ದೆಹಲಿ: ಸಂಸತ್ತಿನಿಂದ ಅನರ್ಹಗೊಳಿಸಿದ ಒಂದು ದಿನದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ(Rahul Gandhi) ಪ್ರಧಾನಿ ಮೋದಿ (PM Modi) ತಮ್ಮ ಮುಂದಿನ ಭಾಷಣದ ಬಗ್ಗೆ ಭಯಪಡುತ್ತಾರೆ ಎಂದಿದ್ದಾರೆ.ಲಂಡನ್‌ನಲ್ಲಿ ನೀಡಿದ ಹೇಳಿಕೆ ಮತ್ತು ಮಾನನಷ್ಟ ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ ಅವರು ತಮ್ಮ ಹೇಳಿಕೆಗಳ ಬಗ್ಗೆ ಏಕೆ ಕ್ಷಮೆಯಾಚಿಸಲಿಲ್ಲ ಎಂದು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ನನ್ನ ಹೆಸರು ಸಾವರ್ಕರ್ (Savarkar) ಅಲ್ಲ, ನಾನು ಕ್ಷಮೆ ಕೇಳಲ್ಲ ಎಂದಿದ್ದಾರೆ ರಾಹುಲ್. ಪ್ರಧಾನಿ ನನ್ನ ಮುಂದಿನ ಭಾಷಣಕ್ಕೆ ಹೆದರಿದ್ದರಿಂದ ನನ್ನನ್ನು ಅನರ್ಹಗೊಳಿಸಲಾಗಿದೆ. ನಾನು ಅವರ ಕಣ್ಣುಗಳಲ್ಲಿ ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನಾನು ಸಂಸತ್ತಿನಲ್ಲಿ ಮಾತನಾಡಬೇಕು ಎಂದು ಅವರು ಬಯಸುವುದಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ರಾಹುಲ್ ಹೇಳಿದ್ದಾರೆ.
ಕ್ಷಮೆ ಕೇಳುತ್ತೀರಾ ಎಂದು ಕೇಳಿದಾಗ ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ಗಾಂಧಿ, ನಾನು ಕ್ಷಮೆ ಕೇಳುವುದಿಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟವಾಗಿಯೇ ಹೇಳಿದ್ದಾರೆ.
ದೇಶದ ಆಂತರಿಕ ವ್ಯವಹಾರಗಳಲ್ಲಿ ಅಂತರಾಷ್ಟ್ರೀಯ ಶಕ್ತಿಗಳ ಹಸ್ತಕ್ಷೇಪವನ್ನು ನಾನು ಬಯಸಿದ್ದೆ ಎಂಬ ಬಿಜೆಪಿಯ ಆರೋಪಗಳನ್ನು ನಿರಾಕರಿಸಿದ ರಾಹುಲ್, ತಮ್ಮ ಲಂಡನ್ ಹೇಳಿಕೆಗಳ ಮೇಲಿನ ಆರೋಪಗಳಿಗೆ ಸದನದಲ್ಲಿ ಪ್ರತಿಕ್ರಿಯಿಸಲು ಅವಕಾಶ ನೀಡುವಂತೆ ಸ್ಪೀಕರ್ ಅವರನ್ನು ಕೇಳಿದ್ದೇನೆ ಎಂದು ಅವರು ಹೇಳಿದರು.
#WATCH | “My name is not Savarkar, it is Gandhi and Gandhi never offers an apology,” says Rahul Gandhi during his press conference in Delhi pic.twitter.com/jPbgqXr19r
— ANI (@ANI) March 25, 2023
“ನಾನು ಭಾರತ ವಿರೋಧಿ ಶಕ್ತಿಗಳಿಗೆ ಸಹಾಯ ಮಾಡುತ್ತಿದ್ದೇನೆ ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದಾರೆ. ಈ ಆರೋಪಗಳಿಗೆ ಪ್ರತಿಕ್ರಿಯಿಸುವುದು ನನ್ನ ಹಕ್ಕು ಎಂದು ನಾನು ಸ್ಪೀಕರ್‌ಗೆ ಹೇಳಿದೆ. ಆದರೆ ಅವರು ನನಗೆ ಅವಕಾಶ ನೀಡಲಿಲ್ಲ ಎಂದಿದ್ದಾರೆ ರಾಹುಲ್.
ಏತನ್ಮಧ್ಯೆ, ಬಿಜೆಪಿ ರಾಹುಲ್ ಗಾಂಧಿ ಮೇಲೆ ದಾಳಿ ಮತ್ತಷ್ಟು ಹೆಚ್ಚಿಸಿದ್ದು ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ಬಲಿಪಶು ಎಂದು ಬಿಂಬಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.
ಅವರೊಬ್ಬರೇ ಅಲ್ಲ, ಬಿಜೆಪಿಯ ಆರು ಮಂದಿ ಸೇರಿದಂತೆ ದೇಶಾದ್ಯಂತ 32 ನಾಯಕರನ್ನು ಅನರ್ಹಗೊಳಿಸಲಾಗಿದೆ. ಕರ್ನಾಟಕದಲ್ಲಿ ಚುನಾವಣಾ ಲಾಭಕ್ಕಾಗಿ ರಾಹುಲ್ ಗಾಂಧಿಯನ್ನು ಬಲಿಪಶು ಎಂದು ಬಿಂಬಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ