AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಶಿಫ್ಟ್​​​ ಮುಗಿಯಿತು, ಅರ್ಧದಲ್ಲಿ ಬಿಟ್ಟು ಹೋದ ಪೈಲಟ್, ಡಿಸಿಎಂ ಏಕನಾಥ್ ಶಿಂಧೆ ವಿಮಾನ ನಿಲ್ದಾಣದಲ್ಲಿ ಬಾಕಿ

ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ವೈಯಕ್ತಿಕ ವಿಮಾನದ ಪೈಲಟ್ ತಮ್ಮ ಕರ್ತವ್ಯದ ಸಮಯ ಮುಗಿದಿದೆ ಎಂದು ಮುಖ್ಯಮಂತ್ರಿಗಳನ್ನು ಅರ್ಧದಲ್ಲೇ ಬಿಟ್ಟು ಹೋಗಿರುವ ಘಟನೆ ಶುಕ್ರವಾರ ನಡೆದಿದೆ. ಮಧ್ಯಾಹ್ನ 3.45 ಕ್ಕೆ ಜಲಗಾಂವ್‌ಗೆ ಆಗಮಿಸಬೇಕಿತ್ತು ಆದರೆ ತಾಂತ್ರಿಕ ಕಾರಣಗಳಿಂದ ಸುಮಾರು ಎರಡೂವರೆ ಗಂಟೆಗಳ ಕಾಲ ವಿಳಂಬವಾಯಿತು.

ನನ್ನ ಶಿಫ್ಟ್​​​ ಮುಗಿಯಿತು, ಅರ್ಧದಲ್ಲಿ ಬಿಟ್ಟು ಹೋದ ಪೈಲಟ್, ಡಿಸಿಎಂ ಏಕನಾಥ್ ಶಿಂಧೆ ವಿಮಾನ ನಿಲ್ದಾಣದಲ್ಲಿ ಬಾಕಿ
ಏಕನಾಥ್ ಶಿಂಧೆ
ಅಕ್ಷಯ್​ ಪಲ್ಲಮಜಲು​​
|

Updated on: Jun 07, 2025 | 12:40 PM

Share

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರು ಶುಕ್ರವಾರ ಜಲಗಾಂವ್‌ನಿಂದ ಮುಂಬೈಗೆ ವಿಮಾನದಲ್ಲಿ ಪ್ರಯಾಣ ಮಾಡಬೇಕಿತ್ತು. ಆದರೆ ಈ ಹಾರಾಟ ಸುಮಾರು ಒಂದು ಗಂಟೆ ವಿಳಂಬವಾಯಿತು. ಇದಕ್ಕೆ ಕಾರಣ ಕೇಳಿದ್ರೆ ಅಚ್ಚರಿ ಪಡುತ್ತೀರಾ, ಹೌದು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ವೈಯಕ್ತಿಕ ವಿಮಾನದ ಪೈಲಟ್ (flight delay) ತಮ್ಮ ಕರ್ತವ್ಯದ ಸಮಯ ಮುಗಿದಿದೆ ಎಂದು ಮುಖ್ಯಮಂತ್ರಿಗಳನ್ನು ಅರ್ಧದಲ್ಲೇ ಬಿಟ್ಟು ಹೋಗಿದ್ದಾರೆ. ಮೂಲಗಳ ಪ್ರಕಾರ ಏಕನಾಥ್ ಶಿಂಧೆ ಜಲಗಾಂವ್‌ನಿಂದ ಹೊರಡಲು ಸಿದ್ಧತೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಮಧ್ಯಾಹ್ನ 3.45 ಕ್ಕೆ ಜಲಗಾಂವ್‌ಗೆ ಆಗಮಿಸಬೇಕಿತ್ತು ಆದರೆ ತಾಂತ್ರಿಕ ಕಾರಣಗಳಿಂದ ಸುಮಾರು ಎರಡೂವರೆ ಗಂಟೆಗಳ ಕಾಲ ವಿಳಂಬವಾಯಿತು. ನಂತರ ವಿಮಾನ ಪ್ರಯಾಣವನ್ನು ಮೊಟಕುಗೊಳಿಸಿ ರಸ್ತೆ ಮೂಲಕ ಮುಕ್ತೈನಗರಕ್ಕೆ ಪ್ರಯಾಣ ಬೆಳೆಸಿದರು. ಈ ವೇಳೆ ಸಚಿವರಾದ ಗಿರೀಶ್ ಮಹಾಜನ್ ಮತ್ತು ಗುಲಾಬ್‌ರಾವ್ ಪಾಟೀಲ್ ಮತ್ತು ಇತರ ಕೆಲವು ಆಡಳಿತ ಅಧಿಕಾರಿಗಳು ಇದ್ದರು.

ಪಾಲ್ಖಿ ಯಾತ್ರೆಯಲ್ಲಿ ಭಾಗವಹಿಸಿ ಸಂತ ಮುಕ್ತಾಯಿ ದೇವಸ್ಥಾನಕ್ಕೆ ಭೇಟಿ ನೀಡಿ, ಅಲ್ಲಿಂದ ಶಿಂಧೆ ಮತ್ತು ಅವರ ತಂಡವು ರಾತ್ರಿ 9.15 ಕ್ಕೆ ಜಲಗಾಂವ್ ವಿಮಾನ ನಿಲ್ದಾಣಕ್ಕೆ ಮರಳಿತು. ಆದರೆ ಪೈಲಟ್ ತನ್ನ ಕೆಲಸದ ಸಮಯ ಮುಗಿದಿದೆ ಎಂದು ವಿಮಾನಯಾಣಕ್ಕೆ ನಿರಾಕರಿಸಿದ್ದಾರೆ. ತನ್ನ ಕರ್ತವ್ಯದ ಸಮಯ ಮುಗಿದಿರುವುದರಿಂದ, ಹಾರಾಟ ನಡೆಸಲು ಹೊಸ ಅನುಮತಿ ಪಡೆಯಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ಮೂಲಗಳು ಹೇಳುವಂತೆ, ಪೈಲಟ್ ಟೇಕಾಫ್ ಮಾಡಲು ನಿರಾಕರಿಸಿದ್ದಕ್ಕೆ ಅನಾರೋಗ್ಯದ ಕಾರಣವೂ ಇದೆ ಎಂದು ಹೇಳಿದ್ದಾರೆ.

ಆದರೆ ಈ ವೇಳೆ ಉಪಮುಖ್ಯಮಂತ್ರಿ ಜತೆಗಿದ್ದ ಮಹಾಜನ್, ಶ್ರೀ ಪಾಟೀಲ್ ಮತ್ತು ಜೊತೆಗಿದ್ದ ಇತರ ಅಧಿಕಾರಿಗಳು ಪೈಲಟ್‌ನ ಮನವೊಲಿಸಲು ಪ್ರಯತ್ನಿಸಿದರು. 45 ನಿಮಿಷಗಳ ಚರ್ಚೆಯ ನಂತರ ಅವರನ್ನು ಹಾರಲು ಮನವೊಲಿಸುವಲ್ಲಿ ಯಶಸ್ವಿಯಾದರು ಎಂದು ಹೇಳಲಾಗಿದೆ. ನಿರ್ಗಮನಕ್ಕೆ ಅನುಮತಿ ನೀಡುವ ಬಗ್ಗೆ ಮಹಾಜನ್ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ ನಂತರ ವಿಮಾನ ಮುಂಬೈಗೆ ಹೊರಟಿತು. ಪೈಲಟ್‌ಗೆ ಆರೋಗ್ಯಕ್ಕೆ ಸಂಬಂಧಿಸಿದ ಕಾಳಜಿ ಮತ್ತು ಸಮಯದ ಸಮಸ್ಯೆ ಇತ್ತು. ಕೆಲವು ತಾಂತ್ರಿಕ ತೊಂದರೆಗಳೂ ಇದ್ದವು. ನಾವು ವಿಮಾನಯಾನ ಕಂಪನಿಯೊಂದಿಗೆ ಮಾತನಾಡಿದೆವು, ಮತ್ತು ಅವರು ಪೈಲಟ್‌ಗೆ ತಮ್ಮದೇ ಆದ ರೀತಿಯಲ್ಲಿ ಪರಿಸ್ಥಿತಿಯನ್ನು ವಿವರಿಸಿದರು. ಇದು ಒಂದು ಸಣ್ಣ ಸಮಸ್ಯೆಯಾಗಿತ್ತು ಎಂದು ಮಹಾಜನ್ ಹೇಳಿದ್ದಾರೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನದ ಅಗತ್ಯವಿದೆ, ಅಂದು ನನ್ನನ್ನು ಸ್ವಲ್ಪ ಕೆಳಮಟ್ಟಕ್ಕೆ ಇಳಿಸಲಾಗಿತ್ತು: ಒಮರ್ ಅಬ್ದುಲ್ಲಾ

ಇನ್ನು ಕೆಲವೊಂದು ಮೂಲಗಳ ಪ್ರಕಾರ, ಮುಂಬೈನಲ್ಲಿ ಮಹಿಳೆಯೊಬ್ಬರಿಗೆ ಮೂತ್ರಪಿಂಡದ ಶಸ್ತ್ರಚಿಕಿತ್ಸೆ ಇದ್ದ ಕಾರಣ ತುರ್ತುದಾಗಿ ವಿಮಾನಯಾನ ಮಾಡಬೇಕಿತ್ತು. ಶೀತಲ್ ಪಾಟೀಲ್ ಎಂಬ ಮಹಿಳೆ ತನ್ನ ಪತಿಯೊಂದಿಗೆ ಮುಂಬೈಗೆ ಪ್ರಯಾಣಿಸಬೇಕಿತ್ತು, ಆದರೆ ದಂಪತಿಗಳು ತಮ್ಮ ವಿಮಾನವನ್ನು ಮಿಸ್​​​ ಮಾಡಿಕೊಂಡ ಕಾರಣ ತಕ್ಷಣದಲ್ಲಿ ಮುಂಬೈಗೆ ಪ್ರಯಾಣಿಸಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಶಿಂಧೆ ಅವರಿಗೆ ಮಹಾಜನ್ ವಿವರಿಸಿದ್ದಾರೆ. ತಕ್ಷಣವೇ ಮಹಿಳೆಯನ್ನು ಮುಂಬೈಗೆ ವಿಮಾನದಲ್ಲಿ ಸಾಗಿಸಲು ಮುಂದಾದರು. ಮುಂಬೈ ವಿಮಾನ ನಿಲ್ದಾಣದಲ್ಲಿ ಆಂಬ್ಯುಲೆನ್ಸ್ ಸೇವೆಗಳನ್ನು ಸಿದ್ಧವಾಗಿರಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ