AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಜಾಪ್ರಭುತ್ವದ ಕೊಲೆ’; ನಂದಿಗ್ರಾಮದ ಅಭ್ಯರ್ಥಿ ಬಂಧನಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಪಶ್ಚಿಮ ಬಂಗಾಳದ ಹೈಪ್ರೊಫೈಲ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆ ಅಖಾಡದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರ ದಿಢೀರ್ ಬಂಧನವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿಯ ಈ ನಡೆಯನ್ನು "ರಾಜಕೀಯ ಸೇಡಿನ ಕೃತ್ಯ ಮತ್ತು ಪ್ರಜಾಪ್ರಭುತ್ವದ ಕೊಲೆ" ಎಂದು ಟೀಕಿಸಿದ್ದಾರೆ. ಇಂದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಬಣವು ನಂದಿಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರಿಗೆ ಪೂರ್ಣ ಬೆಂಬಲ ಘೋಷಿಸಿತ್ತು. ಆದರೆ, ಈ ಪ್ರಕಟಣೆ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಮಿಲನ್ ಪ್ರಧಾನ್ ಅವರನ್ನು ಬಂಧಿಸಿದ್ದಾರೆ.

‘ಪ್ರಜಾಪ್ರಭುತ್ವದ ಕೊಲೆ’; ನಂದಿಗ್ರಾಮದ ಅಭ್ಯರ್ಥಿ ಬಂಧನಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ರಾಹುಲ್ ಗಾಂಧಿ Image Credit source: PTI
ಸುಷ್ಮಾ ಚಕ್ರೆ
|

Updated on:Sep 18, 2026 | 11:08 PM

Share

ನವದೆಹಲಿ, ಸೆಪ್ಟೆಂಬರ್ 18: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಪೊಲೀಸರು ಬಂಧಿಸಿರುವುದಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ರಮವನ್ನು “ಪ್ರಜಾಪ್ರಭುತ್ವದ ಕೊಲೆ ಮತ್ತು ಬಿಜೆಪಿಯ ರಾಜಕೀಯ ಸೇಡು” ಎಂದು ಅವರು ಕಟುವಾಗಿ ಟೀಕಿಸಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದ ‘ಅಖಿಲ ಭಾರತ ತೃಣಮೂಲ ಕಾಂಗ್ರೆಸ್’ (ಮಮತಾ ಬಣ) ನಂದಿಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಕೆಲವೇ ಗಂಟೆಗಳಲ್ಲಿ, 2007ರ ಹಳೆಯ ಪ್ರಕರಣವೊಂದನ್ನು ಉಲ್ಲೇಖಿಸಿ ಮಿಲನ್ ಪ್ರಧಾನ್ ಅವರನ್ನು ಬಂಧಿಸಲಾಗಿತ್ತು.

ಈ ಬಗ್ಗೆ ಎಕ್ಸ್​ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, “ಬಿಜೆಪಿಗೆ ದೇಶದ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣಾ ಪ್ರಕ್ರಿಯೆಯ ಮೇಲೆ ಯಾವುದೇ ಗೌರವ ಅಥವಾ ನಂಬಿಕೆಯಿಲ್ಲ. ಸ್ವತಂತ್ರವಾಗಿ ಸ್ಪರ್ಧಿಸಿ ಗೆಲ್ಲಲು ಸಾಧ್ಯವಾಗದಿದ್ದಾಗ ಅವರು ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ಎದುರಾಳಿ ಅಭ್ಯರ್ಥಿಗಳನ್ನು ಬಂಧಿಸುವ ಕೆಲಸ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ನಂದಿಗ್ರಾಮ ಉಪಚುನಾವಣೆ; ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಬಂಧನ!

ಅಧಿಕಾರದ ದುರಾಸೆ:

“ಅಧಿಕಾರ ಹಿಡಿಯಲು ಬಿಜೆಪಿ ‘ಮತ ಕಳ್ಳತನ’ ಹಾಗೂ ‘ಪಕ್ಷಗಳ ಒಡೆಯುವಿಕೆ’ಯ ತಂತ್ರ ಅನುಸರಿಸುತ್ತಿದೆ. ಅವರಿಗೆ ಚುನಾವಣೆಯಲ್ಲಿ ಮುಖಾಮುಖಿ ಸ್ಪರ್ಧೆ ಎದುರಿಸುವ ಧೈರ್ಯವಿಲ್ಲ, ಹಾಗಾಗಿಯೇ ಕಣದಲ್ಲಿರುವ ಅಭ್ಯರ್ಥಿಗಳನ್ನೇ ಇಲ್ಲದಂತೆ ಮಾಡಲು ನೋಡುತ್ತಿದ್ದಾರೆ. ಆದರೆ ನಾವು ಇಂತಹ ಸೇಡಿನ ರಾಜಕೀಯಕ್ಕೆ ತಲೆಬಾಗುವುದಿಲ್ಲ” ಎಂದು ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಬೆಂಬಲ ಪ್ರಕಟಣೆ ಹಾಗೂ ರಾಹುಲ್ ಗಾಂಧಿಯವರ ಈ ತೀವ್ರ ಹೋರಾಟದ ಹಾದಿಯು ‘ಇಂಡಿಯಾ’ ಮೈತ್ರಿಕೂಟ ನಂದಿಗ್ರಾಮದಲ್ಲಿ ಬಿಜೆಪಿಯನ್ನು ಜಂಟಿಯಾಗಿ ಎದುರಿಸಲು ಸಜ್ಜಾಗಿದೆ ಎಂಬುದನ್ನು ಸ್ಪಷ್ಟಪಡಿಸಿದೆ. ನಂದಿಗ್ರಾಮದ ಮಮತಾ ಬ್ಯಾನರ್ಜಿ ಬಣದ ಅಭ್ಯರ್ಥಿ ಸಂಚಿತಾ ಪ್ರಧಾನ್ ಡೇ ತಮ್ಮ ನಾಮಪತ್ರ ಹಿಂಪಡೆದ ತಕ್ಷಣ, ಮಮತಾ ಬ್ಯಾನರ್ಜಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು. ಆದರೆ, ಈ ಘೋಷಣೆಯ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿಯನ್ನು ಬಂಧಿಸಿರುವುದು ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಅಕ್ಟೋಬರ್ 6ರ ಉಪಚುನಾವಣೆಯ ಕಣವನ್ನು ಮತ್ತಷ್ಟು ಉದ್ವಿಗ್ನಗೊಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:01 pm, Fri, 18 September 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ