AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ನೋ ವಿವಿ ಆವರಣದಲ್ಲಿ ನಮಾಜ್ ವರ್ಸಸ್ ಹನುಮಾನ್ ಚಾಲೀಸಾ ಹಗ್ಗಜಗ್ಗಾಟ; 13 ವಿದ್ಯಾರ್ಥಿಗಳಿಗೆ ನೋಟಿಸ್ ಜಾರಿ

ಲಕ್ನೋ ವಿಶ್ವವಿದ್ಯಾಲಯದ ಆವರಣದೊಳಗೆ ಮುಸ್ಲಿಂ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಅವಕಾಶ ಕೊಟ್ಟಿದ್ದು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಎಬಿವಿಪಿ, ಬಜರಂಗದಳದವರು ಅದೇ ವಿಶ್ವವಿದ್ಯಾನಿಲಯದ ಆವರಣದೊಳಗೆ ಇರುವ ಲಾಲ್ ಬರಾದರಿ ಕಟ್ಟಡದಲ್ಲಿ ಹನುಮಾನ್ ಚಾಲೀಸಾ ಪಠಿಸಲಾರಂಭಿಸಿದ ಬಳಿಕ ಈ ಘಟನೆ ಧಾರ್ಮಿಕ ಗಲಭೆಗೆ ಕಾರಣವಾಯಿತು. ಆ ಸ್ಥಳದ ಹೊರಗೆ ಹನುಮಾನ್ ಚಾಲೀಸಾ ಪಠಿಸಲು ಪ್ರಯತ್ನಿಸುತ್ತಿದ್ದ ವಿದ್ಯಾರ್ಥಿಗಳ ಗುಂಪನ್ನು ಪೊಲೀಸರು ಬಂಧಿಸಿದ್ದಾರೆ.

ಲಕ್ನೋ ವಿವಿ ಆವರಣದಲ್ಲಿ ನಮಾಜ್ ವರ್ಸಸ್ ಹನುಮಾನ್ ಚಾಲೀಸಾ ಹಗ್ಗಜಗ್ಗಾಟ; 13 ವಿದ್ಯಾರ್ಥಿಗಳಿಗೆ ನೋಟಿಸ್ ಜಾರಿ
Hanuman Chalisa In Lucknow University
ಸುಷ್ಮಾ ಚಕ್ರೆ
|

Updated on: Feb 24, 2026 | 5:24 PM

Share

ನವದೆಹಲಿ, ಫೆಬ್ರವರಿ 24: ಲಕ್ನೋ ವಿಶ್ವವಿದ್ಯಾಲಯದ ಆವರಣದೊಳಗೆ ನಮಾಜ್ ಮಾಡಿದ್ದನ್ನು ವಿರೋಧಿಸಿ ಹಿಂದೂ ವಿದ್ಯಾರ್ಥಿಗಳು ಹನುಮಾನ್ ಚಾಲೀಸಾ (Hanuman Chalisa) ಪಠಿಸಿರುವ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಕಾರ್ಯಕರ್ತರು ಲಕ್ನೋ ವಿಶ್ವವಿದ್ಯಾಲಯದ ಕ್ಯಾಂಪಸ್‌ನೊಳಗಿನ ಐತಿಹಾಸಿಕ ಲಾಲ್ ಬರಾದಾರಿಯಲ್ಲಿ ಹನುಮಾನ್ ಚಾಲೀಸಾ ಪಠಿಸಲು ಪ್ರಯತ್ನಿಸಿದ ನಂತರ ಇಂದು ಲಕ್ನೋ ವಿಶ್ವವಿದ್ಯಾಲಯದಲ್ಲಿ ಉದ್ವಿಗ್ನತೆ ಉಂಟಾಯಿತು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ, ಹಲವಾರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ಲಕ್ನೋ ವಿಶ್ವವಿದ್ಯಾನಿಲಯದ ಆವರಣದೊಳಗಿನ ಲಾಲ್ ಬರಾದರಿಯಲ್ಲಿ ನಮಾಜ್ ಮಾಡಿದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತಂದ ಆರೋಪದ ಮೇಲೆ ಲಕ್ನೋ ವಿಶ್ವವಿದ್ಯಾನಿಲಯದ 13 ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗಿದೆ. ಕಾಲೇಜು ಆವರಣದಲ್ಲಿ ನಮಾಜ್ ಮಾಡಿದ 13 ವಿದ್ಯಾರ್ಥಿಗಳಿಗೆ ತಲಾ 50,000 ರೂ. ವೈಯಕ್ತಿಕ ಬಾಂಡ್ ಮತ್ತು ತಲಾ 50,000 ರೂ. ದಂಡ, ಇಬ್ಬರು ಶ್ಯೂರಿಟಿಗಳನ್ನು ಸಲ್ಲಿಸುವಂತೆ ನಿರ್ದೇಶಿಸಲಾಗಿದೆ. 1 ವರ್ಷದ ಅವಧಿಗೆ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಖಾತರಿಯಾಗಿ ಈ ಬಾಂಡ್ ಅನ್ನು ಪಡೆಯಲಾಗಿದೆ.

ಇದನ್ನೂ ಓದಿ: ನಮಾಜ್ ವೇಳೆ ಶಾಂತಿ ಇರಬೇಕಾದ ಮಸೀದಿಯೊಳಗೇ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ

ಲಾಲ್ ಬರಾದಾರಿಯಲ್ಲಿ ನಮಾಜ್ ಮಾಡಲು ಅನುಮತಿ ನೀಡಲಾಗಿದೆ. ಹಿಂದೂ ವಿದ್ಯಾರ್ಥಿಗಳಿಗೆ ಅದೇ ಸ್ಥಳದಲ್ಲಿ ಹನುಮಾನ್ ಚಾಲೀಸಾ ಪಠಿಸಲು ಅವಕಾಶ ನೀಡಿಲ್ಲ ಎಂಬ ಆರೋಪದ ಮೇಲೆ ಪ್ರತಿಭಟನೆ ಭುಗಿಲೆದ್ದಿತು. “ಇಲ್ಲಿ ನಮಾಜ್ ಮಾಡಲು ಅನುಮತಿ ನೀಡಲಾಗಿದೆ. ಆದರೆ ಇಲ್ಲಿ ಹನುಮಾನ್ ಚಾಲೀಸಾ ಪಠಿಸಲು ಅನುಮತಿ ನೀಡಿಲ್ಲ” ಎಂದು ಪ್ರತಿಭಟನಾಕಾರರೊಬ್ಬರು ಹೇಳಿದ್ದಾರೆ.

ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್, ಇಡೀ ವಿಷಯದ ಕುರಿತು ತನಿಖೆ ನಡೆಯುತ್ತಿದೆ. ನಾವು ಯಾವುದೇ ಸಂದರ್ಭದಲ್ಲೂ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಲು ಬಿಡುವುದಿಲ್ಲ ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?