ಮಹಾರಾಷ್ಟ್ರ ಚುನಾವಣೆಗೆ ಮುನ್ನ ಎಂವಿಎ ಸಿಎಂ ಅಭ್ಯರ್ಥಿಯನ್ನು ಘೋಷಿಸುತ್ತಿಲ್ಲ: ಶರದ್ ಪವಾರ್

ಚುನಾವಣಾ ಫಲಿತಾಂಶದ ನಂತರ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ನಿರ್ಧಾರವಾಗಲಿದೆ. ಮೈತ್ರಿಕೂಟದಲ್ಲಿ ಯಾವ ಪಕ್ಷವು ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂಬುದರ ಆಧಾರದ ಮೇಲೆ ಅಭ್ಯರ್ಥಿಯನ್ನು ನಿರ್ಧರಿಸಲಾಗುತ್ತದೆ ಎಂದು ಪವಾರ್ ಕೊಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್ ಹೇಳಿದ್ದಾರೆ.

ಮಹಾರಾಷ್ಟ್ರ ಚುನಾವಣೆಗೆ ಮುನ್ನ ಎಂವಿಎ ಸಿಎಂ ಅಭ್ಯರ್ಥಿಯನ್ನು ಘೋಷಿಸುತ್ತಿಲ್ಲ: ಶರದ್ ಪವಾರ್
ಶರದ್ ಪವಾರ್
Follow us
|

Updated on: Sep 04, 2024 | 5:40 PM

ಮುಂಬೈ ಸೆಪ್ಟೆಂಬರ್ 04: ಪ್ರತಿಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಮುಖ್ಯಮಂತ್ರಿ ಸ್ಥಾನಕ್ಕೆ ಘೋಷಿತ ಅಭ್ಯರ್ಥಿಯನ್ನು ಚುನಾವಣಾ ಕಣಕ್ಕಿಳಿಸಲಿದೆ ಎಂಬ ವಾದವನ್ನು ಶರದ್ ಪವಾರ್ ಬುಧವಾರ  ತಳ್ಳಿಹಾಕಿದ್ದು, ಮುಂಬರುವ ವಿಧಾನಸಭೆ ಚುನಾವಣೆಗೆ ಮುನ್ನ ಎಂವಿಎಗೆ ಸಿಎಂ ಅಭ್ಯರ್ಥಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.  ಚುನಾವಣಾ ಫಲಿತಾಂಶದ ನಂತರ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ನಿರ್ಧಾರವಾಗಲಿದೆ. ಮೈತ್ರಿಕೂಟದಲ್ಲಿ ಯಾವ ಪಕ್ಷವು ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂಬುದರ ಆಧಾರದ ಮೇಲೆ ಅಭ್ಯರ್ಥಿಯನ್ನು ನಿರ್ಧರಿಸಲಾಗುತ್ತದೆ ಎಂದು ಪವಾರ್ ಕೊಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್ ಹೇಳಿದ್ದಾರೆ

MVA- ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಶರದ್ಚಂದ್ರ ಪವಾರ್), ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ಕಾಂಗ್ರೆಸ್‌ನ ಮೈತ್ರಿಕೂಟವಾಗಿದೆ.

ಕಾಂಗ್ರೆಸ್ ಮತ್ತು ಎನ್‌ಸಿಪಿ (ಎಸ್‌ಪಿ) ಮುಖ್ಯಮಂತ್ರಿ ಗಾದಿಗೆ ತಮ್ಮ ಮೈತ್ರಿಕೂಟದ ನಾಮನಿರ್ದೇಶಿತರು ಉದ್ಧವ್ ಠಾಕ್ರೆ ಎಂಬುದನ್ನು ಪದೇ ಪದೇ ತಿರಸ್ಕರಿಸಿದೆ,. ನವೆಂಬರ್ 2019 ರಲ್ಲಿ ರಚನೆಯಾದ MVA ಜೂನ್ 2022 ರವರೆಗೆ ಮಹಾರಾಷ್ಟ್ರವನ್ನು ಆಳಿತು, ಏಕನಾಥ್ ಶಿಂಧೆಯವರ ಬಂಡಾಯದ ನಂತರ ಠಾಕ್ರೆ ನೇತೃತ್ವದ ಸರ್ಕಾರವು ಪತನವಾಯಿತು, ಅವರು ಆಗಿನ ಏಕೀಕೃತ ಶಿವಸೇನೆಯನ್ನು ಸಹ ವಿಭಜಿಸಿದರು.

ಶಿಂಧೆ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದು, ಉದ್ಧವ್ ನಂತರ ಬಿಜೆಪಿ ಬೆಂಬಲದೊಂದಿಗೆ ಉನ್ನತ ಹುದ್ದೆಗೆ ಬಂದಿದ್ದಾರೆ. ಏತನ್ಮಧ್ಯೆ, ಅನುಭವಿ ರಾಜಕಾರಣಿ ಪವಾರ್, ‘ನವೆಂಬರ್ ಎರಡನೇ ವಾರದಲ್ಲಿ’ ಚುನಾವಣಾ ಪ್ರಕ್ರಿಯೆ ಮುಗಿಯುತ್ತದೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಇನ್ನೂ ಪ್ರಕಟಿಸಿಲ್ಲ.

ಇದನ್ನೂ ಓದಿ: ಇಂಡಿಯಾ ಬಣ ಪ್ರಧಾನಿ ನರೇಂದ್ರ ಮೋದಿಯನ್ನು ಮಾನಸಿಕವಾಗಿ ಸೋಲಿಸಿದೆ: ರಾಹುಲ್ ಗಾಂಧಿ 

“MVA ನಾಯಕರು ಸೆಪ್ಟೆಂಬರ್ 7 ರಿಂದ 9 ರವರೆಗೆ ಮಾತುಕತೆಗೆ ಕುಳಿತುಕೊಳ್ಳಬೇಕು. ಚರ್ಚೆಗಳಲ್ಲಿ ರೈತರು ಮತ್ತು ಕಾರ್ಮಿಕರ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ) ಸಹ ಸೇರಿರಬೇಕು. ಈ ಪಕ್ಷಗಳು ರಾಜ್ಯದಲ್ಲಿ ಕೆಲವು ಪ್ರಭಾವವನ್ನು ಹೊಂದಿವೆ ”ಎಂದು ಮಾಜಿ ಕೇಂದ್ರ ಸಚಿವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ