AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿಗ್ರಾಮ ಉಪಚುನಾವಣೆ ಕದನ: ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್‌ಗೆ ಅಕ್ಟೋಬರ್ 21ರವರೆಗೆ ಮಧ್ಯಂತರ ಜಾಮೀನು

ನಂದಿಗ್ರಾಮ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್‌ಗೆ ಕೋಲ್ಕತ್ತಾ ಹೈಕೋರ್ಟ್ ಅಕ್ಟೋಬರ್ 21ರವರೆಗೆ ಮಧ್ಯಂತರ ಜಾಮೀನು ನೀಡಿದೆ. ನಾಮಪತ್ರ ಸಲ್ಲಿಕೆ ಬಳಿಕ ಹಳೆಯ ಪ್ರಕರಣಗಳ ಆಧಾರದ ಮೇಲೆ ಬಂಧಿಸಿದ್ದ ಕ್ರಮವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ಜಾಮೀನಿನಿಂದಾಗಿ ಪ್ರಧಾನ್ ಪ್ರಚಾರದಲ್ಲಿ ಭಾಗವಹಿಸಲು ಮುಕ್ತವಾಗಿದ್ದು, ಕಾಂಗ್ರೆಸ್‌ಗೆ ಬಲ ಬಂದಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಸಮಾನ ಅವಕಾಶದ ಮಹತ್ವವನ್ನು ನ್ಯಾಯಾಲಯ ಒತ್ತಿಹೇಳಿದೆ.

ನಂದಿಗ್ರಾಮ ಉಪಚುನಾವಣೆ ಕದನ: ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್‌ಗೆ ಅಕ್ಟೋಬರ್ 21ರವರೆಗೆ ಮಧ್ಯಂತರ ಜಾಮೀನು
ಮಿಲನ್Image Credit source: ECI
ನಯನಾ ರಾಜೀವ್
|

Updated on: Sep 29, 2026 | 12:59 PM

Share

ಕೋಲ್ಕತ್ತಾ, ಸೆಪ್ಟೆಂಬರ್ 29: ಪಶ್ಚಿಮ ಬಂಗಾಳದ ರಾಜಕೀಯವಾಗಿ ಅತ್ಯಂತ ಸೂಕ್ಷ್ಮ ಹಾಗೂ ಮಹತ್ವದ ಕ್ಷೇತ್ರವಾದ ನಂದಿಗ್ರಾಮದ ಮುಂಬರುವ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್​ಗೆ ಹೈಕೋರ್ಟ್ ಅಕ್ಟೋಬರ್ 21 ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ತೀರ್ಥಂಕರ ಘೋಷ್ ಅವರಿದ್ದ ಏಕಸದಸ್ಯ ಪೀಠವು 20,000 ಸಾವಿರ ಮೌಲ್ಯದ ಬಾಂಡ್ ಆಧಾರದ ಮೇಲೆ ಈ ಜಾಮೀನು ನೀಡಿದ್ದು, ಇದರೊಂದಿಗೆ ಪ್ರಧಾನ್ ಅವರು ಜೈಲಿನಿಂದ ಹೊರಬಂದು ಮುಕ್ತವಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ಮತ್ತು ಕಣಕ್ಕಿಳಿಯಲು ಹಾದಿ ಸುಗಮವಾಗಿದೆ.

ನಾಮಪತ್ರ ಸಲ್ಲಿಕೆಯ ನಂತರವಷ್ಟೇ ಬಂಧನ: ಮಿಲನ್ ಪ್ರಧಾನ್ ಅವರು ಉಪಚುನಾವಣೆಗೆ ತಮ್ಮ ನಾಮಪತ್ರವನ್ನು ಸಲ್ಲಿಸುವ ವೇಳೆಗೆ ಯಾವುದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರಲಿಲ್ಲ. ಆದರೆ, ನಾಮಪತ್ರ ಸಲ್ಲಿಕೆಯಾದ ಬೆನ್ನಲ್ಲೇ ಪೊಲೀಸರು ಅವರನ್ನು ವಶಕ್ಕೆ ಪಡೆದ ಕ್ರಮವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿತು. ಪ್ರಧಾನ್ ಮೇಲಿರುವ ಪ್ರಕರಣಗಳು 2007ರ ಐತಿಹಾಸಿಕ ನಂದಿಗ್ರಾಮ ಭೂಸ್ವಾಧೀನ ವಿರೋಧಿ ಚಳವಳಿಗೆ ಸಂಬಂಧಿಸಿದ ಹಳೆಯ ಮೊಕದ್ದಮೆಗಳಾಗಿವೆ. 2007 ರ ನಂತರ ಅವರು ಯಾವುದೇ ಅಪರಾಧ ಕೃತ್ಯದಲ್ಲಿ ಬೇಕಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಲು ರಾಜ್ಯ ಸರ್ಕಾರ ಯಾವುದೇ ಪುರಾವೆ ಒದಗಿಸಿಲ್ಲ ಎಂದು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತು.

ಸಿಬಿಐ ತನಿಖೆ: ನಂದಿಗ್ರಾಮ ಹಿಂಸಾಚಾರಕ್ಕೆ ಸಂಬಂಧಿಸಿದ ಮೂಲ ಘಟನೆಗಳನ್ನು ಈಗಾಗಲೇ ಕೇಂದ್ರೀಯ ತನಿಖಾ ದಳ (ಸಿಬಿಐ) ಸಂಪೂರ್ಣವಾಗಿ ತನಿಖೆ ನಡೆಸಿದೆ. ಪ್ರಧಾನ್ ಅವರು ಅಂದಿನಿಂದಲೂ ನಿರಂತರ ರಾಜಕೀಯ-ಸಾಮಾಜಿಕ ಕಾರ್ಯಕರ್ತರಾಗಿಯೇ ಉಳಿದಿದ್ದಾರೆ ಎಂದು ಹೈಕೋರ್ಟ್ ಉಲ್ಲೇಖಿಸಿತು.

ಇದಕ್ಕೂ ಮುನ್ನ ಮತ್ತೊಂದು ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸೌಗತ ಭಟ್ಟಾಚಾರ್ಯ ಅವರ ಪೀಠವು, ಪುರ್ಬಾ ಮೇದಿನಿಪುರ ಜಿಲ್ಲೆಯ ಖೇಜುರಿ ಠಾಣೆಯ 2007ರ ಹಳೆಯ ಪ್ರಕರಣವೊಂದರಲ್ಲಿ ಸೆಪ್ಟೆಂಬರ್ 19 ರಂದು ತನಿಖಾಧಿಕಾರಿಗಳು ‘ಬಂಧನ ತೋರಿಸಲು’ ಕೋರಿದ್ದನ್ನು ಕಂಡು ಅಚ್ಚರಿ ವ್ಯಕ್ತಪಡಿಸಿತ್ತು. ಪ್ರಧಾನ್ ವಿರುದ್ಧ ಯಾವುದೇ ಪ್ರೊಡಕ್ಷನ್ ವಾರಂಟ್ ನೀಡಿದ ದಾಖಲೆ ಇಲ್ಲದಿರುವುದರಿಂದ, ಅಕ್ಟೋಬರ್ 12 ರವರೆಗೆ ಅವರ ವಿರುದ್ಧ ಆ ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಮತ್ತು ಮುಕ್ತವಾಗಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗೆ ನ್ಯಾಯಾಲಯ ಸೂಚಿಸಿತ್ತು.

ಮತ್ತಷ್ಟು ಓದಿ: ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ

ಚುನಾವಣಾ ವೇಳಾಪಟ್ಟಿ: ನಂದಿಗ್ರಾಮ ಉಪಚುನಾವಣೆಗೆ ಮತದಾನವು ಅಕ್ಟೋಬರ್ 6 ರಂದು ನಿಗದಿಯಾಗಿದ್ದು, ಬಹಿರಂಗ ಪ್ರಚಾರವು ಅಕ್ಟೋಬರ್ 4 ರ ಸಂಜೆಗೆ ಮುಕ್ತಾಯಗೊಳ್ಳಲಿದೆ. ಕೇವಲ ಕೆಲವೇ ದಿನಗಳು ಬಾಕಿ ಇರುವಾಗ ಜಾಮೀನು ಸಿಕ್ಕಿರುವುದು ಕಾಂಗ್ರೆಸ್ ಪಾಳೆಯಕ್ಕೆ ದೊಡ್ಡ ಶಕ್ತಿ ತುಂಬಿದೆ.

2007ರ ನಂದಿಗ್ರಾಮ ಚಳವಳಿಯ ಇತಿಹಾಸ: ಪಶ್ಚಿಮ ಬಂಗಾಳದಲ್ಲಿ ಎಡರಂಗ ಸರ್ಕಾರದ ಅವಧಿಯಲ್ಲಿ (ಸಿಪಿಐ-ಎಂ ಆಡಳಿತ) ರಾಸಾಯನಿಕ ಕೈಗಾರಿಕಾ ವಲಯಕ್ಕಾಗಿ (SEZ) ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧ ಭುಗಿಲೆದ್ದ ರೈತ ಚಳವಳಿಯೇ ನಂದಿಗ್ರಾಮ ಆಂದೋಲನ. 2007ರ ಮಾರ್ಚ್ 14ರಂದು ನಡೆದ ಪೊಲೀಸ್ ಗೋಲಿಬಾರ್‌ನಲ್ಲಿ 14 ರೈತರು ಮೃತಪಟ್ಟಿದ್ದರು. ಈ ಚಳವಳಿಯೇ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಅಧಿಕಾರಕ್ಕೆ ಬರಲು ಪ್ರಮುಖ ತಿರುವಾಗಿತ್ತು.

ಚುನಾವಣೆಗಳಲ್ಲಿ ಹಳೆಯ ಪ್ರಕರಣಗಳ ಬಳಕೆ ಮತ್ತು ನ್ಯಾಯಾಂಗ ನಿಲುವು: ಚುನಾವಣೆ ಸಂದರ್ಭದಲ್ಲಿ ಎದುರಾಳಿ ಅಭ್ಯರ್ಥಿಗಳ ನಾಮಪತ್ರ ರದ್ದತಿ ಅಥವಾ ಪ್ರಚಾರಕ್ಕೆ ಅಡ್ಡಿಪಡಿಸಲು ಹಳೆಯ ಪ್ರಕರಣಗಳನ್ನು ಮುನ್ನೆಲೆಗೆ ತಂದು ಬಂಧಿಸುವ ರಾಜಕೀಯ ಪ್ರವೃತ್ತಿಯನ್ನು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳು ಹಲವು ಬಾರಿ ಖಂಡಿಸಿವೆ. ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಮತದಾರರಿಗೆ ಆಯ್ಕೆಯ ಹಕ್ಕು ಸಿಗಬೇಕಾದರೆ ಅಭ್ಯರ್ಥಿಗೆ ಸ್ಪರ್ಧಿಸಲು ಸಮಾನ ಅವಕಾಶ ನೀಡಬೇಕು ಎಂಬುದು ನ್ಯಾಯಾಲಯದ ಪ್ರಮುಖ ಆಶಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ