ಪ್ರಧಾನಿ ಮೋದಿಯನ್ನು ಭೇಟಿಯಾದ ಮೈ ಹೋಮ್ ಗ್ರೂಪ್ ಅಧ್ಯಕ್ಷ ಡಾ. ಜೂಪಲ್ಲಿ ರಾಮೇಶ್ವರ ರಾವ್ ಮತ್ತು ರಾಮು ರಾವ್

ಮೈ ಹೋಮ್ ಗ್ರೂಪ್ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ಜೂಪಲ್ಲಿ ರಾಮೇಶ್ವರ್ ರಾವ್ ಮತ್ತು ಅವರ ಪುತ್ರ, ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ಜೂಪಲ್ಲಿ ರಾಮುರಾವ್ ಅವರು ಇಂದು (ನವೆಂಬರ್ 7) ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

ಪ್ರಧಾನಿ ಮೋದಿಯನ್ನು ಭೇಟಿಯಾದ ಮೈ ಹೋಮ್ ಗ್ರೂಪ್ ಅಧ್ಯಕ್ಷ ಡಾ. ಜೂಪಲ್ಲಿ ರಾಮೇಶ್ವರ ರಾವ್ ಮತ್ತು ರಾಮು ರಾವ್
ಮೋದಿಯನ್ನು ಭೇಟಿಯಾದ ಮೈ ಹೋಮ್ ಗ್ರೂಪ್ ಅಧ್ಯಕ್ಷ ಜೂಪಲ್ಲಿ ರಾಮೇಶ್ವರ ರಾವ್ ಮತ್ತು ರಾಮು ರಾವ್
Follow us
ಸುಷ್ಮಾ ಚಕ್ರೆ
|

Updated on: Nov 07, 2024 | 10:38 PM

ನವದೆಹಲಿ: ಮೈ ಹೋಮ್ ಗ್ರೂಪ್ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಡಾ. ಜೂಪಲ್ಲಿ ರಾಮೇಶ್ವರ್ ರಾವ್ ಹಾಗೂ ಮೈ ಹೋಂ ಗ್ರೂಪ್ ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ಜೂಪಲ್ಲಿ ರಾಮು ರಾವ್ ಇಂದು (ಗುರುವಾರ) ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಜೂಪಲ್ಲಿ ರಾಮೇಶ್ವರ್ ರಾವ್, ರಾಮುರಾವ್ ಪ್ರಧಾನಿ ಮೋದಿ ಅವರನ್ನು ಸನ್ಮಾನಿಸಿದ್ದಾರೆ.

ಪ್ರಧಾನಿ ಮೋದಿಯವರ ನಿವಾಸದಲ್ಲಿ ಅವರನ್ನು ಭೇಟಿಯಾದ ಮೈ ಹೋಂ ಗ್ರೂಪ್ ಅಧ್ಯಕ್ಷರಾದ ಜೂಪಲ್ಲಿ ರಾಮೇಶ್ವರ ರಾವ್ ಮೋದಿಯವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜೂಪಲ್ಲಿ ರಾಮೇಶ್ವರ್ ರಾವ್ ಮತ್ತು ರಾಮು ರಾವ್ ಅವರೊಂದಿಗೆ ಆತ್ಮೀಯವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಗೌರವ ಮತ್ತು ಕೃತಜ್ಞತೆಯ ಸಂಕೇತವಾಗಿ ಪ್ರಧಾನಿ ಮೋದಿಯವರಿಗೆ ಶಾಲು ಮತ್ತು ವೆಂಕಟೇಶ್ವರ ಸ್ವಾಮಿಯ ಪ್ರತಿಮೆಯನ್ನು ನೀಡಿದರು.

ಇದನ್ನೂ ಓದಿ: US Presidential Poll: ಡೊನಾಲ್ಡ್ ಟ್ರಂಪ್ ಗೆಲುವು, ಐತಿಹಾಸಿಕ ವಿಜಯಕ್ಕಾಗಿ ಸ್ನೇಹಿತನ ಅಭಿನಂದಿಸಿದ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಆಧ್ಯಾತ್ಮಿಕ ಮೌಲ್ಯಗಳನ್ನು ಹೊಂದಿರುವ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಅವರು ಜನರಿಗಾಗಿ ಮೀಸಲಾದ ನಾಯಕ. ಆಧ್ಯಾತ್ಮಿಕವಾಗಿ ಮತ್ತು ರಾಜಕೀಯವಾಗಿ, ಪ್ರಧಾನಿ ಮೋದಿ ಅವರು ಮೊದಲ ಸ್ಥಾನದಲ್ಲಿ ನಿಲ್ಲುವುದರೊಂದಿಗೆ ವಿಶ್ವದ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಎಲ್ಲ ದೇಶಗಳ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಮೂಲಕ ಇತರೆ ದೇಶಗಳೊಂದಿಗೆ ಭಾರತದ ಸಂಬಂಧವನ್ನು ಬಲಗೊಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ