ಮುಂಬೈ ಅಕ್ಟೋಬರ್ 17: ಈ ತಿಂಗಳ ಆರಂಭದಲ್ಲಿ ಮುಂಬೈನಲ್ಲಿ ಹತ್ಯೆಗೀಡಾದ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರ ಪುತ್ರ ಜೀಶಾನ್ ಸಿದ್ದಿಕ್ ತನ್ನ ತಂದೆ ಮತ್ತು ಅವರ ಕುಟುಂಬಕ್ಕೆ ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಭಾವನಾತ್ಮಕ ಮನವಿಯಲ್ಲಿ, ಕಾಂಗ್ರೆಸ್ ಶಾಸಕರು ಬಾಬಾ ಸಿದ್ದಿಕ್ ಅವರ ಸಾವನ್ನು ರಾಜಕೀಯಗೊಳಿಸಬಾರದು ಎಂದು ಹೇಳಿದ್ದಾರೆ. ತನಗೆ ಮತ್ತು ಅವರ ಕುಟುಂಬಕ್ಕೆ ನ್ಯಾಯ ಬೇಕು ಎಂದು ಜೀಶಾನ್ ಸಿದ್ದಿಕ್ ಹೇಳಿದ್ದಾರೆ.
“ನನ್ನ ತಂದೆ ಬಡ ಅಮಾಯಕರ ಜೀವ ಮತ್ತು ಮನೆಗಳನ್ನು ರಕ್ಷಿಸುವ ಮತ್ತು ಉಳಿಸುವಲ್ಲಿ ತಮ್ಮ ಪ್ರಾಣವನ್ನು ಕಳೆದುಕೊಂಡರು. ಇಂದು, ನನ್ನ ಕುಟುಂಬ ಒಡೆದು ಹೋಗಿದೆ. ಆದರೆ ಅವರ ಸಾವು ರಾಜಕೀಯಗೊಳಿಸಬಾರದು. ಖಂಡಿತವಾಗಿಯೂ ವ್ಯರ್ಥವಾಗಬಾರದು. ನನಗೆ ನ್ಯಾಯ ಬೇಕು, ನನ್ನ ಕುಟುಂಬಕ್ಕೆ ನ್ಯಾಯ ಬೇಕು!” ಅವರು ಎಂದು ಜೀಶಾನ್ ಎಕ್ಸ್ ನಲ್ಲಿ ಬರೆದಿದ್ದಾರೆ.
My father lost his life protecting and saving the lives and homes of poor innocent people. Today, my family is broken but his death must not be politicised and definitely not go in vain.
I NEED JUSTICE, MY FAMILY NEEDS JUSTICE!— Zeeshan Siddique (@zeeshan_iyc) October 17, 2024
ಬಾಬಾ ಸಿದ್ದಿಕ್ ಅವರನ್ನು ಅಕ್ಟೋಬರ್ 12 ರಂದು ಮುಂಬೈನಲ್ಲಿರುವ ಅವರ ಕಚೇರಿಯ ಹೊರಗೆ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು.
ಮೂವರು ಶೂಟರ್‌ಗಳ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಮೂರನೇ ವ್ಯಕ್ತಿ ಶಿವಕುಮಾರ್ ಗೌತಮ್ ತಲೆಮರೆಸಿಕೊಂಡಿದ್ದಾನೆ.
ಷಡ್ಯಂತ್ರದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಶುಭಂ ಲೋಂಕರ್ ವಿರುದ್ಧ ಮುಂಬೈ ಪೊಲೀಸರು ಗುರುವಾರ ಲುಕ್‌ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಿದ್ದಾರೆ.
ಇದನ್ನೂ ಓದಿ: ಅಸ್ಸಾಂನಲ್ಲಿ ಹಳಿ ತಪ್ಪಿದ ಎಕ್ಸ್ಪ್ರೆಸ್ ರೈಲಿನ 8 ಬೋಗಿಗಳು
ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಶುಭಂ ಲೋಂಕರ್ ವಿರುದ್ಧ ಲುಕ್ ಔಟ್ ಸುತ್ತೋಲೆ (ಎಲ್ ಒಸಿ) ಹೊರಡಿಸಿದ್ದೇವೆ. ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದ ಆರೋಪಿಗಳಿಗಾಗಿ ಪೊಲೀಸರು ನಿರಂತರವಾಗಿ ಶೋಧ ನಡೆಸುತ್ತಿದ್ದಾರೆ ಎಂದು ಅದು ಹೇಳಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ