ಮುಂಬೈ: ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ ವಿದ್ಯಾರ್ಥಿಗಳ ಬಂಧನ

|

Updated on: Aug 16, 2023 | 2:55 PM

ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಕಾಲೇಜು ವಿದ್ಯಾರ್ಥಿಗಳನ್ನು ಮುಂಬೈ ಪೊಲೀಸರು ಬುದ್ಧವಾರ ತಡರಾತ್ರಿ (ಆ.16) ಬಂಧಿಸಲಾಗಿದೆ. ಕೊಲಾಬಾ ಪ್ರದೇಶದ ಇಬ್ಬರು ವಿದ್ಯಾರ್ಥಿಗಳನ್ನು ತಡರಾತ್ರಿ ಬಂಧಿಸಿ, ಅವರಿಗೆ ಎಚ್ಚರಿಕೆ ನೀಡಿ, ಬಿಡುಗಡೆ ಮಾಡಲಾಗಿದೆ

ಮುಂಬೈ: ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ ವಿದ್ಯಾರ್ಥಿಗಳ ಬಂಧನ
ಸಾಂದರ್ಭಿಕ ಚಿತ್ರ
Follow us on

ಮುಂಬೈ, ಆ.16 : ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆ(Pakistan Independence Day) ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಕಾಲೇಜು ವಿದ್ಯಾರ್ಥಿಗಳಿಬ್ಬರನ್ನು ಮುಂಬೈ ಪೊಲೀಸರು ಬುದ್ಧವಾರ ತಡರಾತ್ರಿ (ಆ.16) ಬಂಧಿಸಲಾಗಿದೆ. ಕೊಲಾಬಾ ಪ್ರದೇಶದ ಇಬ್ಬರು ವಿದ್ಯಾರ್ಥಿಗಳನ್ನು ತಡರಾತ್ರಿ ಬಂಧಿಸಿ, ಅವರಿಗೆ ಎಚ್ಚರಿಕೆ ನೀಡಿ, ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿದ್ಯಾರ್ಥಿಗಳು ತಮ್ಮ ಇನ್‌ಸ್ಟಾಗ್ರಾಮ್ ಸ್ಟೇಟಸ್‌ ಸ್ಟೋರಿಯಲ್ಲಿ ಪಾಕಿಸ್ತಾನದ ಧ್ವಜದ ಕ್ಲಿಪ್ ಪೋಸ್ಟ್ ಮಾಡಿದ್ದಾರೆ ಎಂದು ಕೊಲಾಬಾ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕೊಲಾಬಾ ಮೂಲದ ಉದ್ಯಮಿಯೊಬ್ಬರು ಪೊಲೀಸರ ಗಮನಕ್ಕೆ ತಂದಿದ್ದು, ಇಬ್ಬರು ನಿವಾಸಿಗಳು ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ Instagram ಸ್ಟೋರಿಯನ್ನು ಪೋಸ್ಟ್ ಮಾಡಿದ್ದಾರೆ. ಇದು ಸಮಾಜದ ಮೇಲೆ ಕೆಟ್ಟ ಪರಿಣಾಮವನ್ನು ಬೀರಬಹುದು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: 77 ಭಾರತ-ಪಾಕ್​ ಗಡಿಯಲ್ಲಿ ಬೀಟಿಂಗ್ ರಿಟ್ರೀಟ್‌, ಈ ಬಾರಿಯೂ ಮೈನವಿರೇಳಿಸುವ ಸಂಭ್ರಮ

ಈ ದೂರಿನ ಆಧಾರದ ಮೇಲೆ, ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸೋಮವಾರ ತಡರಾತ್ರಿ ವಿದ್ಯಾರ್ಥಿಗಳನ್ನು ಪತ್ತೆಹಚ್ಚಿ ಕೊಲಾಬಾ ಪೊಲೀಸ್ ಠಾಣೆಗೆ ಕರೆತಂದಿದೆ. ಸಿಆರ್‌ಪಿಸಿ ಸೆಕ್ಷನ್ 151 (3) ಅಡಿಯಲ್ಲಿ ಬಂಧನ ಮಾಡಲಾಗಿತ್ತು. ಇನ್ನು ಈ ಬಗ್ಗೆ ವಿದ್ಯಾರ್ಥಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದು, ಈ ಆಕ್ಷೇಪಾರ್ಹ ವೀಡಿಯೊವನ್ನು ತಮ್ಮ ಮೊಬೈಲ್ ಫೋನ್‌ನಿಂದ ಡಿಲೀಟ್​​ ಮಾಡುವಂತೆ ಪೊಲೀಸರು ಇಬ್ಬರು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ