ಅಡುಗೆ ಮಾಡದೆ ಡ್ಯಾನ್ಸ್ ಕ್ಲಾಸ್‌ಗೆ ಹೋಗುತ್ತೇನೆಂದ ಪತ್ನಿಗೆ ಮಕ್ಕಳ ಎದುರೇ ಇರಿದು ಕೊಂದ ಗಂಡ!

ಮನೆಯಲ್ಲಿ ಅಡುಗೆ ಮಾಡುವ ಬದಲು ಡ್ಯಾನ್ಸ್ ಕ್ಲಾಸ್‌ಗೆ ಹೋಗಲು ನಿರ್ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ನಡುವೆ ಉಂಟಾದ ಜಗಳವೊಂದು ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ. ಡ್ಯಾನ್ಸ್​ ಕ್ಲಾಸ್​ಗೆ ಹೋಗುತ್ತೇನೆ ಎಂದು ಹಠ ಹಿಡಿದ ಪತ್ನಿಗೆ ಆಕೆಯ ಗಂಡ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಪತಿಯನ್ನು ಪೊಲೀಸರು ಬಂಧಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಮಹಿಳೆಯನ್ನು 38 ವರ್ಷದ ಯಾಮಿನಿ ಕೃಷ್ಣಲಾಲ್ ಯಾದವ್ ಎಂದು ಗುರುತಿಸಲಾಗಿದೆ. ಆಕೆಗೆ ಇಬ್ಬರು ಸಣ್ಣ ಮಕ್ಕಳಿದ್ದಾರೆ.

ಅಡುಗೆ ಮಾಡದೆ ಡ್ಯಾನ್ಸ್ ಕ್ಲಾಸ್‌ಗೆ ಹೋಗುತ್ತೇನೆಂದ ಪತ್ನಿಗೆ ಮಕ್ಕಳ ಎದುರೇ ಇರಿದು ಕೊಂದ ಗಂಡ!
ಯಾಮಿನಿ
Image Credit source: TV9

Updated on: Sep 05, 2026 | 5:09 PM

ನಾಗ್ಪುರ, ಸೆಪ್ಟೆಂಬರ್ 5: ಮನೆಯಲ್ಲಿ ಅಡುಗೆ ಮಾಡುವ ಬದಲು ಡ್ಯಾನ್ಸ್ ಕ್ಲಾಸ್‌ಗೆ ಹೋಗಲು ನಿರ್ಧರಿಸಿದ ವಿಷಯಕ್ಕೆ ಸಂಬಂಧಿಸಿದಂತೆ ದಂಪತಿ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಪತಿಯಿಂದ ತೀವ್ರ ಹಲ್ಲೆಗೊಳಗಾದ 38 ವರ್ಷದ ಮಹಿಳೆಯೊಬ್ಬರು ಮಹಾರಾಷ್ಟ್ರದ ನಾಗ್ಪುರದಲ್ಲಿ ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪತಿಯನ್ನು ಪೊಲೀಸರು ಬಂಧಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರನ್ನು ಯಾಮಿನಿ ಕೃಷ್ಣಲಾಲ್ ಯಾದವ್ ಎಂದು ಗುರುತಿಸಲಾಗಿದ್ದು, ಆಕೆಯ ಪತಿ 41 ವರ್ಷದ ಕೃಷ್ಣಲಾಲ್ ಯಾದವ್‌ನನ್ನು ಬಂಧಿಸಲಾಗಿದೆ. ಈ ದಂಪತಿಗೆ ಇಬ್ಬರು ಸಣ್ಣ ಮಕ್ಕಳಿದ್ದು, ಹಲ್ಲೆ ನಡೆದ ಸಮಯದಲ್ಲಿ ಮಕ್ಕಳೂ ಸ್ಥಳದಲ್ಲೇ ಇದ್ದರು ಎನ್ನಲಾಗಿದೆ.

ಅಡುಗೆ ವಿಚಾರಕ್ಕೆ ಜಗಳ:

ಕೆಲಸ ಮುಗಿಸಿ ಮನೆಗೆ ಬಂದ ಪತಿ ಕೃಷ್ಣಲಾಲ್, ತನಗೆ ಮತ್ತು ಮಕ್ಕಳಿಗೆ ಅಡುಗೆ ಮಾಡಲು ಹೆಂಡತಿಗೆ ಹೇಳಿದ್ದ. ಆದರೆ, ಯಾಮಿನಿ ಆ ಸಮಯದಲ್ಲಿ ಅಪಾರ್ಟ್‌ಮೆಂಟ್ ಸೊಸೈಟಿಯಲ್ಲಿ ಆಯೋಜಿಸಲಾಗಿದ್ದ ಡ್ಯಾನ್ಸ್ ಕ್ಲಾಸ್‌ಗೆ ತೆರಳಲು ಸಿದ್ಧರಾಗುತ್ತಿದ್ದು, ಅಡುಗೆ ಮಾಡಲು ನಿರಾಕರಿಸಿದ್ದರು. ಇದರಿಂದ ಕೆರಳಿದ ಪತಿ, ತೀವ್ರ ವಾಗ್ವಾದಕ್ಕಿಳಿದು ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದ. ಕುತ್ತಿಗೆ ಹಾಗೂ ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದ ಯಾಮಿನಿಯನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಂತರಿಕ ರಕ್ತಸ್ರಾವದಿಂದಾಗಿ ಚಿಕಿತ್ಸೆ ಫಲಿಸದೇ ಆಕೆ ಕೊನೆಯುಸಿರೆಳೆದರು.

ಇದನ್ನೂ ಓದಿ: ಆಪರೇಷನ್ ಅಶ್‌ದಾರ್; ಜಮ್ಮು-ಕಾಶ್ಮೀರದ ಬದ್ಗಾಮ್‌ನಲ್ಲಿ ಪಾಕಿಸ್ತಾನ ಮೂಲದ ಲಷ್ಕರ್ ಕಮಾಂಡರ್ ಹತ್ಯೆ

ಆಸ್ಪತ್ರೆಯಿಂದ ಬಂದ ಮಾಹಿತಿಯನ್ನಾಧರಿಸಿ ನಾಗ್ಪುರ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಆರೋಪಿ ಕೃಷ್ಣಲಾಲ್ ಯಾದವ್‌ನನ್ನು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಯಾಮಿನಿಯ ಕುತ್ತಿಗೆ ಹಿಸುಕಲಾಗಿದೆ ಎಂಬುದು ಕೂಡ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Loading...
Unable to load recommendations.
Follow Us