AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Polls: ಮಹಾರಾಷ್ಟ್ರ ಚುನಾವಣೆಗೆ ಸಮಾನ ಸೀಟು ಹಂಚಿಕೆ ಸೂತ್ರಕ್ಕೆ ಮಹಾ ವಿಕಾಸ್​ ಅಘಾಡಿ ಒಪ್ಪಿಗೆ

ಮಹಾ ವಿಕಾಸ್​ ಅಘಾಡಿಯ ಮೈತ್ರಿ ಪಾಲುದಾರರು ಮೈತ್ರಿಯಲ್ಲಿ 'ದೊಡ್ಡ' ಅಥವಾ 'ಸಣ್ಣ' ಸಹೋದರ ಇರುವುದಿಲ್ಲ ಎಂದು ನಿರ್ಧರಿಸಿದ್ದಾರೆ ಎಂದು ಮೂಲಗಳು ಸೂಚಿಸಿವೆ. ಪ್ರತಿ ಪಕ್ಷವು ಸಮಾನ ಸಂಖ್ಯೆಯ ಸ್ಥಾನಗಳಲ್ಲಿ ಸ್ಪರ್ಧಿಸುತ್ತದೆ ಎಂದು ನಿರ್ಧರಿಸಲಾಗಿದೆ.

Maharashtra Polls: ಮಹಾರಾಷ್ಟ್ರ ಚುನಾವಣೆಗೆ ಸಮಾನ ಸೀಟು ಹಂಚಿಕೆ ಸೂತ್ರಕ್ಕೆ ಮಹಾ ವಿಕಾಸ್​ ಅಘಾಡಿ ಒಪ್ಪಿಗೆ
ಮಹಾ ವಿಕಾಸ್​ ಅಘಾಡಿ
Follow us
ಸುಷ್ಮಾ ಚಕ್ರೆ
|

Updated on: Jun 24, 2024 | 10:11 PM

ಮುಂಬೈ: ಮಹಾ ವಿಕಾಸ್ ಅಘಾಡಿ (ಎಂವಿಎ)ಯ ಮೈತ್ರಿ ಪಾಲುದಾರರು ಸಮಾನ ಸಂಖ್ಯೆಯ ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಆದರೆ, ಬಿಜೆಪಿ (BJP) ನೇತೃತ್ವದ ಮಹಾಯುತಿಯು ಈ ವರ್ಷದ ಅಕ್ಟೋಬರ್‌ನಲ್ಲಿ ನಡೆಯಲಿರುವ ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆಗೆ (Maharashtra Assembly Elections) ತನ್ನ ಸೂತ್ರವನ್ನು ಇನ್ನೂ ಅಂತಿಮಗೊಳಿಸಿಲ್ಲ.

ಮಹಾ ವಿಕಾಸ್​ ಅಘಾಡಿಯಲ್ಲಿ ಹೆಚ್ಚು ಸ್ಥಾನ ಪಡೆದಿರುವ ಮೂಲಗಳ ಪ್ರಕಾರ, ಮೈತ್ರಿ ಪಾಲುದಾರರಾದ ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಮತ್ತು ಶಿವಸೇನೆ (ಯುಬಿಟಿ) ಸಭೆಯು ಒಪ್ಪಿಕೊಂಡಿರುವ ಸೂತ್ರವು 288 ಸದಸ್ಯರ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ 96:96:96 ಆಗಿದೆ.

MVAಯ ಮೈತ್ರಿ ಪಾಲುದಾರರು ಮೈತ್ರಿಯಲ್ಲಿ ‘ದೊಡ್ಡ’ ಅಥವಾ ‘ಸಣ್ಣ’ ಸಹೋದರ ಇರುವುದಿಲ್ಲ ಎಂದು ನಿರ್ಧರಿಸಿದ್ದಾರೆ ಎಂದು ಮೂಲಗಳು ಸೂಚಿಸಿವೆ, ಪ್ರತಿ ಪಕ್ಷವು ಸಮಾನ ಸಂಖ್ಯೆಯ ಸ್ಥಾನಗಳಲ್ಲಿ ಸ್ಪರ್ಧಿಸುತ್ತದೆ. “ಹಂಚಿಕೆಯಾದ ಸ್ಥಾನಗಳಲ್ಲಿ ಆಯಾ ಪಕ್ಷಗಳು ತಮ್ಮ ಸಣ್ಣ ಮಿತ್ರಪಕ್ಷಗಳಾದ ಕಾಂಗ್ರೆಸ್‌ನಿಂದ ಸಮಾಜವಾದಿ ಪಕ್ಷ, ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ರೈತ ಮತ್ತು ಕಾರ್ಮಿಕರ ಪಕ್ಷ ಮತ್ತು ರೈತ ನಾಯಕ ರಾಜು ಶೆಟ್ಟಿ ನೇತೃತ್ವದ ಸ್ವಾಭಿಮಾನಿ ಶೆಟ್ಕರಿ ಸಂಘಟನೆ ಮತ್ತು ಎಡ ಪಕ್ಷಗಳು ಸಭೆ ನಡೆಸಿವೆ. ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಘಾಡಿ ಅವರು ಎಂವಿಎ ಜೊತೆ ಮೈತ್ರಿ ಮಾಡಿಕೊಳ್ಳಲು ಸಿದ್ಧರಿದ್ದರೆ, ಎಂವಿಎ ನಾಯಕರು ಅವರಿಗೂ ಅವಕಾಶ ಕಲ್ಪಿಸಲು ನಿರ್ಧರಿಸಿದ್ದಾರೆ” ಎಂದು ಹೆಸರು ಬಹಿರಂಗಪಡಿಸಲು ವಿನಂತಿಸಿದ ಹಿರಿಯ ಎಂವಿಎ ನಾಯಕರೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: Maharashtra Rains: ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಜೂ. 16ರವರೆಗೆ ಗುಡುಗು ಸಹಿತ ಮಳೆ ಆರ್ಭಟ

ಎಂವಿಎಯ ನಾಯಕ ಶರದ್ ಪವಾರ್ ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ಒಂದು ಸಭೆ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹಲವು ಸಭೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ 13 ಲೋಕಸಭಾ ಸಂಸದರು ಮತ್ತು ಒಬ್ಬ ಸ್ವತಂತ್ರ ಸಂಸದರೊಂದಿಗೆ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಹೇಳಿದ್ದಾರೆ. ಹಾಗಾಗಿ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸುವ ಕಾನೂನುಬದ್ಧ ಹಕ್ಕು ಕಾಂಗ್ರೆಸ್‌ಗೆ ಇದೆ. ಆದರೆ, ಮೈತ್ರಿಕೂಟದ ಹಿತಾಸಕ್ತಿಗಾಗಿ ಕೆಲವು ಸ್ಥಾನಗಳನ್ನು ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧರಾಗಿದ್ದಾರೆ.

ಇದನ್ನೂ ಓದಿ: Atal Setu: ಅಟಲ್ ಸೇತು ಮೇಲೆ ಬಿರುಕು; ಮಹಾರಾಷ್ಟ್ರ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ತಿರುಗೇಟು

ಬಿಜೆಪಿ 150 ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದ್ದು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 138 ಸ್ಥಾನಗಳನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಎನ್‌ಸಿಪಿ ನಡುವೆ ಹಂಚಿಕೆ ಮಾಡಲಾಗುತ್ತದೆ. ಶಿವಸೇನೆಯು 90 ರಿಂದ 100 ಸ್ಥಾನಗಳನ್ನು ಕೇಳುತ್ತಿದೆ ಮತ್ತು ಅಜಿತ್ ಪವಾರ್ 90 ಸ್ಥಾನಗಳನ್ನು ಕೇಳುತ್ತಿದ್ದಾರೆ. ಆದ್ದರಿಂದ ಮೂರೂ ಪಕ್ಷಗಳು ಈ ಸೀಟು ಹಂಚಿಕೆ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ