ಮುಸ್ಲಿಮರಿಗೆ ರಾಷ್ಟ್ರದ ಸಂಪತ್ತಿನಲ್ಲಿ ಮೊದಲು ಹಕ್ಕು, ಮೋದಿ ಹೇಳಿದ್ದು ಸತ್ಯ, ಸಾಕ್ಷ್ಯ ಕೊಟ್ಟ ಬಿಜೆಪಿ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ದೇಶದ ಸಂಪತ್ತಿನ ಮೊದಲ ಹಕ್ಕು ಮುಸ್ಲಿಮರಿಗೆ ಇದೆ ಎಂದು ಹೇಳಿದ್ದಾರೆ. ಇದನ್ನು 2009ರಲ್ಲಿ ಮಾಜಿ ಪ್ರಧಾನಿ ಮನಮೋಹನ್​​​ ಸಿಂಗ್​​ ಕೂಡ ಇದ್ದನೆ ಹೇಳಿದರು ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಕಾಂಗ್ರೆಸ್​​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಹಿರಂಗ ಚರ್ಚೆಗೆ ಕರೆದಿದ್ದರು. ಜತೆಗೆ ಮೋದಿಗೆ ಪತ್ರ ಬರೆದಿದ್ದರು. ಇದೀಗ ಮೋದಿ ಹೇಳಿದ್ದು ನಿಜ ಇದಕ್ಕೆ ಸಾಕ್ಷಿ ಬಿಜೆಪಿಯಲ್ಲಿದೆ ಎಂದು ಮಾಜಿ ಪ್ರಧಾನಿ ಮನಮೋಹನ್​​​ ಸಿಂಗ್​​ ಅವರ ಹಳೆಯ ವಿಡಿಯೋವನ್ನು ವೈರಲ್​​ ಮಾಡಲಾಗಿದೆ.

ಮುಸ್ಲಿಮರಿಗೆ ರಾಷ್ಟ್ರದ ಸಂಪತ್ತಿನಲ್ಲಿ ಮೊದಲು ಹಕ್ಕು, ಮೋದಿ ಹೇಳಿದ್ದು ಸತ್ಯ, ಸಾಕ್ಷ್ಯ ಕೊಟ್ಟ ಬಿಜೆಪಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Apr 26, 2024 | 12:28 PM

ಇಂದು ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದೆ. ಇದರ ನಡುವೆ ಪ್ರಧಾನಿ ಮೋದಿಗೆ (Narendra Modi) ಮಲ್ಲಿಕಾರ್ಜುನ ಖರ್ಗೆ ಬರೆದ ಪತ್ರದ ಬಗ್ಗೆ ಚರ್ಚೆಯಾಗುತ್ತಿದೆ. ಕಾಂಗ್ರೆಸ್​ ರಾಷ್ಟ್ರೀಯ ಅಧಕ್ಷ  ಮಲ್ಲಿಕಾರ್ಜುನ ಖರ್ಗೆ (mallikarjun kharge) ಅವರು ಪಕ್ಷದ ಪ್ರಣಾಳಿಕೆಯ ಬಗ್ಗೆ ತಿಳುವಳಿಕೆ ನೀಡುವಂತೆ ಪ್ರಧಾನಿ ಮೋದಿಗೆ ಬಹಿರಂಗ ಪತ್ರ ಬರೆದಿದ್ದರು. ಇದೀಗ ಇದಕ್ಕೆ ಮನಮೋಹನ್​​ ಸಿಂಗ್​​​ ಅವರ ಹಳೆಯ ಹೇಳಿಕೆಯನ್ನು ಇಟ್ಟುಕೊಂಡು ಬಿಜೆಪಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್​​ಗೆ ತಿರುಗೇಟು ನೀಡಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅವರ ಅಧಿಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ನೀಡಿದ ಆದ್ಯತೆ ಬಗ್ಗೆ ಬಿಜೆಪಿ ಒಂದು ವಿಡಿಯೋವೊಂದು ವೈರಲ್​​ ಮಾಡಿದೆ.

ಬಿಜೆಪಿ 2009ರಂದು ಮನಮೋಹನ್ ಸಿಂಗ್ ಅವರು ಪ್ರತಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಮಾಡಿದೆ. ಈ ಎಲ್ಲ ಚರ್ಚೆಗೆ ಕಾರಣವಾದದ್ದು ಕಾಂಗ್ರೆಸ್​​ ಪ್ರಣಾಳಿಕೆ, ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿರುವ ಸಂಪತ್ತು ಮರುಹಂಚಿಕೆ ಭರವಸೆ. ಇದನ್ನು ಬಿಜೆಪಿ ಅಸ್ತ್ರವನ್ನಾಗಿ ಬಳಸಿಕೊಂಡು ಕಾಂಗ್ರೆಸ್​​​ ವಿರುದ್ಧ ಅಕ್ರೋಶ ವ್ಯಕ್ತಪಡಿಸಿತ್ತು. ಇದಕ್ಕೆ ತುಪ್ಪ ಸುರಿದದ್ದು, ಕಾಂಗ್ರೆಸ್ ಪಕ್ಷದ ತಾತ್ವಿಕ ಗುರು ಹಾಗೂ ಪಕ್ಷದ ವಿದೇಶೀ ವಿಭಾಗದ ಛೇರ್ಮನ್ ಸ್ಯಾಮ್ ಪಿತ್ರೋಡ (Sam Pitroda) ಅವರು ‘ಅಮೆರಿಕದಲ್ಲಿ ಇನ್​ಹೆರಿಟೆನ್ಸ್ ಟ್ಯಾಕ್ಸ್ ಜಾರಿಯಲ್ಲಿದೆ. ಒಬ್ಬ ವ್ಯಕ್ತಿ ಬಳಿ 100 ಮಿಲಿಯನ್ ಮೌಲ್ಯದ ಆಸ್ತಿ ಇದ್ದು ಆತ ಸತ್ತರೆ ಮಕ್ಕಳಿಗೆ ಶೇ. 40ರಷ್ಟು ಆಸ್ತಿಯನ್ನು ಮಾತ್ರ ವರ್ಗಾಯಿಸಬಹುದು. ಉಳಿದ ಶೇ. 55ರಷ್ಟು ಆಸ್ತಿ ಸರ್ಕಾರಕ್ಕೆ ಹೋಗುತ್ತದೆ. ಭಾರತದಲ್ಲಿ ಈ ಕಾನೂನು ಇಲ್ಲ. ಇದನ್ನು ಭಾರತದಲ್ಲಿ ತರಬೇಕು ಎಂಬ ರೀತಿಯಲ್ಲಿ ಅವರ ಹೇಳಿಕೆ ಇತ್ತು. ಇದೀಗ ಈ ವಿಚಾರ ಚರ್ಚೆಯಾಗುತ್ತಿದೆ.

ಕಾಂಗ್ರೆಸ್​​​ ಪಕ್ಷ ಸ್ಯಾಮ್ ಪಿತ್ರೋಡ ಅವರು ನೀಡಿರುವ ಹೇಳಿಕೆಗೆ ಮೌನ ವಹಿಸಿದೆ. ಇದನ್ನು ಮೋದಿ ಕೂಡ ಅಸ್ತ್ರವಾಗಿ ಬಳಸಿಕೊಂಡು ತಮ್ಮ ಪ್ರಚಾರದ ವೇಳೆ ಈ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರವಾಗಿ ಕಾಂಗ್ರೆಸ್​​ ಪ್ರಣಾಳಿಕೆಯಲ್ಲಿ ಇಂತಹ ಯಾವುದೇ ವಿಷಯವಿಲ್ಲ. ಮೋದಿ ಬಹಿರಂಗ ಚರ್ಚೆಗೆ ಬರಲಿ ಎಂದು ಹೇಳಿದ್ದಾರೆ. ಇದೀಗ ಇದಕ್ಕೆ ಟಕ್ಕರ್​​​ ನೀಡಲು 2009ರ ಮನಮೋಹನ್​​​ ಸಿಂಗ್​​ ಅವರ ಹೇಳಿಕೆಯ ವಿಡಿಯೋವನ್ನು ಬಿಡುಗಡೆ ಮಾಡಿದೆ.

ಈ ವಿಡಿಯೋದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು “ಅಲ್ಪಸಂಖ್ಯಾತರು, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರು, ಅವರು ಬಡವರಾಗಿದ್ದರೆ, ರಾಷ್ಟ್ರದ ಸಂಪನ್ಮೂಲಗಳ ಮೇಲೆ ಪೂರ್ವ ಹಕ್ಕು ಹೊಂದಿರುತ್ತಾರೆ ಎಂದು ಹೇಳಿದ್ದಾರೆ. ಈ ವಿಡಿಯೋದ ಮೇಲೆ ಶೀರ್ಷಿಕೆಯನ್ನು ಬಿಜೆಪಿ ನೀಡಿದೆ. ಜನರು ಕಷ್ಟಪಟ್ಟು ದುಡಿದ ಹಣವನ್ನು ಕಿತ್ತುಕೊಂಡು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಮರುಹಂಚಿಕೆ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು ಎಂದು ಹೇಳಿದೆ.

ಲೋಕಸಭಾ ಚುನಾವಣೆಯ ಪೂರ್ವದಲ್ಲಿ, ಡಾ. ಮನಮೋಹನ್ ಸಿಂಗ್ ಅವರು ರಾಷ್ಟ್ರದ ಸಂಪನ್ಮೂಲಗಳ ವಿಷಯದಲ್ಲಿ ಅಲ್ಪಸಂಖ್ಯಾತರು, ಅದರಲ್ಲೂ ವಿಶೇಷವಾಗಿ ಬಡ ಮುಸ್ಲಿಮರಿಗೆ ಆದ್ಯತೆ ನೀಡಬೇಕು ಎಂಬ ತಮ್ಮ ಹೇಳಿಕೆ ನೀಡಿದರು. ಮುಸ್ಲಿಮ್ ಸಮುದಾಯಕ್ಕೆ ಆದ್ಯತೆ ನೀಡುವ ನೀತಿಯನ್ನು ಕಾಂಗ್ರೆಸ್ ಹೊಂದಿದೆ ಎಂದು ಬಿಜೆಪಿ ದೂರಿದೆ. ಮನಮೋಹನ್​​ ಸಿಂಗ್​​ ಅವರ ಈ ಹೇಳಿಕೆ ಕಾಂಗ್ರೆಸ್​​ನ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಬಿಜೆಪಿ ಹೇಳಿದೆ.

ಪ್ರಚಾರದ ವೇಳೆ ಮೋದಿ ಅವರು ಮನಮೋಹನ್ ಸಿಂಗ್ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ದೇಶದ ಸಂಪತ್ತಿನ ಮೊದಲ ಹಕ್ಕು ಮುಸ್ಲಿಮರಿಗೆ ಇದೆ ಎಂದು ಹೇಳಿದ್ದರು. “ಅಂದರೆ ಅವರು ಈ ಆಸ್ತಿಯನ್ನು ಒಟ್ಟುಗೂಡಿಸಿ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ, ನುಸುಳುಕೋರರಿಗೆ ಹಂಚುತ್ತಾರೆ. ನೀವು ಕಷ್ಟಪಟ್ಟು ದುಡಿದ ಹಣವನ್ನು ನುಸುಳುಕೋರರಿಗೆ ನೀಡುತ್ತೀರಾ? ನೀವು ಇದನ್ನು ಒಪ್ಪಿಕೊಳ್ಳುತ್ತೀರಾ? ಕಾಂಗ್ರೆಸ್ ಪ್ರಣಾಳಿಕೆ ಇದನ್ನು ಹೇಳುತ್ತಿದೆ ಎಂದರು.

ಇದನ್ನೂ ಓದಿ: ವೈಯಕ್ತಿಕ ಆಸ್ತಿಯಲ್ಲಿ ಸರ್ಕಾರಕ್ಕೆ ಶೇ. 55 ಪಾಲು: ಅಮೆರಿಕದ ಟ್ಯಾಕ್ಸ್ ವ್ಯವಸ್ಥೆ ಪ್ರಸ್ತಾಪಿಸಿದ ಸ್ಯಾಮ್ ಪಿತ್ರೋಡಾ

ಮೋದಿ ಅವರ ಈ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಅವರು ಅವರಿಗೆ ಪತ್ರ ಬರೆದಿದ್ದರೆ. ಕಾಂಗ್ರೆಸ್ ‘ನ್ಯಾಯ ಪತ್ರ’ ಅಥವಾ ಪ್ರಣಾಳಿಕೆಯಲ್ಲಿ ಉಲ್ಲೇಖಿಸದ ವಿಷಯಗಳ ಬಗ್ಗೆ ತಮ್ಮ ಸಲಹೆಗಾರರಿಂದ ತಪ್ಪು ಮಾಹಿತಿ ನೀಡಲಾಗುತ್ತಿದೆ. ಖರ್ಗೆ ಅವರು ತಮ್ಮ ಎರಡು ಪುಟಗಳ ಪತ್ರದಲ್ಲಿ ಪ್ರಧಾನಿ ಅವರನ್ನು ಖುದ್ದಾಗಿ ಭೇಟಿ ಮಾಡಲು ಸಮಯ ಕೋರಿದ್ದಾರೆ ಮತ್ತು ಪ್ರಧಾನಿಯಾಗಿ ನೀವು ಸುಳ್ಳು ಹೇಳಿಕೆಗಳನ್ನು ನೀಡದಂತೆ ನಮ್ಮ ನ್ಯಾಯ ಪತ್ರವನ್ನು ವಿವರಿಸಿ ಎಂದು ಹೇಳಿದರು. ಈ ಬಗ್ಗೆ ಬಹಿರಂಗ ಚರ್ಚೆಯಾಗಲಿ ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:17 pm, Fri, 26 April 24

ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್