ರಾಜಸ್ಥಾನದ ಭಿಲ್ವಾರಾದಲ್ಲಿ ಮುಸ್ಲಿಂ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ; 48 ಗಂಟೆ ಇಂಟರ್ನೆಟ್ ಸೇವೆ ಸ್ಥಗಿತ

ನಿನ್ನೆ ಮಧ್ಯಾಹ್ನ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಅಪರಿಚಿತರು ಇಬ್ರಾಹಿಂ ಪಠಾಣ್ ಅಲಿಯಾಸ್ ಭೂರಾ (34) ಮತ್ತು ಕಮರುದ್ದೀನ್ ಅಲಿಯಾಸ್ ಟೋನಿ (22) ಅವರನ್ನು ಸುತ್ತುವರೆದು ಅವರ ಮೇಲೆ 3 ಸುತ್ತು ಗುಂಡು ಹಾರಿಸಿದ್ದಾರೆ.

ರಾಜಸ್ಥಾನದ ಭಿಲ್ವಾರಾದಲ್ಲಿ ಮುಸ್ಲಿಂ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ; 48 ಗಂಟೆ ಇಂಟರ್ನೆಟ್ ಸೇವೆ ಸ್ಥಗಿತ
ರಾಜಸ್ಥಾನದ ಭಿಲ್ವಾರಾದಲ್ಲಿ ಮುಸ್ಲಿಂ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 25, 2022 | 9:32 AM

ಜೈಪುರ: ರಾಜಸ್ಥಾನದ ಭಿಲ್ವಾರಾದಲ್ಲಿ (Bhilwara) ನಡೆದ ದಾಳಿಯಲ್ಲಿ ಮುಸ್ಲಿಂ (Muslim) ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಆತನ ತಮ್ಮನಿಗೆ ತೀವ್ರವಾದ ಗಾಯಗಳಾಗಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಭಿಲ್ವಾರಾ ನಗರದಲ್ಲಿ 48 ಗಂಟೆಗಳ ಕಾಲ ಇಂಟರ್ನೆಟ್ ಸೇವೆಯನ್ನು (Internet Service) ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

6 ತಿಂಗಳ ಹಿಂದೆ ನಡೆದ ಆದರ್ಶ ತಪಾಡಿಯಾ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಬೈಕ್‌ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮುಸ್ಲಿಂ ಸಹೋದರರಿಬ್ಬರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಾದ ಬಳಿಕ ಹಲವು ಏರಿಯಾಗಳಲ್ಲಿ ಜನರು ಗುಂಪು ಕಟ್ಟಿಕೊಂಡು ಆಕ್ರೋಶ ಹೊರಹಾಕಲಾರಂಭಿಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭಿಲ್ವಾರಾ ನಗರದಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಹವಾ ಸಿಂಗ್ ಘುಮಾರಿಯಾ ತಿಳಿಸಿದ್ದಾರೆ.

ಇದನ್ನೂ ಓದಿ: PM Narendra Modi In Bengaluru: ಮೋದಿಯವರನ್ನು ನೋಡಲು ಬಂದವರಲ್ಲಿ ಮುಸ್ಲಿಂ ಸಮುದಾಯ ಸದಸ್ಯರ ಪಾಲು ದೊಡ್ಡದು

ದಾಳಿಗೆ ಒಳಗಾದವರಲ್ಲಿ ಒಬ್ಬರು ಚಿಕಿತ್ಸೆ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಇದಾದ ನಂತರ ಮೃತ ವ್ಯಕ್ತಿಯ ಕುಟುಂಬದ ಸದಸ್ಯರು ಮತ್ತು ಅವರ ಬೆಂಬಲಿಗರು ಆಸ್ಪತ್ರೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಅವರ ಸಹೋದರನನ್ನು ಚಿಕಿತ್ಸೆಗಾಗಿ ಉದಯಪುರಕ್ಕೆ ಕಳುಹಿಸಲಾಗಿದೆ. ಸದ್ಯಕ್ಕೆ ನಗರದಲ್ಲಿ ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ.

ಮಹಾತ್ಮಾ ಗಾಂಧಿ ಕ್ರಾಸಿಂಗ್, ಬದ್ಲಾ ಚೌರಾಹಾ, ಭೀಮಗಂಜ್, ಸಿಟಿ ಕೊತ್ವಾಲಿ ಸೇರಿದಂತೆ ಹಲವೆಡೆ ನಗರದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ದಾಳಿಕೋರರಿಗಾಗಿ ಶೋಧ ನಡೆಸಲಾಗುತ್ತಿದೆ.

ಇದನ್ನೂ ಓದಿ: ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದ; ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ

ನಿನ್ನೆ ಮಧ್ಯಾಹ್ನ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಅಪರಿಚಿತರು ಇಬ್ರಾಹಿಂ ಪಠಾಣ್ ಅಲಿಯಾಸ್ ಭೂರಾ (34) ಮತ್ತು ಕಮರುದ್ದೀನ್ ಅಲಿಯಾಸ್ ಟೋನಿ (22) ಅವರನ್ನು ಸುತ್ತುವರೆದು ಅವರ ಮೇಲೆ 3 ಸುತ್ತು ಗುಂಡು ಹಾರಿಸಿದ್ದಾರೆ. ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ವೇಳೆ ಇಬ್ರಾಹಿಂ ಮೃತಪಟ್ಟಿದ್ದಾರೆ.

ಆದರ್ಶ್ ತಪಾಡಿಯಾ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಈ ವ್ಯಕ್ತಿಗಳ ಮೇಲೆ ಗುಂಡು ಹಾರಿಸಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ವರ್ಷದ ಮೇ ತಿಂಗಳಲ್ಲಿ ಎರಡು ಗುಂಪುಗಳ ನಡುವಿನ ಹಳೆಯ ಜಗಳದ ವೇಳೆ ನಡೆದ ಹೊಡೆದಾಟದ ಸಂದರ್ಭದಲ್ಲಿ ಆದರ್ಶ ತಪಾಡಿಯಾ ಅವರನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿತ್ತು. ಅದಾದ ಬಳಿಕ ಕೋಮುಗಲಭೆಗಳು ಎದ್ದಿದ್ದವು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ