ನನ್ನ ಹೆಸರು ಸಾವರ್ಕರ್ ಅಲ್ಲ; ನಾನು ಗಾಂಧಿ, ಕ್ಷಮೆ ಕೇಳಲ್ಲ: ರಾಹುಲ್ ಗಾಂಧಿ

ಕ್ಷಮೆ ಕೇಳುತ್ತೀರಾ ಎಂದು ಕೇಳಿದಾಗ ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ಗಾಂಧಿ, ನಾನು ಕ್ಷಮೆ ಕೇಳುವುದಿಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟವಾಗಿಯೇ ಹೇಳಿದ್ದಾರೆ

ನನ್ನ ಹೆಸರು ಸಾವರ್ಕರ್ ಅಲ್ಲ; ನಾನು ಗಾಂಧಿ, ಕ್ಷಮೆ ಕೇಳಲ್ಲ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on: Mar 25, 2023 | 7:43 PM

ದೆಹಲಿ: ಸಂಸತ್ತಿನಿಂದ ಅನರ್ಹಗೊಳಿಸಿದ ಒಂದು ದಿನದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ(Rahul Gandhi) ಪ್ರಧಾನಿ ಮೋದಿ (PM Modi) ತಮ್ಮ ಮುಂದಿನ ಭಾಷಣದ ಬಗ್ಗೆ ಭಯಪಡುತ್ತಾರೆ ಎಂದಿದ್ದಾರೆ.ಲಂಡನ್‌ನಲ್ಲಿ ನೀಡಿದ ಹೇಳಿಕೆ ಮತ್ತು ಮಾನನಷ್ಟ ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ ಅವರು ತಮ್ಮ ಹೇಳಿಕೆಗಳ ಬಗ್ಗೆ ಏಕೆ ಕ್ಷಮೆಯಾಚಿಸಲಿಲ್ಲ ಎಂದು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ನನ್ನ ಹೆಸರು ಸಾವರ್ಕರ್ (Savarkar) ಅಲ್ಲ, ನಾನು ಕ್ಷಮೆ ಕೇಳಲ್ಲ ಎಂದಿದ್ದಾರೆ ರಾಹುಲ್. ಪ್ರಧಾನಿ ನನ್ನ ಮುಂದಿನ ಭಾಷಣಕ್ಕೆ ಹೆದರಿದ್ದರಿಂದ ನನ್ನನ್ನು ಅನರ್ಹಗೊಳಿಸಲಾಗಿದೆ. ನಾನು ಅವರ ಕಣ್ಣುಗಳಲ್ಲಿ ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನಾನು ಸಂಸತ್ತಿನಲ್ಲಿ ಮಾತನಾಡಬೇಕು ಎಂದು ಅವರು ಬಯಸುವುದಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ರಾಹುಲ್ ಹೇಳಿದ್ದಾರೆ.

ಕ್ಷಮೆ ಕೇಳುತ್ತೀರಾ ಎಂದು ಕೇಳಿದಾಗ ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ಗಾಂಧಿ, ನಾನು ಕ್ಷಮೆ ಕೇಳುವುದಿಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟವಾಗಿಯೇ ಹೇಳಿದ್ದಾರೆ.

ದೇಶದ ಆಂತರಿಕ ವ್ಯವಹಾರಗಳಲ್ಲಿ ಅಂತರಾಷ್ಟ್ರೀಯ ಶಕ್ತಿಗಳ ಹಸ್ತಕ್ಷೇಪವನ್ನು ನಾನು ಬಯಸಿದ್ದೆ ಎಂಬ ಬಿಜೆಪಿಯ ಆರೋಪಗಳನ್ನು ನಿರಾಕರಿಸಿದ ರಾಹುಲ್, ತಮ್ಮ ಲಂಡನ್ ಹೇಳಿಕೆಗಳ ಮೇಲಿನ ಆರೋಪಗಳಿಗೆ ಸದನದಲ್ಲಿ ಪ್ರತಿಕ್ರಿಯಿಸಲು ಅವಕಾಶ ನೀಡುವಂತೆ ಸ್ಪೀಕರ್ ಅವರನ್ನು ಕೇಳಿದ್ದೇನೆ ಎಂದು ಅವರು ಹೇಳಿದರು.

“ನಾನು ಭಾರತ ವಿರೋಧಿ ಶಕ್ತಿಗಳಿಗೆ ಸಹಾಯ ಮಾಡುತ್ತಿದ್ದೇನೆ ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದಾರೆ. ಈ ಆರೋಪಗಳಿಗೆ ಪ್ರತಿಕ್ರಿಯಿಸುವುದು ನನ್ನ ಹಕ್ಕು ಎಂದು ನಾನು ಸ್ಪೀಕರ್‌ಗೆ ಹೇಳಿದೆ. ಆದರೆ ಅವರು ನನಗೆ ಅವಕಾಶ ನೀಡಲಿಲ್ಲ ಎಂದಿದ್ದಾರೆ ರಾಹುಲ್. ಏತನ್ಮಧ್ಯೆ, ಬಿಜೆಪಿ ರಾಹುಲ್ ಗಾಂಧಿ ಮೇಲೆ ದಾಳಿ ಮತ್ತಷ್ಟು ಹೆಚ್ಚಿಸಿದ್ದು ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ಬಲಿಪಶು ಎಂದು ಬಿಂಬಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ: Rahul Gandhi Press Conference: ಅದಾನಿ ಜತೆ ಮೋದಿಗಿರುವ ಸಂಬಂಧ ಏನು? ನಾನು ಒಂದೇ ಪ್ರಶ್ನೆ ಕೇಳುತ್ತಿದ್ದೇನೆ, ಉತ್ತರಬೇಕು: ರಾಹುಲ್ ಗಾಂಧಿ

ಅವರೊಬ್ಬರೇ ಅಲ್ಲ, ಬಿಜೆಪಿಯ ಆರು ಮಂದಿ ಸೇರಿದಂತೆ ದೇಶಾದ್ಯಂತ 32 ನಾಯಕರನ್ನು ಅನರ್ಹಗೊಳಿಸಲಾಗಿದೆ. ಕರ್ನಾಟಕದಲ್ಲಿ ಚುನಾವಣಾ ಲಾಭಕ್ಕಾಗಿ ರಾಹುಲ್ ಗಾಂಧಿಯನ್ನು ಬಲಿಪಶು ಎಂದು ಬಿಂಬಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ