ಚೆನ್ನೈ ಬಳಿ ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ; 2 ಬೋಗಿಗಳಿಗೆ ಬೆಂಕಿ

|

Updated on: Oct 11, 2024 | 10:39 PM

ತಮಿಳುನಾಡಿನಲ್ಲಿ ಸರಕು ಸಾಗಣೆ ಮಾಡುತ್ತಿದ್ದ ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿರುವ ಘಟನೆ ಇಂದು ಸಂಜೆ ನಡೆದಿದೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಆದರೆ, ಯಾವುದೇ ಪ್ರಾಣಾಪಾಯವಾದ ಬಗ್ಗೆ ವರದಿಯಾಗಿಲ್ಲ.

ಚೆನ್ನೈ ಬಳಿ ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ; 2 ಬೋಗಿಗಳಿಗೆ ಬೆಂಕಿ
ತಮಿಳುನಾಡಿನಲ್ಲಿ ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ
Follow us on

ಚೆನ್ನೈ: ತಮಿಳುನಾಡಿನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಗೂಡ್ಸ್ ರೈಲಿಗೆ ಎಕ್ಸ್​ಪ್ರೆಸ್​ ರೈಲು ಡಿಕ್ಕಿ ಹೊಡೆದ ಕಾರಣ ಬೋಗಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಯಲ್ಲಿ ಹಲವು ಜನರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತಿದೆ. ಮೈಸೂರು-ದರ್ಭಾಂಗ್ ಎಕ್ಸ್‌ಪ್ರೆಸ್ ರೈಲು ಚೆನ್ನೈ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಗಳು ತಿಳಿಸಿವೆ.

ಇಂದು (ಶುಕ್ರವಾರ) ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ಮೈಸೂರಿನಿಂದ ದರ್ಭಾಂಗ್ ಮಾರ್ಗವಾಗಿ ಹೋಗುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಸ್ಥಳಕ್ಕೆ ಶೀಘ್ರದಲ್ಲೇ ರಕ್ಷಣಾ ಪಡೆ ಆಗಮಿಸಿದೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರೈಲು ಸಂಖ್ಯೆ 12578 ಮೈಸೂರು-ದರ್ಭಾಂಗ ಬಾಗಮತಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಲೂಪ್ ಲೈನ್‌ನಲ್ಲಿ ಪ್ರವೇಶಿಸಿ ನಿಂತಿದ್ದ ಗೂಡ್ಸ್​ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ: ತಂದೆ ಜತೆಗೆ ಮೂವರು ಮಕ್ಕಳು ಸಾವು

ತಮಿಳುನಾಡು ಪೊಲೀಸರ ಪ್ರಕಾರ, ರೈಲಿನ ಕನಿಷ್ಠ ಎರಡು ಬೋಗಿಗಳು ಹಳಿ ತಪ್ಪಿವೆ. ರಕ್ಷಣಾ ತಂಡಗಳು ಮತ್ತು ಆಂಬ್ಯುಲೆನ್ಸ್‌ಗಳು ಅಪಘಾತದ ಸ್ಥಳಕ್ಕೆ ಧಾವಿಸಿವೆ. 12578 ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ ಕವರಾಯಪೆಟ್ಟೈಯಲ್ಲಿ ರಾತ್ರಿ 8.50 ಕ್ಕೆ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ಮತ್ತು ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 pm, Fri, 11 October 24