AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಉರ್ದುವಿನಲ್ಲಿ ಬರೆದಿರುವ ಬಲೂನ್ ಪತ್ತೆ

ಜಮ್ಮು ಕಾಶ್ಮೀರದ ಸಾಂಬಾದಲ್ಲಿ 'ಪಾಕಿಸ್ತಾನ ಜಿಂದಾಬಾದ್' ಎಂದು ಬರೆದ ಬಲೂನ್ ಪತ್ತೆಯಾಗಿದೆ. ರಾಮಗಢದಲ್ಲಿ ಸ್ಥಳೀಯರೊಬ್ಬರು ಇದನ್ನು ನೋಡಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಲೂನ್ ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದು ಜಮ್ಮು ಮತ್ತು ಕಾಶ್ಮೀರದ ಭದ್ರತೆಗೆ ಸಂಬಂಧಿಸಿದಂತೆ ಹೊಸ ಆತಂಕಕ್ಕೆ ಕಾರಣವಾಗಿದೆ. ಭಯೋತ್ಪಾದಕರ ಶೋಧ ಕಾರ್ಯಾಚರಣೆಗಳ ನಡುವೆ ಈ ಘಟನೆ ಗಮನ ಸೆಳೆದಿದೆ.

ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಉರ್ದುವಿನಲ್ಲಿ ಬರೆದಿರುವ ಬಲೂನ್ ಪತ್ತೆ
ಬಲೂನ್
ನಯನಾ ರಾಜೀವ್
|

Updated on: Jan 09, 2026 | 7:29 AM

Share

ಶ್ರೀನಗರ, ಜನವರಿ 09: ಜಮ್ಮು ಮತ್ತು ಕಾಶ್ಮೀರ( Jammu and Kashmir) ದ ಸಾಂಬಾದಲ್ಲಿ ಉರ್ದುವಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಬರೆದಿರುವ ಬಲೂನ್ ಪತ್ತೆಯಾಗಿದೆ. ಸಾಂಬಾ ಜಿಲ್ಲೆಯ ರಾಮಗಢ ಪ್ರದೇಶದ ಖಾನ್‌ಪುರ ಗ್ರಾಮದ ಹೊಲದಲ್ಲಿ ಗುರುವಾರ ಅನುಮಾನಾಸ್ಪದ ಬಲೂನೊಂದು ಪತ್ತೆಯಾಗಿದ್ದು, ಇದು ಪೊಲೀಸರ ತನಿಖೆಗೆ ಕಾರಣವಾಗಿದೆ.

ಉರ್ದು ಭಾಷೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಬರೆದಿದ್ದ ಬಲೂನನ್ನು ಸ್ಥಳೀಯ ನಿವಾಸಿಯೊಬ್ಬರು ನೋಡಿದ್ದರು ಕೂಡಲೇ ರಾಮಘಡ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಲೂನನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದರು. ಬಲೂನ್ ಪ್ರಸ್ತುತ ರಾಮಗಢ ಪೊಲೀಸ್ ಠಾಣೆಯಲ್ಲಿದ್ದು, ಅಧಿಕಾರಿಗಳು ನಿವಾಸಿಗಳು ಜಾಗರೂಕರಾಗಿರಿ ಮತ್ತು ಅಂತಹ ಯಾವುದೇ ವಸ್ತುಗಳು ಕಂಡುಬಂದರೆ ತಕ್ಷಣ ವರದಿ ಮಾಡುವಂತೆ ಸೂಚಿಸಿದ್ದಾರೆ.

ಸಾಂಬಾ ಜಿಲ್ಲೆಯ ಕಟ್ಲಿ ಪ್ರದೇಶದಲ್ಲಿ ಶಂಕಿತ ವ್ಯಕ್ತಿಯೊಬ್ಬ ಶಸ್ತ್ರಾಸ್ತ್ರ ಹೊತ್ತುಕೊಂಡು ಹೋಗುತ್ತಿರುವುದನ್ನು ನೋಡಿರುವುದಾಗಿ ಸ್ಥಳೀಯ ನಿವಾಸಿಯೊಬ್ಬರು ಹೇಳಿದ್ದರು, ಭದ್ರತಾ ಪಡೆಗಳು ಪ್ರತ್ಯೇಕವಾಗಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.

ಮತ್ತಷ್ಟು ಓದಿ: ಜಮ್ಮು ಕಾಶ್ಮೀರದ ಕಸದ ತೊಟ್ಟಿಯಲ್ಲಿ ಸಿಕ್ಕಿದ್ದು ಆಟಿಕೆಯಲ್ಲ, ಚೀನಾ ನಿರ್ಮಿತ ಅಸಾಲ್ಟ್ ರೈಫಲ್ ಸ್ಕೋಪ್

ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಕಾಡಿನಲ್ಲಿ ಅಡಗಿರುವ ಭಯೋತ್ಪಾದಕರನ್ನು ಪತ್ತೆಹಚ್ಚಲು ಗುರುವಾರ ಬೆಳಗ್ಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ. ಬುಧವಾರ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಇತರ ಭದ್ರತಾ ಪಡೆಗಳ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಬುಧವಾರ ಸಂಜೆ ಬಿಲ್ಲಾವರ್‌ನ ಕಹೋಗ್ ಗ್ರಾಮದಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಬಳಿಕ ಎನ್​ಕೌಂಟರ್ ಕೂಡ ನಡೆದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ
ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ