Murder News: ಅಮ್ಮನಿಗೆ ಕಿರುಕುಳ ನೀಡುತ್ತಿದ್ದ ಅಪ್ಪನನ್ನು ಕೊಂದ 17 ವರ್ಷದ ಬಾಲಕ

ನನ್ನ ತಂದೆಯನ್ನು ಕೊಲ್ಲುವ ಉದ್ದೇಶ ಹೊಂದಿರಲಿಲ್ಲ, ಆದರೆ, ನನ್ನಪ್ಪನಿಗೆ ತಕ್ಕ ಪಾಠ ಕಲಿಸಲು ಬಯಸಿದ್ದೆ ಎಂದು ಬಾಲಾಪರಾಧಿ ಪೊಲೀಸರಿಗೆ ತಿಳಿಸಿದ್ದಾನೆ.

Murder News: ಅಮ್ಮನಿಗೆ ಕಿರುಕುಳ ನೀಡುತ್ತಿದ್ದ ಅಪ್ಪನನ್ನು ಕೊಂದ 17 ವರ್ಷದ ಬಾಲಕ
ಕೊಲೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 08, 2022 | 9:59 AM

ನವದೆಹಲಿ: ತನ್ನ ತಾಯಿಗೆ ದಿನವೂ ಕಿರುಕುಳ ನೀಡುತ್ತಿದ್ದ ತಂದೆಯನ್ನು 17 ವರ್ಷದ ಮಗನೇ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ರೋಲಿಂಗ್ ಪಿನ್ ಬಳಸಿ ತಂದೆಯನ್ನು ಕೊಂದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ರೈಲ್ವೇ ಪ್ರೊಟೆಕ್ಷನ್ ಫೋರ್ಸ್‌ನಲ್ಲಿ (ಆರ್‌ಪಿಎಫ್) ಕೆಲಸ ಮಾಡುತ್ತಿದ್ದ ಮೃತ ವ್ಯಕ್ತಿ ದಿನವೂ ತನ್ನ ಹೆಂಡತಿಗೆ ಕಿರುಕುಳ ನೀಡುತ್ತಿದ್ದ. ಇದನ್ನು ನೋಡಿ ಬೇಸತ್ತಿದ್ದ ಮಗ ಅಪ್ಪನನ್ನು ಕೊಲೆ ಮಾಡಿದ್ದಾನೆ.

ಮೃತ ವ್ಯಕ್ತಿಯನ್ನು ರೋಲಿಂಗ್ ಪಿನ್‌ನಿಂದ 20 ಬಾರಿ ಹೊಡೆದು ಕೊಲ್ಲಲಾಗಿದೆ. ನನ್ನ ತಂದೆಯನ್ನು ಕೊಲ್ಲುವ ಉದ್ದೇಶ ಹೊಂದಿರಲಿಲ್ಲ, ಆದರೆ, ನನ್ನಪ್ಪನಿಗೆ ತಕ್ಕ ಪಾಠ ಕಲಿಸಲು ಬಯಸಿದ್ದೆ ಎಂದು ಬಾಲಾಪರಾಧಿ ಪೊಲೀಸರಿಗೆ ತಿಳಿಸಿದ್ದಾನೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಸೆಕ್ಯುರಿಟಿಗಳ ಸರಣಿ ಹತ್ಯೆ; ಕೊಲೆ ಹಿಂದಿನ ಅಚ್ಚರಿಯ ಕಾರಣ ಇಲ್ಲಿದೆ

ತಂದೆ ಕುಡಿದು ಮನೆಗೆ ಬಂದು ತಾಯಿಯನ್ನು ಬೈಯುತ್ತಿದ್ದ, ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಕೊಲೆ ನಡೆದ ದಿನದಂದು, ಮೃತ ವ್ಯಕ್ತಿ ರಾತ್ರಿ 10 ಗಂಟೆಯ ಸುಮಾರಿಗೆ ಮನೆಗೆ ಬಂದು ಮಗನನ್ನು ಕಾಲಿನಿಂದ ತಳ್ಳಿ, ತನ್ನ ಹೆಂಡತಿಯನ್ನು ನಿಂದಿಸಿದ್ದರು. ಇದರಿಂದ ಕೋಪಗೊಂಡ ಮಗ ರೋಲಿಂಗ್ ಪಿನ್ ಅನ್ನು ಎತ್ತಿಕೊಂಡು ಅಪ್ಪನಿಗೆ ಅನೇಕ ಬಾರಿ ಹೊಡೆದು ಕೊಂದಿದ್ದಾನೆ.

ಮೃತ ದೇಹದ ಮೇಲೆ 19 ಗಾಯಗಳಾಗಿತ್ತು. ಹೊಡೆತದ ಪ್ರಭಾವದಿಂದ ಬ್ರೈನ್ ಹ್ಯಾಮರೇಜ್ ಆಗಿ ಆಘಾತದಿಂದ ವ್ಯಕ್ತಿ ಮೃತಪಟ್ಟಿದ್ದಾರೆ. ಶವಪರೀಕ್ಷೆ ವರದಿಯ ನಂತರ, ಪೊಲೀಸರು ಕೊಲೆ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಮೃತರ ಕುಟುಂಬದ ಸದಸ್ಯರನ್ನು ವಿಚಾರಣೆ ಮಾಡಲು ಪ್ರಾರಂಭಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 am, Thu, 8 September 22

ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!