AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಸಮಿತಿ: ಕಾರ್ಯಪಡೆ ಮುನ್ನಡೆಸಲು ನೇಮಕಗೊಂಡ ನಂದನ್ ನಿಲೇಕಣಿ ಯಾರು?

ದೇಶದ ಪರೀಕ್ಷಾ ವ್ಯವಸ್ಥೆಯನ್ನು ಸುಧಾರಿಸಲು ಪ್ರಧಾನಿ ಮೋದಿ 'ಉನ್ನತಾಧಿಕಾರ ಕಾರ್ಯಪಡೆ' ರಚಿಸಿದ್ದಾರೆ. ಇದರ ನೇತೃತ್ವವನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ವಹಿಸಲಿದ್ದಾರೆ. ನೀಟ್ ಸೋರಿಕೆ ಹಿನ್ನೆಲೆಯಲ್ಲಿ, ಪರೀಕ್ಷೆಗಳಲ್ಲಿ ತಂತ್ರಜ್ಞಾನ ಆಧಾರಿತ ಪಾರದರ್ಶಕತೆ ತರುವುದು ಈ ಸಮಿತಿಯ ಮುಖ್ಯ ಉದ್ದೇಶ. ಆಧಾರ್ ಯಶಸ್ವಿಯಾಗಿ ಕಾರ್ಯಗತಗೊಳಿಸಿದ ನಿಲೇಕಣಿ, ಇಸ್ರೋ, ಐಬಿ ಮಾಜಿ ಮುಖ್ಯಸ್ಥರೊಂದಿಗೆ ದೇಶದ ಪರೀಕ್ಷಾ ಭವಿಷ್ಯವನ್ನು ರೂಪಿಸಲಿದ್ದಾರೆ.

ದೇಶದ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಸಮಿತಿ: ಕಾರ್ಯಪಡೆ ಮುನ್ನಡೆಸಲು ನೇಮಕಗೊಂಡ ನಂದನ್ ನಿಲೇಕಣಿ ಯಾರು?
ನಂದನ್ ನಿಲೇಕಣಿ
ನಯನಾ ರಾಜೀವ್
|

Updated on: Jul 27, 2026 | 7:21 AM

Share

ನವದೆಹಲಿ, ಜುಲೈ 27: ನೀಟ್(NEET) ಪತ್ರಿಕೆ ಸೋರಿಕೆ ಪ್ರಕರಣ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ ಬೆನ್ನಲ್ಲೇ, ಭಾರತದ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಆಧುನೀಕರಿಸಲು ಹಾಗೂ ಪಾರದರ್ಶಕತೆ ತರಲು ಪ್ರಧಾನಿ ನರೇಂದ್ರ ಮೋದಿ ಅವರು ‘ಉನ್ನತಾಧಿಕಾರ ಕಾರ್ಯಪಡೆ’ ರಚನೆ ಮಾಡುವುದಾಗಿ ಘೋಷಿಸಿದ್ದಾರೆ. ಈ ತಂತ್ರಜ್ಞಾನ ಆಧಾರಿತ ಸುಧಾರಣಾ ಸಮಿತಿಯ ಮುಖ್ಯಸ್ಥರನ್ನಾಗಿ ಇನ್ಫೋಸಿಸ್‌ನ ಸಹ-ಸಂಸ್ಥಾಪಕ ಹಾಗೂ ಪ್ರಸಿದ್ಧ ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ ಅವರನ್ನು ನೇಮಿಸಲಾಗಿದೆ.

ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಈ ವಿಷಯ ಪ್ರಕಟಿಸಿರುವ ಪ್ರಧಾನಿ ಮೋದಿ, “ನಮ್ಮ ಪರೀಕ್ಷಾ ವ್ಯವಸ್ಥೆಯು ವಿಶ್ವಾಸಾರ್ಹ, ಪಾರದರ್ಶಕ ಹಾಗೂ ತಂತ್ರಜ್ಞಾನ ಆಧಾರಿತವಾಗಿರಬೇಕು. ಪರೀಕ್ಷಾ ಸುಧಾರಣೆಗಳಿಗಾಗಿ ಜಾಗತಿಕ ಮಟ್ಟದ ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಇವರ ಶಿಫಾರಸುಗಳ ಆಧಾರದ ಮೇಲೆ ಮುಂಬರುವ ಪರೀಕ್ಷೆಗಳ ವಿಶ್ವಾಸಾರ್ಹತೆಯನ್ನು ಶೀಘ್ರದಲ್ಲೇ ಖಚಿತಪಡಿಸುತ್ತೇವೆ” ಎಂದು ತಿಳಿಸಿದ್ದಾರೆ.

ನಂದನ್ ನಿಲೇಕಣಿ ಯಾರು?

ಇನ್ಫೋಸಿಸ್ ಪ್ರಯಾಣ: ನಂದನ್ ನಿಲೇಕಣಿ ಅವರು 1981 ರಲ್ಲಿ ಎನ್.ಆರ್. ನಾರಾಯಣ ಮೂರ್ತಿ ಅವರೊಂದಿಗೆ ಸೇರಿ ಇನ್ಫೋಸಿಸ್ ಸಂಸ್ಥೆಯನ್ನು ಸ್ಥಾಪಿಸಿದ ಪ್ರಮುಖ ಸಹ-ಸಂಸ್ಥಾಪಕರು. 2002 ರಿಂದ 2007 ರವರೆಗೆ ಇನ್ಫೋಸಿಸ್ ಸಿಇಒ ಆಗಿ ಸೇವೆ ಸಲ್ಲಿಸಿದ ಅವರು, ಪ್ರಸ್ತುತ ಸಂಸ್ಥೆಯ ಕಾರ್ಯನಿರ್ವಾಹಕೇತರ ಅಧ್ಯಕ್ಷರಾಗಿದ್ದಾರೆ.

2009 ರಲ್ಲಿ ಇನ್ಫೋಸಿಸ್ ತೊರೆದು ಮನಮೋಹನ್ ಸಿಂಗ್ ಅವರ ಆಹ್ವಾನದ ಮೇರೆಗೆ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ (UIDAI) ಮೊದಲ ಅಧ್ಯಕ್ಷರಾಗಿ ಜಗತ್ತಿನ ಅತಿ ದೊಡ್ಡ ಬಯೋಮೆಟ್ರಿಕ್ ವ್ಯವಸ್ಥೆಯಾದ ‘ಆಧಾರ್’ ಯೋಜನೆಯನ್ನು ಯಶಸ್ವಿಯಾಗಿ ರೂಪಿಸಿದರು.

ಮತ್ತಷ್ಟು ಓದಿ: ನೀಟ್​ ಕೇಸ್ ಬಳಿಕ ಎಚ್ಚೆತ್ತ ಕೇಂದ್ರ: ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?

ಡಿಜಿಟಲ್ ಕ್ರಾಂತಿ: ಭಾರತದಲ್ಲಿ ಯುಪಿಐ (UPI) ಮತ್ತು ಒಎನ್‌ಡಿಸಿ (ONDC) ನಂತಹ ಡಿಜಿಟಲ್ ಮೂಲಸೌಕರ್ಯಗಳನ್ನು ರೂಪಿಸುವಲ್ಲಿ ಇವರ ಪಾತ್ರ ಪ್ರಮುಖವಾಗಿದೆ.

ರಾಜಕೀಯ: 2014 ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಬಿಜೆಪಿ ನಾಯಕ ಅನಂತ್ ಕುಮಾರ್ ವಿರುದ್ಧ ಸೋಲನುಭವಿಸಿದ್ದರು.

ಕಾರ್ಯಪಡೆಯಲ್ಲಿದ್ದಾರೆ ಪ್ರಮುಖ ಗಣ್ಯರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಪ್ರಕ್ರಿಯೆಗಳನ್ನು ಸುಧಾರಿಸಲು ರಚಿಸಲಾದ ಈ ಕಾರ್ಯಪಡೆಯಲ್ಲಿ ನಿಲೇಕಣಿ ಅವರೊಂದಿಗೆ ಇಸ್ರೋ (ISRO) ಮಾಜಿ ಅಧ್ಯಕ್ಷ ಎಸ್. ಸೋಮನಾಥ್, ಐಬಿ (IB) ಮಾಜಿ ನಿರ್ದೇಶಕ ತಪನ್ ದೇಕಾ, ಐಐಟಿ ಮದ್ರಾಸ್ ನಿರ್ದೇಶಕ ಪ್ರೊ. ವಿ. ಕಾಮಕೋಟಿ, ಮಾಜಿ ಶಿಕ್ಷಣ ಕಾರ್ಯದರ್ಶಿ ಅನಿತಾ ಕರ್ವಾಲ್ ಮತ್ತು ಅಮೃತ್ ಲಾಲ್ ಮೀನಾ ಅವರಂತಹ ಪ್ರಮುಖ ತಜ್ಞರು ಸದಸ್ಯರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್