ರಸ್ತೆಗಳಲ್ಲಿ ನಮಾಜ್​​ ನಿಷೇಧ, ಗೊತ್ತುಪಡಿಸಿದ ಪ್ರದೇಶದಲ್ಲಿ ಮಾತ್ರ ಪ್ರಾಣಿ ಬಲಿ, ಯೋಗಿ ಖಡಕ್​​ ಸೂಚನೆ

ಉತ್ತರ ಪ್ರದೇಶದಲ್ಲಿ ಜೂನ್​​​ 17ಕ್ಕೆ ರಸ್ತೆಗಳಲ್ಲಿ ನಮಾಜ್​​​ ಮಾಡುವಂತಿಲ್ಲ, ಪ್ರಾಣಿ ಬಲಿ ನೀಡುವಂತಿಲ್ಲ ಎಂದು ಸಿಎಂ ಯೋಗಿ ಅವರನ್ನು ಖಡಕ್​​ ಆದೇಶವನ್ನು ನೀಡಿದ್ದಾರೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ್ದಾರೆ. ಎಲ್ಲರೂ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿವಂತೆ, ಹಾಗೂ ಕಾನುನೂ ಸುವ್ಯವಸ್ಥೆಯನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಸಿದ್ದಾರೆ. ಅಷ್ಟಕ್ಕೂ ಯೋಗಿ ನೀಡಿದ ಖಡಕ್​ ಆದೇಶಗಳೇನು? ಮುಸ್ಲಿಂ ಜನರು ಎಲ್ಲ ನಮಾಜ್​​ ಮಾಡಬೇಕು ಎಂಬ ಬಗ್ಗೆ ಇಲ್ಲಿದೆ ಮಾಹಿತಿ

ರಸ್ತೆಗಳಲ್ಲಿ ನಮಾಜ್​​ ನಿಷೇಧ, ಗೊತ್ತುಪಡಿಸಿದ ಪ್ರದೇಶದಲ್ಲಿ ಮಾತ್ರ ಪ್ರಾಣಿ ಬಲಿ, ಯೋಗಿ ಖಡಕ್​​ ಸೂಚನೆ
ಯೋಗಿ ಆದಿತ್ಯನಾಥ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 15, 2024 | 5:51 PM

ಮುಂಬರುವ ದಿನಗಳಲ್ಲಿ ಉತ್ತರಪ್ರದೇಶದಲ್ಲಿ (uttar pradesh) ಹಲವು ಹಬ್ಬಗಳು ಬರಲಿದೆ. ಹಾಗಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (yogi adityanath )ಒಂದು ಮಹತ್ವದ ಸಭೆಯನ್ನು ನಡೆಸಿದ್ದಾರೆ. ಈ ಬಗ್ಗೆ ಗುರುವಾರದಂದು ಉನ್ನತ ಮಟ್ಟದ ಸಭೆಯನ್ನು ನಡೆಸಿ, ಅಧಿಕಾರಿಗಳಿಗೆ ಖಡಕ್​​​ ಸೂಚನೆಯನ್ನು ನೀಡಿದ್ದಾರೆ. ಜೂನ್​​​ 16ಕ್ಕೆ ಗಂಗಾದಸರಾ, 17ಕ್ಕೆ ಬಕ್ರೀದ್​​​, 18ಕ್ಕೆ ಜ್ಯೇಷ್ಠ ಮಾಸದ ಮಂಗಲೋತ್ಸವ ಉತ್ತರ ಪ್ರದೇಶದಲ್ಲಿ ನಡೆಯಲಿದೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 24X7 ಕೆಲಸ ಮಾಡುವಂತೆ ಹಾಗೂ ಎಲ್ಲ ಕಡೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಪೊಲೀಸ್​​ ಇಲಾಖೆಗೆ ಸೂಚನೆ ನೀಡಿದ್ದಾರೆ.

ಇದರಲ್ಲೂ ಸಿಎಂ ಯೋಗಿ ಅವರು 17ಕ್ಕೆ ಬಕ್ರೀದ್ ಇರುವ ಕಾರಣ ಒಂದು ಮಾರ್ಗಸೂಚಿಯನ್ನು ನೀಡಿದ್ದಾರೆ. ಬಕ್ರೀದ್​​​ ಸಂಪ್ರಾದಾಯದಂತೆ ಆಚರಣೆ ಮಾಡಲಿ, ಆದರೆ ರಸ್ತೆ ಬಂದ್​​ ಮಾಡಿ ನಮಾಜ್ ಮಾಡುವುದು​​​​ ಅಥವಾ ಮಾರ್ಗ ಮಧ್ಯೆ ಪ್ರಾಣಿಗಳ ಬಲಿ ನೀಡುವುದನ್ನು ನಿಷೇಧಿಸಲಾಗಿದೆ. ಸರ್ಕಾರ ಹಾಗೂ ಸ್ಥಳೀಯ ಆಡಳಿತ ನಿಗದಿಪಡಿಸಿರುವ ಸ್ಥಳದಲ್ಲೇ ನಮಾಜ್ ಮಾಡಬೇಕು ಹಾಗೂ ಪ್ರಾಣಿ ಬಲಿ ನೀಡಬೇಕು ಎಂದು ಆದೇಶ ನೀಡಿದ್ದಾರೆ.

ಪ್ರಾಣಿ ಬಲಿ ನೀಡುವ ಮುನ್ನ ಸ್ಥಳೀಯ ಅಧಿಕಾರಿಗಳ ಜತೆಗೆ ಚರ್ಚೆ ಮಾಡಬೇಕು ಹಾಗೂ ಬಲಿ ನೀಡುವ ಮೊದಲು ಅಧಿಕಾರಿಗಳ ಒಪ್ಪಿಗೆ ಪಡೆಯಬೇಕು ಎಂದು ಹೇಳಿದ್ದಾರೆ. ವಿವಾದಿತ/ ಸೂಕ್ಷ್ಮ ಪ್ರದೇಶದಲ್ಲಿ ಪ್ರಾಣಿ ಬಲಿ ನೀಡಬಾರದು. ನಿಷೇಧಿತ ಪ್ರದೇಶದಲ್ಲಿ ಪ್ರಾಣಿ ಬಲಿಯಾಗದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಯೋಗಿ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಇನ್ನು ಪ್ರಾಣಿ ಬಲಿಯಾದ ನಂತರ ಪ್ರತಿ ಜಿಲ್ಲೆಯಲ್ಲೂ ತ್ಯಾಜ್ಯ ವಿಲೇವಾರಿಯಾಗಬೇಕು. ಎಲ್ಲವನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಧನ್ಯವಾದ ಮೋದಿ!; ತಮ್ಮ ಗೆಲುವನ್ನು ಪ್ರಧಾನಿಗೆ ಅರ್ಪಿಸಿದ ಎನ್​ಸಿಪಿ ನಾಯಕ ಶರದ್ ಪವಾರ್

ನಂಬಿಕೆಯನ್ನು ಗೌರವಿಸಿ:

ನಮಾಜ್​​​ ಮುಸ್ಲಿಂ ಸಂಪ್ರಾದಾಯದಂತೆ ನಡೆಯಲಿ ಆದರೆ ಅದು ರಸ್ತೆ ಮಧ್ಯೆ ಅಲ್ಲ, ಅಧಿಕಾರಿಗಳು ಸೂಚಿಸಿದ ಪ್ರದೇಶದಲ್ಲಿ ಮಾಡಬೇಕು. ಯಾವುದೇ ಹೊಸ ಸಂಪ್ರಾದಾಯವನ್ನು ಪೋತ್ಸಾಹಿಸಬೇಡಿ, ಹಾಗೂ ಅವರ ನಂಬಿಕೆಯನ್ನು ಗೌರವಿಸಿ ಎಂದು ಹೇಳಿದ್ದಾರೆ. ಯಾರಾದರೂ ಕಾನೂನನ್ನು ಕೈಗೆತ್ತಿಕೊಂಡರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಿ ಎಂದು ಹೇಳಿದ್ದಾರೆ.

ಇನ್ನು ಅಧಿಕಾರಿಗಳ ಸಭೆಯಲ್ಲಿ ಯೋಗಿ ಅವರು ಜೂನ್​​​15ರಿಂದ ಜೂನ್​​ 22ರವರೆಗೆ ಸ್ವಚ್ಛತಾ ಆಂದೋಲನದಲ್ಲಿ ಅಭಿಯಾನವನ್ನು ಪ್ರಾರಂಭಿಸಬೇಕು ಎಂದು ಹೇಳಿದ್ದಾರೆ. ಗಂಗಾ ದಸರಾದಂದು ಗಂಗಾ ನದಿಯ ಘಟ್​​​ಗಳನ್ನು ಸ್ವಚ್ಛಗೊಳಿಸಬೇಕು ಎಂದು ಹೇಳಿದ್ದಾರೆ. ಹಾಗೂ ಅಲ್ಲಿ ಅಲಂಕಾರಗಳು ನಡೆಯಬೇಕು, ಭಕ್ತರಿಗೆ ಸ್ನಾನ ಮಾಡಲು ಸರಿಯಾದ ವ್ಯವಸ್ಥೆ ಮಾಡಬೇಕು ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:43 pm, Sat, 15 June 24

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ