AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನಾ ಪಟೋಲೆ ಪಾದ ತೊಳೆಯುವ ವಿಡಿಯೋ ವೈರಲ್: ಬಿಜೆಪಿ ವಾಗ್ದಾಳಿ, ತಿರುಗೇಟು ನೀಡಿದ ಕಾಂಗ್ರೆಸ್ ನಾಯಕ

ಮಹಾರಾಷ್ಟ್ರ (Maharashtra)ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸ್ಪೀಕರ್ ನಾನಾ ಪಟೋಲೆ (Nana Patole) ಅವರ ಪಾದಗಳನ್ನು ಇಬ್ಬರು ವ್ಯಕ್ತಿಗಳು ತೊಳೆದು ಹೂವುಗಳನ್ನು ಹಾಕುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಬಿಜೆಪಿ ಇದೇ ಕಾಂಗ್ರೆಸ್ ಸಂಸ್ಕೃತಿ ಎಂದು ಲೇವಡಿ ಮಾಡಿದ್ದರೆ, ನಾನಾ ಪಟೋಲೆ ಅವರು ಬಿಜೆಪಿಯ ಆಪಾದನೆಗಳನ್ನು ತಳ್ಳಿಹಾಕಿದ್ದಾರೆ. ವಿಡಿಯೋದಲ್ಲಿ ನಾನಾ ಪಟೋಲೆ ಅವರು ಸೋಫಾದಲ್ಲಿ ಕುಳಿತಿದ್ದು, ಇಬ್ಬರು ಯುವಕರು ಅವರ ಪಾದಗಳನ್ನು ತೊಳೆದು, ಪಾದಗಳ ಮೇಲೆ ಹೂವುಗಳು ಮತ್ತು ಹಣ್ಣುಗಳನ್ನಿಟ್ಟು ಸಾಂಪ್ರದಾಯಿಕವಾಗಿ ಗುರು ಪೂಜೆ ಮಾಡುತ್ತಿರುವುದು ಕಂಡುಬಂದಿದೆ.

ನಾನಾ ಪಟೋಲೆ ಪಾದ ತೊಳೆಯುವ ವಿಡಿಯೋ ವೈರಲ್: ಬಿಜೆಪಿ ವಾಗ್ದಾಳಿ, ತಿರುಗೇಟು ನೀಡಿದ ಕಾಂಗ್ರೆಸ್ ನಾಯಕ
ನಾನಾ ಪಟೋಲೆ
ನಯನಾ ರಾಜೀವ್
|

Updated on: Aug 03, 2026 | 10:21 AM

Share

ಮುಂಬೈ, ಆಗಸ್ಟ್​ 03: ಮಹಾರಾಷ್ಟ್ರ (Maharashtra)ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸ್ಪೀಕರ್ ನಾನಾ ಪಟೋಲೆ (Nana Patole) ಅವರ ಪಾದಗಳನ್ನು ಇಬ್ಬರು ವ್ಯಕ್ತಿಗಳು ತೊಳೆದು ಹೂವುಗಳನ್ನು ಹಾಕುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಬಿಜೆಪಿ ಇದೇ ಕಾಂಗ್ರೆಸ್ ಸಂಸ್ಕೃತಿ ಎಂದು ಲೇವಡಿ ಮಾಡಿದ್ದರೆ, ನಾನಾ ಪಟೋಲೆ ಅವರು ಬಿಜೆಪಿಯ ಆಪಾದನೆಗಳನ್ನು ತಳ್ಳಿಹಾಕಿದ್ದಾರೆ.

ವಿಡಿಯೋದಲ್ಲಿ ನಾನಾ ಪಟೋಲೆ ಅವರು ಸೋಫಾದಲ್ಲಿ ಕುಳಿತಿದ್ದು, ಇಬ್ಬರು ಯುವಕರು ಅವರ ಪಾದಗಳನ್ನು ತೊಳೆದು, ಪಾದಗಳ ಮೇಲೆ ಹೂವುಗಳು ಮತ್ತು ಹಣ್ಣುಗಳನ್ನಿಟ್ಟು ಸಾಂಪ್ರದಾಯಿಕವಾಗಿ ಗುರು ಪೂಜೆ ಮಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ಬಹಿರಂಗಗೊಳ್ಳುತ್ತಿದ್ದಂತೆಯೇ ನೆಟ್ಟಿಗರು ಹಾಗೂ ಬಿಜೆಪಿ ನಾಯಕರು ಪಟೋಲೆ ಅವರ ವಿರುದ್ಧ ‘ವಿಐಪಿ ಸಂಸ್ಕೃತಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ಸಚಿವ ಚಂದ್ರಶೇಖರ್ ಬಾವಂಕುಳೆ ಅವರು ವಿಡಿಯೋ ಕುರಿತು ಪ್ರತಿಕ್ರಿಯಿಸಿದ್ದು, ಇದು ಕಾಂಗ್ರೆಸ್ ನಾಯಕರ ನೈಜ ಸಂಸ್ಕೃತಿಯನ್ನು ತೋರಿಸುತ್ತದೆ. ಇಂತಹ ಘಟನೆಗಳಿಂದ ಅವರು ಪಾಠ ಕಲಿಯಬೇಕಿತ್ತು. ಸಾರ್ವಜನಿಕವಾಗಿ ನಕಾರಾತ್ಮಕ ಪ್ರಚಾರ ತಂದುಕೊಡುವ ಇಂತಹ ಅಭ್ಯಾಸಗಳಲ್ಲಿ ತೊಡಗಿಕೊಳ್ಳುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಮತ್ತಷ್ಟು ಓದಿ: Video: ಮಹಾರಾಷ್ಟ್ರದಲ್ಲಿ ಬುಲೆಟ್ ಪ್ರೂಫ್ ಜಾಕೆಟ್ ಧರಿಸಿ ಆಭರಣದಂಗಡಿ ದರೋಡೆ

ವಿವಾದದ ಕುರಿತು ಸ್ಪಷ್ಟನೆ ನೀಡಿರುವ ನಾನಾ ಪಟೋಲೆ, ಬಿಜೆಪಿಯ ಆರೋಪಗಳನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ: ಅದು ಗುರು ಪೂರ್ಣಿಮೆಯ ದಿನವಾಗಿತ್ತು. ನನ್ನ ಕುಟುಂಬದ ಇಬ್ಬರು ಕಿರಿಯ ಸದಸ್ಯರು ನನ್ನನ್ನು ತಮ್ಮ ‘ಗುರು’ ಎಂದು ಭಾವಿಸಿ ಗೌರವದ ಸಂಕೇತವಾಗಿ ಪಾದ ಪೂಜೆ ಮಾಡಲು ಬಯಸಿದ್ದರು. ಇದನ್ನು ಮಾಡಲು ನಾನು ಯಾರನ್ನೂ ಬಲವಂತಪಡಿಸಿಲ್ಲ ಎಂದು ಹೇಳಿದ್ದಾರೆ.

ವಿಡಿಯೋ

ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಗ್ಗೆ ನಮಗೆ ಉಪದೇಶ ನೀಡುವ ಹಕ್ಕು ಬಿಜೆಪಿಗೆ ಇಲ್ಲ. ಶ್ರೀರಾಮ ಮಂದಿರದ ದೇಣಿಗೆಯಲ್ಲೇ ಅಕ್ರಮ ಎಸಗಿರುವವರಿಗೆ ನಮಗೆ ಸಲಹೆ ನೀಡುವ ಅರ್ಹತೆಯಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಮುಂಬರುವ ಸಾಲು ಸಾಲು ಚುನಾವಣಾ ಕಣ ಕಾವೇರುತ್ತಿರುವ ಬೆನ್ನಲ್ಲೇ, ನಾನಾ ಪಟೋಲೆ ಅವರ ಈ ವಿಡಿಯೋವನ್ನು ಬಿಜೆಪಿ ಪ್ರಮುಖ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ.

ವಿಡಿಯೋದಲ್ಲಿದ್ದ ಕಾರ್ಯಕರ್ತರು ಅನಿಲ್ ಪಾಟೀಲ್ ಚಿಮೇಗಾಂವ್ಕರ್ ಮತ್ತು ಮಾಧವರಾವ್ ಪವಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಪಟೋಲೆ ಅವರು ಪಾದ ತೊಳೆಯಲು ಕೇಳಿರಲಿಲ್ಲ, ತಾವೇ ಸ್ವತಃ ನಂಬಿಕೆಯಿಂದ ಪಾದ ಪೂಜೆ ಮಾಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ