AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿಯರಿಗೆ ಐಫೋನ್ ಗಿಫ್ಟ್ ನೀಡಲು 6.5 ಲಕ್ಷ ರೂ. ಮೌಲ್ಯದ ನಲ್ಲಿ ಕದ್ದ ಯುವಕರು!

ತಮ್ಮ ಗರ್ಲ್‌ಫ್ರೆಂಡ್‌ಗಳಿಗೆ ಐಫೋನ್ ಉಡುಗೊರೆಯಾಗಿ ನೀಡಲು ಬಯಸಿದ ಮೂವರು ಯುವಕರು, ಬರೋಬ್ಬರಿ 6.5 ಲಕ್ಷ ರೂ. ಮೌಲ್ಯದ ಐಷಾರಾಮಿ ಡಿಸೈನರ್ ನಲ್ಲಿಗಳನ್ನು ಕದ್ದಿರುವ ವಿಚಿತ್ರ ಘಟನೆಯೊಂದು ಮಹಾರಾಷ್ಟ್ರದ ನಾಗಪುರದಲ್ಲಿ ಬೆಳಕಿಗೆ ಬಂದಿದೆ. ತಮ್ಮ ಪ್ರೇಯಸಿಯರಿಗೆ ದುಬಾರಿ ಗಿಫ್ಟ್‌ಗಳನ್ನು ನೀಡಲು ಹಣ ಹೊಂದಿಸುವ ಉದ್ದೇಶದಿಂದ ಈ ಯುವಕರು ಕಳ್ಳತನ ನಡೆಸಿದ್ದರು. ಕದ್ದ ಮಾಲನ್ನು ಖರೀದಿಸಿದ್ದ 38 ವರ್ಷದ ಇರ್ಫಾನ್ ಅಲಿ ಅಲಿಯಾಸ್ ಇಮ್ಮು ರಂಜಾನ್ ಅಲಿ ಎಂಬಾತನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಪ್ರೇಯಸಿಯರಿಗೆ ಐಫೋನ್ ಗಿಫ್ಟ್ ನೀಡಲು 6.5 ಲಕ್ಷ ರೂ. ಮೌಲ್ಯದ ನಲ್ಲಿ ಕದ್ದ ಯುವಕರು!
GiftImage Credit source: Getty Image
ಸುಷ್ಮಾ ಚಕ್ರೆ
|

Updated on:Jun 05, 2026 | 1:24 PM

Share

ನಾಗಪುರ, ಜೂನ್ 5: ಪ್ರೇಮಪಾಶಕ್ಕೆ ಬಿದ್ದ ಯುವಕರು ತಮ್ಮ ಗರ್ಲ್‌ಫ್ರೆಂಡ್‌ಗಳನ್ನು ಮೆಚ್ಚಿಸಲು ಏನೆಲ್ಲಾ ಮಾಡುತ್ತಾರೆ ಎಂಬುದಕ್ಕೆ ಉದಾಹರಣೆಯಾಗಿ ಮಹಾರಾಷ್ಟ್ರದ ನಾಗಪುರದಲ್ಲಿ ಒಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ತಮ್ಮ ಪ್ರೇಯಸಿಯರಿಗೆ ದುಬಾರಿ ಬೆಲೆಯ ಐಫೋನ್ (iPhone) ಮೊಬೈಲ್‌ಗಳನ್ನು ಉಡುಗೊರೆಯಾಗಿ ನೀಡಲು ಹಣವಿಲ್ಲದೆ, ಮೂವರು ಯುವಕರು ಸೇರಿ ಅಂಗಡಿ ಮತ್ತು ಐಷಾರಾಮಿ ಬಂಗಲೆಗಳಿಂದ ಬರೋಬ್ಬರಿ 6.5 ಲಕ್ಷ ರೂಪಾಯಿ ಮೌಲ್ಯದ ನೀರಿನ ಕದ್ದಿದ್ದಾರೆ. ಈ ಮೂವರನ್ನು ನಾಗಪುರ ಪೊಲೀಸರು ಬಂಧಿಸಿದ್ದಾರೆ.

‘ರಾಹುಲ್ ಸೆರಾಮಿಕ್ಸ್ ಪ್ರೈವೇಟ್ ಲಿಮಿಟೆಡ್’ ಹೆಸರಿನ ಗೋದಾಮಿನ ಮಾಲೀಕರಾದ ರಾಹುಲ್ ಜಯಚಂದ್ ಬಾತ್ರಾ ಅವರು ಪೊಲೀಸರಿಗೆ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಬಂಧಿತ ಯುವಕರು ನಾಗಪುರದ ಹಜಾರಿಪಹಾಡ್ ಮತ್ತು ಸೆಮಿನರಿ ಹಿಲ್ಸ್‌ನಂತಹ ಗಣ್ಯರು ವಾಸಿಸುವ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದ್ದರು. ಇಲ್ಲಿನ ಗೋಡೌನ್, ದೊಡ್ಡ ದೊಡ್ಡ ಬಂಗಲೆಗಳು ಮತ್ತು ಅಪಾರ್ಟ್‌ಮೆಂಟ್‌ಗಳಿಗೆ ನುಗ್ಗಿ, ಅಲ್ಲಿ ಅಳವಡಿಸಲಾಗಿದ್ದ ಅತ್ಯಂತ ದುಬಾರಿ ಮೌಲ್ಯದ ಹಿತ್ತಾಳೆ ಮತ್ತು ಕರಕುಶಲ ವಿನ್ಯಾಸದ ನಲ್ಲಿಗಳನ್ನು ಬಿಚ್ಚಿ ಕದಿಯುತ್ತಿದ್ದರು. ಕದ್ದ ಸಾಮಗ್ರಿಗಳ ಒಟ್ಟು ಮೌಲ್ಯ 6.5 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿತ್ತು.

ಇದನ್ನೂ ಓದಿ: Video: ಗರ್ಲ್​ಫ್ರೆಂಡ್​ ಜತೆ ಸ್ಕೂಟಿಯಲ್ಲಿ ಸುತ್ತುತ್ತಿದ್ದ ಮಗ, ರಸ್ತೆಯಲ್ಲೇ ಇಬ್ಬರಿಗೂ ಬಿತ್ತು ಏಟು

ಈ ಬಗ್ಗೆ ದೂರು ದಾಖಸಿಕೊಂಡ ಗಿಟ್ಟಿಖಾದನ್ ಪೊಲೀಸ್ ಠಾಣೆಯ ಅಧಿಕಾರಿಗಳು ತನಿಖೆ ಆರಂಭಿಸಿ, ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಈ ವೇಳೆ ಮೂವರು ಯುವಕರು ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಪತ್ತೆಯಾಯಿತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇಡೀ ಕಥೆ ಹೊರಬಿದ್ದಿದೆ. ಯುವಕರು ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.

ಕದ್ದ ಹಣದಲ್ಲಿ ಐಫೋನ್ ಖರೀದಿ!

ಪೊಲೀಸರ ವಿಚಾರಣೆಯ ವೇಳೆ ಯುವಕರು ನೀಡಿದ ಕಾರಣ ಕೇಳಿ ಅಧಿಕಾರಿಗಳೇ ಒಂದು ಕ್ಷಣ ದಂಗಾಗಿದ್ದಾರೆ. ತಮಗೆ ಯಾವುದೇ ದುರಭ್ಯಾಸಗಳಿರಲಿಲ್ಲ, ಆದರೆ ತಮ್ಮ ಗರ್ಲ್‌ಫ್ರೆಂಡ್‌ಗಳು ಐಫೋನ್ ಬೇಕೆಂದು ಹಠ ಹಿಡಿದಿದ್ದರು. ಅದನ್ನು ಕೊಡಿಸಲು ಹಣವಿಲ್ಲದ ಕಾರಣ ಅತ್ಯಂತ ಸುಲಭವಾಗಿ ಕಳವು ಮಾಡಬಹುದಾದ ಮತ್ತು ಮಾರುಕಟ್ಟೆಯಲ್ಲಿ ಭಾರೀ ಬೆಲೆ ಬಾಳುವ ಐಷಾರಾಮಿ ನಲ್ಲಿಗಳನ್ನು ಕದ್ದಿದ್ದಾಗಿ ಅವರು ತಿಳಿಸಿದ್ದಾರೆ. ಕದ್ದ ನಲ್ಲಿಗಳನ್ನು ಗುಜರಿ ಅಂಗಡಿಗೆ ಮಾರಿ ಬಂದ ಹಣದಲ್ಲಿ ಈಗಾಗಲೇ ಐಫೋನ್‌ಗಳನ್ನು ಖರೀದಿಸಿ ಗೆಳತಿಯರಿಗೆ ಉಡುಗೊರೆ ನೀಡಿದ್ದರು!

ಪೊಲೀಸರು ಯುವಕರಿಂದ ಕದ್ದ ನಲ್ಲಿಗಳು, ಕಳ್ಳತನಕ್ಕೆ ಬಳಸಿದ ಬೈಕ್ ಹಾಗೂ ಗೆಳತಿಯರಿಗೆ ನೀಡಿದ್ದ ಐಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಜೈಲಿಗಟ್ಟಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 1:16 pm, Fri, 5 June 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ