ಹರ್ಯಾಣದ ಗ್ರಾಮವೊಂದರಲ್ಲಿ ನಿಗೂಢ ಜ್ವರ; 8 ಮಕ್ಕಳು ಸಾವು, ಸ್ಥಳೀಯರ ಆಕ್ರೋಶ

ಚಿಲ್ಲಿ ಗ್ರಾಮದಲ್ಲೂ ಸಹ 50-60 ಮಕ್ಕಳಿಗೆ ಜ್ವರ ಕಾಣಿಸಿಕೊಂಡಿದೆ. ಅದರಲ್ಲಿ ಎಂಟು ಮಕ್ಕಳು ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹರ್ಯಾಣದ ಗ್ರಾಮವೊಂದರಲ್ಲಿ ನಿಗೂಢ ಜ್ವರ; 8 ಮಕ್ಕಳು ಸಾವು, ಸ್ಥಳೀಯರ ಆಕ್ರೋಶ
ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಜ್ವರ
Follow us
TV9 Web
| Updated By: Lakshmi Hegde

Updated on: Sep 12, 2021 | 7:48 PM

ಕೊವಿಡ್ 19 ಸೋಂಕಿನ ಮಧ್ಯೆ ಹರ್ಯಾಣದಲ್ಲಿ ಇನ್ನೊಂದು ಆತಂಕ ಶುರುವಾಗಿದೆ. ಇಲ್ಲಿನ ಪಾಲ್​ವಾಲ್​ ಜಿಲ್ಲೆಯ ಚಿಲ್ಲಿ ಗ್ರಾಮದಲ್ಲಿ ಕಳೆದ 10 ದಿನಗಳಲ್ಲಿ ಸುಮಾರು ಎಂಟು ಮಕ್ಕಳು ನಿಗೂಢ ಜ್ವರಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳೀಯರು ಇದು ಡೆಂಘೆ ಜ್ವರ ಎಂದೇ ಹೇಳುತ್ತಿದ್ದರೂ ಆರೋಗ್ಯ ಇಲಾಖೆ ಅದನ್ನು ದೃಢಪಡಿಸಿಲ್ಲ. ಕೆಲವು ದಿನಗಳ ಹಿಂದೆ ಉತ್ತರಪ್ರದೇಶದ ಫಿರೋಜಾಬಾದ್ ಜಿಲ್ಲೆಯಿಂದ ಈ ನಿಗೂಢ ಜ್ವರ ವರದಿಯಾಗಿದೆ. ಅಲ್ಲಿ ವಿಚಿತ್ರ ಕಾಯಿಲೆಗೆ 10 ದಿನಗಳಲ್ಲಿ 30 ಮಕ್ಕಳು ಮೃತಪಟ್ಟಿದ್ದಾಗಿ ಹೇಳಲಾಗಿದೆ.

ಇದೀಗ ಚಿಲ್ಲಿ ಗ್ರಾಮದಲ್ಲೂ ಸಹ 50-60 ಮಕ್ಕಳಿಗೆ ಜ್ವರ ಕಾಣಿಸಿಕೊಂಡಿದೆ. ಅದರಲ್ಲಿ ಎಂಟು ಮಕ್ಕಳು ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಗ್ರಾಮದ ಸರ್​ಪಂಚ್​ ನರೇಶ್​ ತಿಳಿಸಿದ್ದಾರೆ. ಆರೋಗ್ಯ ಇಲಾಖೆ ಕೂಡ ಹೆಚ್ಚಿನ ಕಾಳಜಿ ವಹಿಸಿದೆ. ಗ್ರಾಮದಲ್ಲಿ ಮನೆ-ಮನೆಗೆ ತೆರಳಿ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಫಿರೋಜಾಬಾದ್​ನಂತೆಯೇ ಇಲ್ಲೂ ಕೂಡ ಜ್ವರಕ್ಕೆ ತುತ್ತಾದವರಲ್ಲಿ ಪ್ಲೇಟ್​ಲೆಟ್​ ಸಂಖ್ಯೆಯಲ್ಲಿ ಇಳಿಮುಖ ಕಾಣುತ್ತಿದೆ. ಇದೇ ಕಾರಣಕ್ಕೆ ಇಲ್ಲಿನ ಜನರು ಇದು ಡೆಂಘೆ ಎನ್ನುತ್ತಿದ್ದಾರೆ.

ಸ್ವಚ್ಛತೆ ಇಲ್ಲ..ಕಲುಷಿತ ನೀರು ಇನ್ನು ನಿಗೂಢ ಜ್ವರ ಕಾಣಿಸಿಕೊಂಡ ಈ ಹಳ್ಳಿಯಲ್ಲಿ ಸ್ವಚ್ಛತೆ ಇಲ್ಲ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಇಲ್ಲಿನ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕಕ್ಕೆ ರಬ್ಬರ್​ ಪೈಪ್​ಗಳನ್ನು ಬಳಸಲಾಗಿದೆ. ಹಾಗೇ ಈ ರಬ್ಬರ್​ ಪೈಪ್​ಗಳು ಕೊಚ್ಚೆ ನೀರಿನಲ್ಲಿ ಹಾದುಹೋಗಿವೆ. ಹಳ್ಳಿಯ ರಸ್ತೆಗಳನ್ನು ನೋಡಿದರೆ ತುಂಬ ಗಲೀಜಿದೆ. ಸೊಳ್ಳೆಗಳು ವಿಪರೀತ ಆಗಿವೆ. ಎಲ್ಲಿ ನೋಡಿದರೂ ತೆರೆದ ಚರಂಡಿಗಳಿವೆ ಎಂದು ಪ್ರತ್ಯಕ್ಷ ವರದಿ ನೀಡಿದೆ.

ಇನ್ನು ಇಲ್ಲಿನ ಜನರೂ ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಹೀಗೆ ಮಕ್ಕಳು ಅನಾರೋಗ್ಯಕ್ಕೀಡಾಗಿ ಸಾಯುತ್ತಿರುವುದು ನೋವು ತಂದಿದೆ. ಆ ಮಕ್ಕಳನ್ನು ಬದುಕಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಚಿಲ್ಲಿ ಹಳ್ಳಿಯಲ್ಲಿ ಸುಮಾರು 4000 ಜನರಿದ್ದು, ಇಲ್ಲಿ ಸಮೀಪದಲ್ಲಿ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರವೂ ಇಲ್ಲ. ಏನಾದರೂ ಆರೋಗ್ಯ ಸಮಸ್ಯೆಯಾದರೆ ಸುಮಾರು 30 ಕಿಮೀ ದೂರದಲ್ಲಿರುವ ಉತ್ತಾವರ್​ಗೇ ಹೋಗಬೇಕಾಗಿದೆ

ಇದನ್ನೂ ಓದಿ: ಸಿಎಂ ಹುದ್ದೆಗೆ ಏರಿದ ಭೂಪೇಂದ್ರ ಪಟೇಲ್​ ಯಾರು?-ರೇಸ್​​ನಲ್ಲಿ ಇಲ್ಲದಿದ್ದರೂ ಹುದ್ದೆಗೇರಿದ ನಾಯಕ

ಎಸ್​ಸಿ ಎಸ್​ಟಿಯ 52 ಶಾಸಕರಿದ್ದರೂ ಅಧಿಕಾರ ಹಿಡಿಯಲು ಆಗಲಿಲ್ಲ: ಮಾದಾರ ಚನ್ನಯ್ಯ ಸ್ವಾಮೀಜಿ ಬೇಸರ

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ