನು ಗುರುತಿಸಲು ಸಾಧ್ಯವಿರಲಿಲ್ಲ. ಹೀಗಾಗಿ, ಅನುಮಾನ ಬಂದ ಒಟ್ಟು 17 ಜನರ ಡಿಎನ್​ಎ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ ಓರ್ವ ವ್ಯಕ್ತಿಯ ಡಿಎನ್​ಎ ಆ ಯುವತಿಯ ಗರ್ಭದಲ್ಲಿರುವ ಮಗುವಿನ ಡಿಎನ್​ಎಗೆ ಹೊಂದಿಕೆಯಾಗಿದೆ. ಆ ಪಾಪಿ ಬೇರಾರೂ ಅಲ್ಲ, ಆ ಯುವತಿಗೆ ಜನ್ಮ ನೀಡಿದ ಅಪ್ಪ! ಆ ಯುವತಿಯ ಅಪ್ಪನೇ ಆಕೆಯ ಮಗುವಿಗೂ ಅಪ್ಪ ಎಂಬ ವಿಷಯ ತಿಳಿದು ವೈದ್ಯರು ಹಾಗೂ ಪೊಲೀಸರಿಗೂ ಆಘಾತವಾಗಿದೆ.

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಅಪ್ಪ; ಡಿಎನ್​ಎ ಪರೀಕ್ಷೆಯಲ್ಲಿ ಸತ್ಯ ಬಯಲು
Pregnant Image Credit source: iStock
ಸುಷ್ಮಾ ಚಕ್ರೆ
|

Updated on: Feb 05, 2026 | 9:47 PM

Share

ಮುಂಬೈ, ಫೆಬ್ರವರಿ 5: 9 ತಿಂಗಳ ತುಂಬು ಗರ್ಭಿಣಿಯಾದ (Pregnant) 20 ವರ್ಷದ ಯುವತಿ ಗರ್ಭಿಣಿಯಾಗಿದ್ದಳು. ಆದರೆ, ಆಕೆಗೆ ತನ್ನ ಮಗುವಿಗೆ ತಂದೆ ಯಾರೆಂದೇ ಗೊತ್ತಿರಲಿಲ್ಲ. ಏಕೆಂದರೆ, ಆಕೆ ಮಾನಸಿಕ ಅಸ್ವಸ್ಥೆಯಾಗಿದ್ದಳು. ಹೀಗಾಗಿ, ತನ್ನ ಜೊತೆ ಯಾರು ಕೆಟ್ಟದಾಗಿ ವರ್ತಿಸಿದರು, ತನ್ನ ದೇಹದಲ್ಲಿ ಯಾವೆಲ್ಲ ಬದಲಾವಣೆಯಾಗುತ್ತಿದೆ, ತಾನು ತಾಯಿಯಾಗುತ್ತಿದ್ದೇನೆ ಎಂಬಿತ್ಯಾದಿ ಯಾವ ವಿಷಯವೂ ಆಕೆಗೆ ಗೊತ್ತಾಗುತ್ತಿರಲಿಲ್ಲ. ಹೀಗಾಗಿ, ಕಳೆದ 4 ತಿಂಗಳಿಂದ ಆಕೆಯ ಮೇಲೆ ಅತ್ಯಾಚಾರ ನಡೆಸಿದವನನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಲೇ ಇದ್ದರು. ಇದಕ್ಕೆ ಕೊನೆಯ ಆಯ್ಕೆಯೆಂಬಂತೆ ಆ ಯುವತಿಯ ಸುತ್ತಮುತ್ತಲಿನ ಮನೆಯವರು, ಸಂಬಂಧಿಕರು ಹೀಗೆ ಒಟ್ಟು 17 ಗಂಡಸರ ಡಿಎನ್​ಎ ಪರೀಕ್ಷೆ ನಡೆಸಲಾಗಿತ್ತು. ಆದರೆ, ಅದರಿಂದ ಬಂದ ಫಲಿತಾಂಶ ನೋಡಿ ಪೊಲೀಸರು ಮಾತ್ರವಲ್ಲದೆ ಆ ಯುವತಿಯ ಕುಟುಂಬದವರೂ ಶಾಕ್ ಆಗಿದ್ದಾರೆ.

ಏಕೆಂದರೆ, ಆ ಯುವತಿಯ ತಂದೆಯೇ ಆಕೆಯ ಮೇಲೆ ಅತ್ಯಾಚಾರ ನಡೆಸಿ, ಗರ್ಭ ಧರಿಸಲು ಕಾರಣನಾದ ಪಾಪಿ. ಮಾನಸಿಕ ಅಸ್ವಸ್ಥಳಾದ ಆತನ ಮಗಳಿಗೆ ಕಿವಿ ಕೇಳುವುದಿಲ್ಲ ಹಾಗೂ ಮಾತನಾಡಲು ಕೂಡ ಬರುವುದಿಲ್ಲ. ಇದನ್ನೇ ದುರುಪಯೋಗ ಮಾಡಿಕೊಂಡ ಆತ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ. ಬಳಿಕ ಈ ವಿಷಯ ಆಕೆಯ ತಾಯಿಯ ಗಮನಕ್ಕೆ ಬರುವಾಗ ಆಕೆ ಗರ್ಭಿಣಿಯಾಗಿದ್ದಳು. ಆಕೆಗೆ ಕಳೆದ ವರ್ಷ ಅಕ್ಟೋಬರ್​ನಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಆಗ ಆಕೆಯ ತಾಯಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಅವಳಿಗೆ 5 ತಿಂಗಳಾಗಿದೆ ಎಂಬುದು ಗೊತ್ತಾಗಿತ್ತು. ಆದರೆ, ಅದಕ್ಕೆ ಕಾರಣ ಯಾರು? ಎಂಬುದು ದೊಡ್ಡ ಪ್ರಶ್ನೆಯಾಗಿತ್ತು.

ಇದನ್ನೂ ಓದಿ: Viral News: ಮಾತು ಬಿಟ್ಟಿದ್ದಕ್ಕೆ ಪ್ರಿಯಕರನನ್ನೇ ಕೊಂದ ಯುವತಿ!

ಈ ಪ್ರಶ್ನೆಗೆ ಉತ್ತರ ಹುಡುಕುತ್ತಾ ಹೊರಟ ಪೊಲೀಸರು ಆಕೆಯ ವರ್ತನೆಯನ್ನು ಪರಿಗಣಿಸಿ, ಆಕೆಗೆ ಏನಾಯಿತು ಎಂಬುದನ್ನು ತಿಳಿಯಲು ಆಕೆಯ ಸುತ್ತಮುತ್ತಲಿನ ಸಂಬಂಧಿಕರು ಮತ್ತು ಇತರರು ಸೇರಿದಂತೆ ಸುಮಾರು 16 ಜನರಿಂದ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಿದ್ದರು. ಕೊನೆಗೆ ಆಕೆಯ ತಂದೆಯಿಂದಲೂ ಡಿಎನ್​ಎ ಸಂಗ್ರಹಿಸಿದ್ದರು. ಆಕೆ ಮಾನಸಿಕ ಅಸ್ವಸ್ಥೆಯಾದ್ದರಿಂದ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಕೆಗೆ ಗರ್ಭಪಾತ ಮಾಡಲಾಗಿತ್ತು. ಆ ಭ್ರೂಣದ ಡಿಎನ್​ಎ ಮಾದರಿಗಳನ್ನು ವಿಧಿವಿಜ್ಞಾನ ವಿಶ್ಲೇಷಣೆಗೆ ಕಳುಹಿಸಲಾಯಿತು.

ಇದನ್ನೂ ಓದಿ: ಹನಿಮೂನ್ ಮರ್ಡರ್ 2.0: ಮದುವೆಯಾದ 3 ತಿಂಗಳಲ್ಲೇ ಗಂಡನನ್ನು ಕೊಂದು ಅಪಘಾತವೆಂದು ನಂಬಿಸಿದ ಹೆಂಡತಿ

3 ತಿಂಗಳ ಬಳಿಕ ಜನವರಿ 27ರಂದು, ವಿಧಿವಿಜ್ಞಾನ ತಜ್ಞರು ಆಕೆಯ ತಂದೆಯ ಜೊತೆ ಆಕೆಯ ಮಗುವಿನ ಡಿಎನ್‌ಎ ಹೊಂದಾಣಿಕೆ ಆಗುತ್ತಿದೆ ಎಂಬ ಆಘಾತಕಾರಿ ವರದಿ ನೀಡಿದ್ದಾರೆ. ಆ ವರದಿಯನ್ನು ಆಧರಿಸಿ ಆ ಯುವತಿಯ ಅಪ್ಪನನ್ನು ಈ ವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಗಳ ಪಾಲಿಗೆ ಹೀರೋ ಆಗಬೇಕಿದ್ದ ಅಪ್ಪನೇ ವಿಲನ್ ಆಗಿರುವುದು ಆಘಾತ ಮತ್ತು ಆಕ್ರೋಶ ಮೂಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ