AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ’; ಕಾಕ್ರೋಚ್ ವಿವಾದಕ್ಕೆ ಸಿಜೆಐ ಸೂರ್ಯಕಾಂತ್ ಬೇಸರ

ಸೂಕ್ತ ಸಂದರ್ಭ ಮತ್ತು ಹಿನ್ನೆಲೆಯಿಲ್ಲದೆ ನ್ಯಾಯಾಲಯದ ಕಲಾಪಗಳ ವೀಡಿಯೊ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ದೇಶದ ಯುವಜನರನ್ನು ಹಾದಿತಪ್ಪಿಸುವ ದುರುದ್ದೇಶದಿಂದ ತಮ್ಮ ಹೇಳಿಕೆಗಳನ್ನು "ತಪ್ಪಾಗಿ ಬಿಂಬಿಸಲಾಗಿದೆ" ಮತ್ತು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಕೋರ್ಟ್ ವಿಚಾರಣೆಯ ವೇಳೆ ಸಿಜೆಐ ಸೂರ್ಯಕಾಂತ್ ನಿರುದ್ಯೋಗಿಗಳನ್ನು ಕಾಕ್ರೋಚ್​ (ಜಿರಳೆ) ಎಂದು ಕರೆದಿದ್ದಾರೆಂದು ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಯಾಗಿತ್ತು.

'ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ'; ಕಾಕ್ರೋಚ್ ವಿವಾದಕ್ಕೆ ಸಿಜೆಐ ಸೂರ್ಯಕಾಂತ್ ಬೇಸರ
Cji Surya Kant
ಸುಷ್ಮಾ ಚಕ್ರೆ
|

Updated on: Aug 14, 2026 | 10:18 PM

Share

ನವದೆಹಲಿ:, ಆಗಸ್ಟ್ 14: “ದೇಶದ ಯುವಜನರನ್ನು ಹಾದಿತಪ್ಪಿಸುವ ದುರುದ್ದೇಶದಿಂದ ನನ್ನ ಹೇಳಿಕೆಗಳನ್ನು ತಪ್ಪಾಗಿ ಬಿಂಬಿಸಲಾಗಿದೆ ಮತ್ತು ದುರ್ಬಳಕೆ ಮಾಡಿಕೊಳ್ಳಲಾಗಿದೆ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ (CJI Surya Kant) ಹೇಳಿದ್ದಾರೆ. ಮೇ 15ರಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವೊಂದರ ವಿಚಾರಣೆ ನಡೆಸುವಾಗ ಸಿಜೆಐ, ನಕಲಿ ಪದವಿಗಳನ್ನು ಹೊಂದಿರುವ ಕೆಲವು ವ್ಯಕ್ತಿಗಳನ್ನು ಜಿರಳೆಗಳಿಗೆ ಹೋಲಿಸಿದ್ದರು. ಅಂತಹ ವ್ಯಕ್ತಿಗಳು ವ್ಯವಸ್ಥೆಯ ವಿರುದ್ಧ ವಾಗ್ದಾಳಿ ನಡೆಸಲು ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಆರ್‌ಟಿಐ (RTI) ಕಾರ್ಯಕರ್ತರಾಗಿ ಹೊರಹೊಮ್ಮುತ್ತಾರೆ ಎಂದು ಅವರು ಹೇಳಿದ್ದರು.

ಸಿಜೆಐ ಅವರ ಈ ಹೇಳಿಕೆಯು ಯುವಜನರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಇದು “ಕಾಕ್ರೋಚ್ ಜನತಾ ಪಾರ್ಟಿ” (CJP) ಎಂಬ ವ್ಯಂಗ್ಯಾತ್ಮಕ ಆನ್‌ಲೈನ್ ಚಳವಳಿಗೂ ಕಾರಣವಾಗಿತ್ತು. ಬಳಿಕ ಕಾಕ್ರೋಚ್ ಜನತಾ ಪಾರ್ಟಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಿತ್ತು.

ಇದನ್ನೂ ಓದಿ: ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಿಸಬೇಡಿ ಎಂದಿದ್ದ ನಲ್ಸಾರ್ ವಿದ್ಯಾರ್ಥಿಗಳ ಈ ವರ್ಷದ ನೋಂದಣಿ ತಡೆಹಿಡಿದ ಬಾರ್ ಕೌನ್ಸಿಲ್!

ಡಿಡಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸಿಜೆಐ ಸೂರ್ಯಕಾಂತ್, ಇತ್ತೀಚಿನ ದಿನಗಳಲ್ಲಿ ನ್ಯಾಯಾಲಯದ ಕಲಾಪಗಳ ವೀಡಿಯೊ ತುಣುಕುಗಳನ್ನು ಯಾವುದೇ ಸರಿಯಾದ ಹಿನ್ನೆಲೆಯಿಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿದೆ ಎಂದಿದ್ದಾರೆ. ನಡೆದ ಘಟನೆ ನಿಜಕ್ಕೂ ದುರದೃಷ್ಟಕರ ಎಂದ ಸಿಜೆಐ ಸೂರ್ಯ ಕಾಂತ್, ಸಂಬಂಧಪಟ್ಟ ಜನರ ಬಗ್ಗೆ ಇಂತಹ ವಿಷಯಗಳನ್ನು ತಾವು ಎಂದಿಗೂ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

“ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ ಮತ್ತು ದುರ್ಬಳಕೆ ಮಾಡಿಕೊಳ್ಳಲಾಗಿದೆ. ನಾನು ಹೇಳದೇ ಇರುವುದನ್ನು ಹೇಳಿದಂತೆ ಪ್ರಸ್ತುತಪಡಿಸಲಾಗಿದೆ. ಇದು ಅತ್ಯಂತ ದುರದೃಷ್ಟಕರ. ವಿಶೇಷವಾಗಿ, ದೇಶದ ಯುವಕರನ್ನು ಹಾದಿತಪ್ಪಿಸುವ ಬೃಹತ್ ದುರುದ್ದೇಶಪೂರಿತ ಯತ್ನ ಇದಾಗಿದೆ” ಎಂದು ಸಿಜೆಐ ಹೇಳಿದರು.

ಇದನ್ನೂ ಓದಿ: ಕೆಲವೊಮ್ಮೆ ಮಕ್ಕಳು ತಪ್ಪು ಮಾಡುತ್ತಾರೆ; ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿದಾರ ಪೇಪರ್ ಎಸೆದ ಘಟನೆಗೆ ಸಿಜೆಐ ಪ್ರತಿಕ್ರಿಯೆ

ನ್ಯಾಯಾಂಗ ಕಲಾಪಗಳ ಬಗ್ಗೆ ವರದಿ ಮಾಡುವಾಗ ಮಾಧ್ಯಮಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಕೋರಿದ ಸಿಜೆಐ, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us