Chandrababu Naidu: ಜೂನ್ 12ರಂದು ಆಂಧ್ರ ಪ್ರದೇಶದ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ

"ಬಿಜೆಪಿ, ಜನಸೇನಾ ಮತ್ತು ಟಿಡಿಪಿಯ ಎಲ್ಲಾ ಶಾಸಕರು ನಾನು ಆಂಧ್ರಪ್ರದೇಶದ ಎನ್‌ಡಿಎ ಸರ್ಕಾರದ ಮುಂಬರುವ ಮುಖ್ಯಮಂತ್ರಿಯಾಗಲು ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ" ಎಂದು ಎನ್‌ಡಿಎ ಶಾಸಕರ ಸಭೆಯ ನಂತರ ನಾಯ್ಡು ಹೇಳಿದ್ದಾರೆ. ನಾಯ್ಡು ಅವರು ಜೂನ್ 12 ರಂದು ಬುಧವಾರ ಬೆಳಿಗ್ಗೆ 11.27 ಕ್ಕೆ ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೇಸರಪಲ್ಲಿ ಐಟಿ ಪಾರ್ಕ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Chandrababu Naidu: ಜೂನ್ 12ರಂದು ಆಂಧ್ರ ಪ್ರದೇಶದ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ
ಚಂದ್ರಬಾಬು ನಾಯ್ಡು
Follow us
|

Updated on:Jun 11, 2024 | 8:06 PM

ದೆಹಲಿ ಜೂನ್ 11: ಆಂಧ್ರಪ್ರದೇಶ (Andhra Pradesh) ವಿಧಾನಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ-ಭಾರತೀಯ ಜನತಾ ಪಕ್ಷ-ಜನಸೇನಾ ಮೈತ್ರಿಕೂಟವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ ನಾರಾ ಚಂದ್ರಬಾಬು ನಾಯ್ಡು (Nara Chandrababu Naidu) ಅವರು ಬುಧವಾರ ಜೂನ್ 12 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 74ರ ಹರೆಯದ ನಾಯ್ಡು ಮಂಗಳವಾರ ವಿಜಯವಾಡದ ರಾಜಭವನದಲ್ಲಿ ಆಂಧ್ರಪ್ರದೇಶದ ರಾಜ್ಯಪಾಲ ಎಸ್ ಅಬ್ದುಲ್ ನಜೀರ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಔಪಚಾರಿಕವಾಗಿ ಹಕ್ಕು ಮಂಡಿಸಿದರು. ಅವರ ಜೊತೆ ಪಕ್ಷದ ಮಿತ್ರಪಕ್ಷಗಳಾದ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ದಗ್ಗುಬಾಟಿ ಪುರಂದೇಶ್ವರಿ ಕೂಡ ಇದ್ದರು.

“ಬಿಜೆಪಿ, ಜನಸೇನಾ ಮತ್ತು ಟಿಡಿಪಿಯ ಎಲ್ಲಾ ಶಾಸಕರು ನಾನು ಆಂಧ್ರಪ್ರದೇಶದ ಎನ್‌ಡಿಎ ಸರ್ಕಾರದ ಮುಂಬರುವ ಮುಖ್ಯಮಂತ್ರಿಯಾಗಲು ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ” ಎಂದು ಎನ್‌ಡಿಎ ಶಾಸಕರ ಸಭೆಯ ನಂತರ ನಾಯ್ಡು ಹೇಳಿದ್ದಾರೆ. 2014 ರಲ್ಲಿ, ನಾಯ್ಡು ವಿಭಜಿತ ಆಂಧ್ರಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ 2019 ರವರೆಗೆ ಸೇವೆ ಸಲ್ಲಿಸಿದರು. 2019 ರ ಚುನಾವಣೆಯಲ್ಲಿ ಅವರು ಪರಾಭವಗೊಂಡಿದ್ದರು.

ಚಂದ್ರಬಾಬು ನಾಯ್ಡು ಯಾವಾಗ ಮತ್ತು ಎಲ್ಲಿ ಪ್ರಮಾಣವಚನ?

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಅವರು ಜೂನ್ 12 ರಂದು ಬುಧವಾರ ಬೆಳಿಗ್ಗೆ 11.27 ಕ್ಕೆ ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೇಸರಪಲ್ಲಿ ಐಟಿ ಪಾರ್ಕ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪ್ರಮಾಣ ವಚನ ಸ್ವೀಕಾರಕ್ಕೆ ಯಾರೆಲ್ಲಾ ಬರಲಿದ್ದಾರೆ?

ನಾಯ್ಡು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹಲವಾರು ಉನ್ನತ ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮೋದಿ ಬುಧವಾರ ಬೆಳಗ್ಗೆ 8:20ಕ್ಕೆ ದೆಹಲಿಯಿಂದ ಗನ್ನವರಂ ವಿಮಾನ ನಿಲ್ದಾಣಕ್ಕೆ ತೆರಳಿ 10:40ಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಆಂಧ್ರಪ್ರದೇಶದ ಮುಖ್ಯ ಕಾರ್ಯದರ್ಶಿ ನೀರಭ್ ಕುಮಾರ್ ಪ್ರಸಾದ್ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ:Mohan Charan Majhi: ಒಡಿಶಾದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಆಯ್ಕೆ 

ಮೂಲಗಳ ಪ್ರಕಾರ ಪ್ರಧಾನಿ ಮೋದಿ 11 ರಿಂದ 12.30 ರವರೆಗೆ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು 10.55 ಕ್ಕೆ ಸ್ಥಳಕ್ಕೆ ತಲುಪುವ ನಿರೀಕ್ಷೆಯಿದೆ. ಪ್ರಧಾನಿಯವರು ಮಧ್ಯಾಹ್ನ 12.40 ಕ್ಕೆ ವಿಮಾನ ನಿಲ್ದಾಣಕ್ಕೆ ಹಿಂತಿರುಗಲಿದ್ದು 12.45 ಕ್ಕೆ ಭುವನೇಶ್ವರಕ್ಕೆ ಹೋಗಲಿದ್ದಾರೆ. ಅಲ್ಲಿ ಅವರು ಒಡಿಶಾ ಮುಖ್ಯಮಂತ್ರಿಯ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

“ಜೆಪಿ ನಡ್ಡಾ ಜಿ ಮತ್ತು ಅಮಿತ್ ಶಾ ಜಿ ಇಂದು ಇಲ್ಲಿಗೆ ಬರುತ್ತಿದ್ದಾರೆ. ಇಲ್ಲಿಗೆ ಬಂದಿಳಿದ ನಂತರ, ಅವರು ಚಂದ್ರಬಾಬು ನಾಯ್ಡು ಅವರ ನಿವಾಸಕ್ಕೆ ತೆರಳುತ್ತಾರೆ. ಅಲ್ಲಿ ಅವರು ಖಾತೆಗಳ ಬಗ್ಗೆ ಚರ್ಚಿಸುತ್ತಾರೆ ಎಂದು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ ಡಿ ಪುರಂದೇಶ್ವರಿ ಎಎನ್‌ಐಗೆ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:05 pm, Tue, 11 June 24

ತಾಜಾ ಸುದ್ದಿ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ವೇದಿಕೆಯಲ್ಲೇ ಕಾರ್ಯಕರ್ತರ ಮೇಲೆ ಸಿಟ್ಟಿಗೆದ್ದ ಹೆಚ್​ಡಿ ಕುಮಾರಸ್ವಾಮಿ
ವೇದಿಕೆಯಲ್ಲೇ ಕಾರ್ಯಕರ್ತರ ಮೇಲೆ ಸಿಟ್ಟಿಗೆದ್ದ ಹೆಚ್​ಡಿ ಕುಮಾರಸ್ವಾಮಿ
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ