Lok Sabha Polls: ನಾಗಾಲ್ಯಾಂಡ್​ನ ಆರು ಜಿಲ್ಲೆಗಳಲ್ಲಿ ಮತದಾನ ಬಹಿಷ್ಕಾರ ಬಹುತೇಕ ಯಶಸ್ವಿ

6 Nagaland districts boycott voting: ಭಾರತದ ಈಶಾನ್ಯ ಭಾಗದಲ್ಲಿರುವ ನಾಗಾಲ್ಯಾಂಡ್ ರಾಜ್ಯದಲ್ಲಿನ ಆರು ಜಿಲ್ಲೆಗಳು ಲೋಸಕಭಾ ಚುನಾವಣೆಯ ಮೊದಲ ಹಂತದ ಮತದಾನವನ್ನು ಬಹಿಷ್ಕರಿಸಿವೆ. ಇಲ್ಲಿ ಇವತ್ತು ಬಹುತೇಕ ಶೂನ್ಯ ಮತದಾನ ದಾಖಲಾಗಿದೆ. ಪ್ರತ್ಯೇಕ ಪ್ರದೇಶ ರಚನೆ ಮಾಡುತ್ತೇವೆ ಎಂದು ಸರ್ಕಾರ ಕೊಟ್ಟ ಭರವಸೆ ಈಡೇರಿಲ್ಲ ಎಂದು ಪ್ರತಿಭಟಿಸಿ ಚುನಾವಣೆಯನ್ನು ಬಹಿಷ್ಕರಿಸಲಾಗಿದೆ. ಈಸ್ಟರ್ನ್ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್​ಗೆ ಚುನಾವಣಾ ಅಧಿಕಾರಿ ಶೋಕಾಸ್ ನೋಟೀಸ್ ಜಾರಿ ಮಾಡಿದ್ದಾರೆ.

Lok Sabha Polls: ನಾಗಾಲ್ಯಾಂಡ್​ನ ಆರು ಜಿಲ್ಲೆಗಳಲ್ಲಿ ಮತದಾನ ಬಹಿಷ್ಕಾರ ಬಹುತೇಕ ಯಶಸ್ವಿ
ನಾಗಾಲ್ಯಾಂಡ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 19, 2024 | 5:52 PM

ನವದೆಹಲಿ, ಏಪ್ರಿಲ್ 19: ನಾಗಾಲ್ಯಾಂಡ್ ರಾಜ್ಯದ ಪೂರ್ವಭಾಗದ ಆರು ಜಿಲ್ಲೆಗಳಲ್ಲಿ (6 eastern nagaland districts) ಬಹುತೇಕ ಶೂನ್ಯ ಮತದಾನವಾಗಿದೆ. ಇಲ್ಲಿನ ಸಾರ್ವಜನಿಕರು ಮತದಾನವನ್ನೇ ಬಹಿಷ್ಕರಿಸಿದ್ದಾರೆ. ಪ್ರತ್ಯೇಕ ಪ್ರದೇಶವನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಮತದಾನ ಬಹಿಷ್ಕರಿಸಲಾಗಿದೆ. ಈಸ್ಟರ್ನ್ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ (ಇಎನ್​ಪಿಒ) ಇಂದು ಶುಕ್ರವಾರ ‘ಪಬ್ಲಿಕ್ ಎಮರ್ಜೆನ್ಸಿ’ ಘೋಷಣೆ ಮಾಡಿ, ಚುನಾವಣೆಯನ್ನು ಬಾಯ್ಕಾಟ್ ಮಾಡುವಂತೆ ಸಾರ್ವಜನಿಕರಿಗೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಹುತೇಕ ಇಲ್ಲಿ ಮತದಾನ ಆಗಿಲ್ಲ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ನಾಗಾಲ್ಯಾಂಡ್​ನ ಮುಖ್ಯ ಚುನಾವಣಾಧಿಕಾರಿಯಿಂದ ಇಎನ್​ಪಿಒಗೆ ಶೋಕಾಸ್ ನೋಟೀಸ್ ಜಾರಿ ಮಾಡಲಾಗಿದೆ.

ಈ ಸಂಘಟನೆಯು ಚುನಾವಣೆಯಲ್ಲಿ ಪ್ರಭಾವ ಬೀರಲು ಪ್ರಯತ್ನಿಸಿದೆ. ಪೂರ್ವ ನಾಗಾಲ್ಯಾಂಡ್​ನ ನಿವಾಸಿಗಳು ಸಾರ್ವತ್ರಿಕ ಚುನಾವಣೆಯಲ್ಲಿ ಮುಕ್ತವಾಗಿ ಪಾಲ್ಗೊಳ್ಳಲು ಅಡಚಣೆ ಮಾಡಿದೆ. ಐಪಿಸಿ ಸೆಕ್ಷನ್ 171ಸಿ ಸಬ್​ಸೆಕ್ಷನ್ ಅಡಿಯಲ್ಲಿ ಯಾಕೆ ಕ್ರಮ ಕೈಗೊಳ್ಳಬಾರದು ಎಂದು ಪ್ರಶ್ನಿಸಿ ಚುನಾವಣಾ ಅಧಿಕಾರಿ ಶೋಕಾಸ್ ನೋಟೀಸ್ ನೀಡಿದ್ದಾರೆ.

ಇದನ್ನೂ ಓದಿ: ನಕಲಿ ಶಾರುಖ್​ನ ಕರೆಸಿ ಚುನಾವಣಾ ಪ್ರಚಾರ ಮಾಡಿಸಿದ ಪ್ರಣಿತಿ ಶಿಂಧೆ; ವಿಡಿಯೋ ವೈರಲ್​

ಇಎನ್​ಪಿಒ ಸಂಘಟನೆಯ ಉತ್ತರ ಇದು…

ಪೂರ್ವ ನಾಗಾಲ್ಯಾಂಡ್ ಪ್ರದೇಶ ನಮ್ಮ ವ್ಯಾಪ್ತಿಗೆ ಬರುತ್ತದೆ. ಇಲ್ಲಿ ಸಮಾಜ ಘಾತುಕ ಶಕ್ತಿಗಳು ಸೇರಿ ಹಿಂಸಾಚಾರ ಆಗುವ ಸಾಧ್ಯತೆ ಇತ್ತು. ಅದನ್ನು ನಿಯಂತ್ರಿಸಲು ಪಬ್ಲಿಕ್ ಎಮರ್ಜೆನ್ಸಿ ಎಂದು ಅಧಿಸೂಚನೆ ತರಲಾಯಿತು. ಸಂಬಂಧಿತ ಜನರು ಮತ್ತು ಸಂಘಟನೆಗಳೊಂದಿಗೆ ಸಮಾಲೋಚನೆ ನಡೆಸಿ ಎಮರ್ಜೆನ್ಸಿ ಘೋಷಿಸಲಾಗಿದೆ. ಇದು ಜನರೇ ಸ್ವಯಿಚ್ಛೆಯಿಂದ ಕೈಗೊಂಡ ನಿರ್ಧಾರ. ಚುನಾವಣೆಯ ಕಾರ್ಯಗಳಿಗೆ ತಡೆ ತರುವ ಪ್ರಯತ್ನ ಅಲ್ಲ ಇದು. ಹೀಗಾಗಿ, ಸೆಕ್ಷನ್ 171ಸಿ ನಿಯಮ ಇದಕ್ಕೆ ಅನ್ವಯ ಆಗುವುದಿಲ್ಲ ಎಂದು ಈಸ್ಟರ್ನ್ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ ಸ್ಪಷ್ಟಪಡಿಸಿದೆ.

ನಾಗಾಲ್ಯಾಂಡ್ ರಾಜ್ಯದಲ್ಲಿ ಇಂದು ಮತದಾನ ಆಗಿದೆ. ಇಡೀ ಜಿಲ್ಲೆಗೆ ಒಂದೇ ಲೋಕಸಭಾ ಕ್ಷೇತ್ರ ಇದೆ. ಮತದಾರರ ಸಂಖ್ಯೆ 11 ಲಕ್ಷಕ್ಕಿಂತ ತುಸು ಹೆಚ್ಚು. ಈ ರಾಜ್ಯದಲ್ಲಿ ಒಟ್ಟು 16 ಜಿಲ್ಲೆಗಳು ಇಲ್ಲಿದ್ದು, 60 ವಿಧಾನಸಭಾ ಕ್ಷೇತ್ರಗಳಿವೆ. ನ್ಯಾಷನಲ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ 2019ರ ಚುನಾವಣೆಯಲ್ಲಿ ಜಯಿಸಿತ್ತು. ಈ ಬಾರಿ ಎನ್​ಡಿಪಿಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇದೆ.

ಇದನ್ನೂ ಓದಿ: ಭಾರತದ ಪ್ರಜಾಪ್ರಭುತ್ವ ಹಬ್ಬವನ್ನು ವಿಶೇಷವಾಗಿ ಆಚರಿಸಿದ ಗೂಗಲ್

ನಾಗಾಲ್ಯಾಂಡ್​ನ 16 ಜಿಲ್ಲೆಗಳಲ್ಲಿ ಪೂರ್ವ ಭಾಗದ 6 ಜಿಲ್ಲೆಗಳು ಹೆಚ್ಚಿನ ಸ್ವಾಯತ್ತತೆ ಮತ್ತು ಪ್ರತ್ಯೇಕ ಭಾಗಕ್ಕೆ ಒತ್ತಾಯಿಸುತ್ತಿವೆ. ಇಲ್ಲಿ 20 ಶಾಸಕರಿದ್ದಾರೆ. ಮಾರ್ಚ್ 30ರಂದು ಇಎನ್​ಪಿಒ ಸಂಘಟನೆ ಈ 20 ಶಾಸಕರು ಹಾಗೂ ಇತರ ಸಂಘಟನೆಗಳೊಂದಿಗೆ ಸುದೀರ್ಘ ಸಭೆ ನಡೆಸಿ ಚರ್ಚಿಸಿ, ಬಳಿಕ ಮತದಾನ ಬಹಿಷ್ಕಾರಕ್ಕೆ ಕರೆಕೊಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು