AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರತಾ ಬೆದರಿಕೆಯಿಂದ ಚೆನ್ನೈಗೆ ತಿರುಗಿದ ಮುಂಬೈ- ಫುಕೆಟ್‌ ಮಾರ್ಗದ ಇಂಡಿಗೋ ವಿಮಾನ

ಮುಂಬೈನಿಂದ ಫುಕೆಟ್ ಮಾರ್ಗದಲ್ಲಿ ಭದ್ರತಾ ಬೆದರಿಕೆ ಉಂಟಾಗಿದ್ದರಿಂದ ಅದನ್ನು ಚೆನ್ನೈಗೆ ತಿರುಗಿಸಲಾಯಿತು. 6E 1089 ವಿಮಾನವು ಮುಂಬೈನಿಂದ ಹೊರಟಿತು. ಆದರೆ, ಚೆನ್ನೈಗೆ ಹೋಗುವ ಮಾರ್ಗವನ್ನು ಬದಲಾಯಿಸಿತು. ಅಲ್ಲಿ ಅಧಿಕಾರಿಗಳಿಗೆ ತಿಳಿಸಲಾಯಿತು ಮತ್ತು ವಿಮಾನವನ್ನು ಸಂಪೂರ್ಣ ಭದ್ರತಾ ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಭದ್ರತಾ ಬೆದರಿಕೆಯಿಂದ ಚೆನ್ನೈಗೆ ತಿರುಗಿದ ಮುಂಬೈ- ಫುಕೆಟ್‌ ಮಾರ್ಗದ ಇಂಡಿಗೋ ವಿಮಾನ
Indigo
ಸುಷ್ಮಾ ಚಕ್ರೆ
|

Updated on: Sep 19, 2025 | 10:54 PM

Share

ಚೆನ್ನೈ, ಸೆಪ್ಟೆಂಬರ್ 19: ಥೈಲ್ಯಾಂಡ್‌ನ ಫುಕೆಟ್‌ಗೆ ಹೋಗುತ್ತಿದ್ದ ಇಂಡಿಗೋ ವಿಮಾನದಲ್ಲಿ (IndiGo Flight) ಪ್ರಯಾಣದ ಮಧ್ಯದಲ್ಲಿ ಭದ್ರತಾ ಬೆದರಿಕೆ ಕಾಣಿಸಿಕೊಂಡ ನಂತರ ಇಂದು ಚೆನ್ನೈಗೆ ತಿರುಗಿಸಲಾಯಿತು. 6E 1089 ವಿಮಾನವು ಮುಂಬೈನಿಂದ ಹೊರಟಿತು. ಆದರೆ, ಚೆನ್ನೈಗೆ ಹೋಗುವ ಮಾರ್ಗವನ್ನು ಬದಲಾಯಿಸಿತು. ಅಲ್ಲಿ ಅಧಿಕಾರಿಗಳಿಗೆ ತಿಳಿಸಲಾಯಿತು ಮತ್ತು ವಿಮಾನವನ್ನು ಸಂಪೂರ್ಣ ಭದ್ರತಾ ಪರಿಶೀಲನೆಗೆ ಒಳಪಡಿಸಲಾಯಿತು.

“ಸೆಪ್ಟೆಂಬರ್ 19ರಂದು ಮುಂಬೈನಿಂದ ಫುಕೆಟ್‌ಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನ 6E 1089 ಅನ್ನು ವಿಮಾನದಲ್ಲಿ ಭದ್ರತಾ ಬೆದರಿಕೆ ಕಂಡುಬಂದ ಕಾರಣದಿಂದ ಚೆನ್ನೈಗೆ ತಿರುಗಿಸಲಾಯಿತು. ಪ್ರೊಟೋಕಾಲ್ ಪ್ರಕಾರ ಸಂಬಂಧಿತ ಅಧಿಕಾರಿಗಳಿಗೆ ತಕ್ಷಣವೇ ತಿಳಿಸಲಾಯಿತು. ಆ ವಿಮಾನವನ್ನು ಚೆನ್ನೈನಲ್ಲಿ ಅಗತ್ಯ ಭದ್ರತಾ ತಪಾಸಣೆಗೆ ಒಳಪಡಿಸಲಾಯಿತು. ಫುಕೆಟ್ ವಿಮಾನ ನಿಲ್ದಾಣದಲ್ಲಿ ರಾತ್ರಿ ಕರ್ಫ್ಯೂ ಇರುವುದರಿಂದ, ಪ್ರಯಾಣದ ಪುನರಾರಂಭವನ್ನು ರಾತ್ರಿಯ ನಂತರ ನಿಗದಿಪಡಿಸಲಾಗುವುದು” ಎಂದು ಇಂಡಿಗೋ ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಬಿಹಾರದಲ್ಲಿ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ; ಏನಿದರ ವಿಶೇಷತೆ?

ಗ್ರಾಹಕರಿಗೆ ಅನಾನುಕೂಲತೆಯನ್ನು ಕಡಿಮೆ ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. ಅವರಿಗೆ ಉಪಾಹಾರ ನೀಡುವುದು ಮತ್ತು ಅವರಿಗೆ ವಿಮಾನದ ಶೆಡ್ಯೂಲ್ ಕುರಿತ ಅಪ್​ಡೇಟ್ ನೀಡಲಾಗುತ್ತಿದೆ. “ನಮ್ಮ ಗ್ರಾಹಕರು, ಸಿಬ್ಬಂದಿ ಮತ್ತು ವಿಮಾನಗಳ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆಯಾಗಿದೆ” ಎಂದು ಇಂಡಿಗೋ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?