ಮುಸ್ಲಿಂ ಜನಸಂಖ್ಯೆ ಹೆಚ್ಚಿದೆ, ಬಿಜೆಪಿಯ ಆಡಳಿತ ಅಂತ್ಯವಾಗಲಿದೆ; ಶಾಕಿಂಗ್ ಹೇಳಿಕೆ ನೀಡಿದ ಎಸ್​ಪಿ ಶಾಸಕನಿಗೆ ಸಂಕಷ್ಟ

ಭಾರತದಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಾಗುತ್ತಿದೆ, ಹೀಗಾಗಿ ಉತ್ತರ ಪ್ರದೇಶದಲ್ಲಿ ಸದ್ಯದಲ್ಲೇ ಬಿಜೆಪಿ ಆಡಳಿತ ಕೊನೆಗೊಳ್ಳಲಿದೆ ಎಂದು ಸಮಾಜವಾದಿ ಪಕ್ಷದ ಶಾಸಕ ಹೇಳಿಕೆ ನೀಡಿದ್ದಾರೆ. ಇದೇ ಕಾರಣಕ್ಕೆ ಅವರು ಸಂಕಷ್ಟಕ್ಕೆ ಸಿಲುಕಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಹೆಚ್ಚುತ್ತಿರುವ ಮುಸ್ಲಿಂ ಜನಸಂಖ್ಯೆಯ ಕುರಿತು ಎಸ್‌ಪಿ ಶಾಸಕ ಮೆಹಬೂಬ್ ಅಲಿ ಅವರ ಕಾಮೆಂಟ್‌ಗಳು ಆಕ್ರೋಶಕ್ಕೆ ಕಾರಣವಾಗಿದೆ.

ಮುಸ್ಲಿಂ ಜನಸಂಖ್ಯೆ ಹೆಚ್ಚಿದೆ, ಬಿಜೆಪಿಯ ಆಡಳಿತ ಅಂತ್ಯವಾಗಲಿದೆ; ಶಾಕಿಂಗ್ ಹೇಳಿಕೆ ನೀಡಿದ ಎಸ್​ಪಿ ಶಾಸಕನಿಗೆ ಸಂಕಷ್ಟ
ಮೆಹಬೂಬ್ ಅಲಿ
Follow us
|

Updated on: Sep 30, 2024 | 5:11 PM

ನವದೆಹಲಿ: ಸಮಾಜವಾದಿ ಪಕ್ಷದ ಶಾಸಕ ಮೆಹಬೂಬ್ ಅಲಿ ಅವರು ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದ ಬಿಜೆಪಿ ಆಡಳಿತ ಕೊನೆಗೊಳ್ಳಲಿದೆ ಎಂದು ಹೇಳಿದ್ದಾರೆ. ದೇಶದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗುತ್ತಿದ್ದಂತೆ ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಆಡಳಿತ ಕೊನೆಗೊಳ್ಳಲಿದೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಸಮಾಜವಾದಿ ಪಕ್ಷದ ಶಾಸಕ ಮೆಹಬೂಬ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೆಹಬೂಬ್ ಅಲಿ, ಸದ್ಯದಲ್ಲೇ ಬಿಜೆಪಿಯ ಆಡಳಿತ ಕೊನೆಗೊಳ್ಳುತ್ತದೆ. ಮುಸ್ಲಿಮರ ಜನಸಂಖ್ಯೆ ಹೆಚ್ಚುತ್ತಿದೆ. ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಬಿಜೆಪಿಗೆ ಪೂರ್ಣ ಬಹುಮತ ಖಚಿತ; ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ ವಿಶ್ವಾಸ

ಮೊಘಲರು 850 ವರ್ಷಗಳ ಕಾಲ ಆಳಿದರು. ಇದೀಗ ಜನರು ಎಚ್ಚೆತ್ತುಕೊಂಡಿದ್ದಾರೆ. ಜನರು ಸಂಸತ್ತಿನ ಚುನಾವಣೆಯಲ್ಲಿ ಉತ್ತರವನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅಂದರೆ 2027ರಲ್ಲಿ ಬಿಜೆಪಿ ಖಂಡಿತವಾಗಿಯೂ ಅಧಿಕಾರದಿಂದ ಕೆಳಗಿಳಿಯುತ್ತದೆ. ಆಗ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಅಮ್ರೋಹಾದ ಶಾಸಕ ಮೆಹಬೂಬ್ ಅಲಿ ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಬಿಜ್ನೋರ್ ಮುಖ್ಯಸ್ಥ ಶೇಖ್ ಜಾಕಿರ್ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ಧರ್ಮದ ಆಧಾರದ ಮೇಲೆ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ದ್ವೇಷವನ್ನು ಉತ್ತೇಜಿಸುವ ಹೇಳಿಕೆಯನ್ನು ಎಸ್​ಪಿ ಶಾಸಕ ನೀಡಿದ್ದಾರೆ ಎಂದು ಎಫ್ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಜಮ್ಮುವಿನಲ್ಲಿ ಸಭೆಯ ವೇಳೆ ಅಸ್ವಸ್ಥಗೊಂಡಿದ್ದ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಮೆಹಬೂಬ್ ಅಲಿ ಅವರ ಹೇಳಿಕೆಗಳ ವೀಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ, ಇದಕ್ಕೆ ಬಿಜೆಪಿಯಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲಿಯವರ ಹೇಳಿಕೆಯನ್ನು ಬಿಜೆಪಿಯ ಆಂಧ್ರಪ್ರದೇಶದ ಉಪಾಧ್ಯಕ್ಷರು ಸಹ ಟೀಕಿಸಿದ್ದಾರೆ. ಅವರು ಎಕ್ಸ್ ಪೋಸ್ಟ್‌ನಲ್ಲಿ ಈ ಬಗ್ಗೆ ಬರೆದಿದ್ದಾರೆ. ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದೆ, ಈಗ ಬಿಜೆಪಿಯ ಆಡಳಿತ ಕೊನೆಗೊಳ್ಳುತ್ತದೆ. ಇದು ಪಕ್ಷದೊಳಗೆ ಹಿಂದೂ ವಿರೋಧಿ ನಿಲುವನ್ನು ಪ್ರತಿಬಿಂಬಿಸುತ್ತದೆ. ಭಾರತವು 80% ಹಿಂದೂ ಆಗಿದ್ದರೂ ಎಸ್‌ಪಿ ನಾಯಕರು ತಮ್ಮ ನಿಜವಾದ ಉದ್ದೇಶಗಳನ್ನು ತೋರಿಸುವ ಇಂತಹ ವಿಭಜಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಶಾಸಕ ಮೆಹಬೂಬ್ ಅಲಿ ವಿರುದ್ಧ ಟೀಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’