ಸಲ್ಮಾನ್​ ಖಾನ್​ಗೆ ಮತ್ತೆ ಜೀವ ಬೆದರಿಕೆ, 5 ಕೋಟಿ ಕೊಡಿ ಇಲ್ಲವಾದ್ರೆ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತೆ

|

Updated on: Oct 18, 2024 | 8:15 AM

ಬಾಲಿವುಡ್ ನಟ ಸಲ್ಮಾನ್​ ಖಾನ್​ಗೆ ಮತ್ತೆ ಜೀವ ಬೆದರಿಕೆ ಬಂದಿದೆ. ಐದು ಕೋಟಿ ಹಣ ಕೊಡಿ ಇಲ್ಲವಾದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಆರೋಪಿಯೊಬ್ಬ ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾನೆ.

ಸಲ್ಮಾನ್​ ಖಾನ್​ಗೆ ಮತ್ತೆ ಜೀವ ಬೆದರಿಕೆ, 5 ಕೋಟಿ ಕೊಡಿ ಇಲ್ಲವಾದ್ರೆ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತೆ
ಸಲ್ಮಾನ್ ಖಾನ್
Image Credit source: PTI
Follow us on

ಬಾಲಿವುಡ್ ನಟ ಸಲ್ಮಾನ್​ ಖಾನ್​ಗೆ ಮತ್ತೆ ಜೀವ ಬೆದರಿಕೆ ಬಂದಿದೆ. ಐದು ಕೋಟಿ ಹಣ ಕೊಡಿ ಇಲ್ಲವಾದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಆರೋಪಿಯೊಬ್ಬ ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾನೆ.

ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು 5 ಕೋಟಿ ರೂ. ಕೊಡಿ, ಇದನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್​ ಖಾನ್​ ಪರಿಸ್ಥಿತಿ ಬಾಬಾ ಸಿದ್ದಿಕಿಗಿಂತಲೂ ಕೆಟ್ಟದಾಗಿರಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಹರ್ಯಾಣ ಮೂಲದ ಆರೋಪಿ ಬಂಧನ
ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಆರೋಪಿ ಸುಖಾನನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಪಾಣಿಪತ್‌ನಿಂದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೂನ್ 1 ರಂದು ಪನ್ವೇಲ್‌ನಲ್ಲಿ ಸಲ್ಮಾನ್ ಖಾನ್ ಅವರ ಕಾರಿನ ಮೇಲೆ ದಾಳಿ ನಡೆಸಲು ಯೋಜಿಸಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ನಾಲ್ವರನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದರು. ಇದಕ್ಕೂ ಮುನ್ನ ಏಪ್ರಿಲ್‌ನಲ್ಲಿ ಮುಂಬೈನ ಬಾಂದ್ರಾದಲ್ಲಿರುವ ನಟನ ಮನೆಯ ಮೇಲೆ ಗುಂಡಿನ ದಾಳಿ ನಡೆದಿತ್ತು. ಬಂಧಿತ ಆರೋಪಿ ಹರಿಯಾಣ ಮೂಲದ ವ್ಯಕ್ತಿಯಾಗಿದ್ದು ಆತನನ್ನು ನವಿ ಮುಂಬೈಗೆ ಕರೆತರಲಾಗಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಸಲ್ಮಾನ್ ಖಾನ್ ಹತ್ಯೆಗೆಂದು 60 ಶೂಟರ್​ಗಳನ್ನು ನೇಮಿಸಿದ್ದ ಲಾರೆನ್ಸ್ ಬಿಷ್ಣೋಯ್​

ಆರೋಪಿಗಾಗಿ ಕಳೆದ 3 ತಿಂಗಳಿನಿಂದ ಹುಡುಕಾಟ ನಡೆದಿತ್ತು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ತನ್ನನ್ನು ಮತ್ತು ಕುಟುಂಬ ಸದಸ್ಯರನ್ನು ಕೊಲ್ಲುವ ಉದ್ದೇಶದಿಂದ ತನ್ನ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸಲ್ಮಾನ್ ಖಾನ್ ಪೊಲೀಸರಿಗೆ ದೂರು ನೀಡಿದ್ದರು.

ಬಾಲಿವುಡ್ ಸೂಪರ್​ಸ್ಟಾರ್ ಸಲ್ಮಾನ್​ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಲಾರೆನ್ಸ್​ ಬಿಷ್ಣೋಯ್ 60 ಶೂಟರ್​ಗಳನ್ನು ನೇಮಿಸಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್ ಹಲವು ವರ್ಷಗಳಿಂದ ಸಲ್ಮಾನ್ ಖಾನ್ ವಿರುದ್ಧ ದ್ವೇಷ ಬೆಳೆಸಿಕೊಂಡಿದ್ದ. 1998ರ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಭಾಗಿಯಾಗಿದ್ದರು.

ಲಾರೆನ್ಸ್ ಸೇರಿರುವ ಬಿಷ್ಣೋಯ್ ಸಮುದಾಯವು ಕೃಷ್ಣಮೃಗವನ್ನು ಪವಿತ್ರವೆಂದು ಪರಿಗಣಿಸುತ್ತದೆ, ಇದು ಲಾರೆನ್ಸ್​ ಅಸಮಾಧಾನಕ್ಕೆ ಮೂಲ ಕಾರಣವೆಂದೇ ಹೇಳಬಹುದು. ಜೀ ನ್ಯೂಸ್‌ನ ಇತ್ತೀಚಿನ ವರದಿಯ ಪ್ರಕಾರ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಲ್ಮಾನ್ ಖಾನ್‌ಗೆ ಅನೇಕ ಬಾರಿ ಬೆದರಿಕೆಗಳನ್ನು ಹಾಕಿದೆ.

ಗ್ಯಾಂಗ್ 60 ಶೂಟರ್​ಗಳನ್ನು ನೇಮಿಸಿಕೊಂಡಿದ್ದು, ಖಾನ್ ಸುರಕ್ಷತೆ ಕುರಿತು ಗಂಭೀರ ಕಳವಳ ಉಂಟಾಗಿದೆ. ಈಗಾಗಲೇ ಪದೇ ಪದೇ ಬೆದರಿಕೆಯೊಡ್ಡುತ್ತಿರುವುದರಿಂದ ಸಲ್ಮಾನ್ ಖಾನ್ ಸುತ್ತ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಸಲ್ಮಾನ್​ ಖಾನ್​ಗೆ ನಿಕಟವಾಗಿದ್ದ, ಮಹಾರಾಷ್ಟ್ರ ಮಾಜಿ ಸಚಿವ ಸಿದ್ದಿಕಿಯನ್ನು ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ ಗುಂಡು ಹಾರಿಸಿ ಹತ್ಯೆ ಮಾಡಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:13 am, Fri, 18 October 24