ನಾಗ್ಪುರದ ಕಟೋಲ್ ತಾಲೂಕಿನ ಸೋನ್‌ಖಾಂಬ್‌ನಲ್ಲಿ ಟ್ರಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಏಳು ಜನರು ನಾಗ್ಪುರದಿಂದ ಕಟೋಲ್ ಕಡೆಗೆ ಪ್ರಯಾಣಿಸುತ್ತಿದ್ದಾಗ ಟ್ರಕ್ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ನಾಗ್ಪುರದ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ಗೆ ದಾಖಲಿಸಲಾಗಿದೆ.
ವರದಿಗಳ ಪ್ರಕಾರ, ರಾತ್ರಿ 1.30 ರ ಸುಮಾರಿಗೆ ಘರ್ಷಣೆ ಸಂಭವಿಸಿದೆ. ಸ್ಕಾರ್ಪಿಯೋದಲ್ಲಿದ್ದ ಒಂದೇ ಗ್ರಾಮದ 6 ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಅಜಯ್ ದಶರತ್ ಚಿಖ್ಲೆ (45), ವಿಠ್ಠಲ್ ದಿಗಂಬರ್ ತೋಟೆ (45), ಸುಧಾಕರ ರಾಮಚಂದ್ರ ಮಾನಕರ್ (42), ರಮೇಶ್ ಓಂಕಾರ್ ಹೆಲೊಂಡೆ (48), ಮಯೂರ್ ಮೊರೇಶ್ವರ್ ಇಂಗ್ಲೆ (26) ಮತ್ತು ವೈಭವ್ ಸಾಹೇಬ್ರಾವ್ ಚಿಖ್ಲೆ (32) ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ನಾಗ್ಪುರದ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತಷ್ಟು ಓದಿ: ಕೇರಳ: ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಟ್ರ್ಯಾವೆಲರ್ಗೆ ಆಟೋ ಡಿಕ್ಕಿ, ಐವರು ಸಾವು
ಶಬರಿಮಲೆಗೆ ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಆಟೋ ಡಿಕ್ಕಿ ಐದು ಮಂದಿ ಸಾವು
ಕೇರಳದ ಮಂಚೇರಿಯಲ್ಲಿ ಶಬರಿಮಲೆ(Sabarimala) ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್‌ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಅಬ್ದುಲ್ ಮಜೀದ್ (50) ಮತ್ತು ಪ್ರಯಾಣಿಕರಾದ ಥೆಸ್ಲೀಮಾ (34) ಮುಹ್ಸಿನಾ (32) ಮತ್ತು ಅವರ ಮಕ್ಕಳಾದ ರೈಹಾ ಫಾತಿಮಾ (4) ಮತ್ತು ರಿನ್ಶಾ ಫಾತಿಮಾ (7) ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕದಿಂದ ಶಬರಿಮಲೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್‌ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐವರು ಶಬರಿಮಲೆ ಯಾತ್ರಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ