ಯೋಗ ದಿನವನ್ನು ಮನೆಯಲ್ಲೇ ಆಚರಿಸಿ -ದೇಶದ ಜನರಿಗೆ ಪ್ರಧಾನಿ ಮೋದಿ ಕರೆ

ದೆಹಲಿ: ಇಂದು 6ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಈ ದಿನವನ್ನು ಮನೆಯಲ್ಲೇ ಆಚರಿಸಿ ಎಂದು ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಮನೆಯಲ್ಲೇ ದೈಹಿಕ ಅಂತರ ಕಾಪಾಡಿಕೊಂಡು ಯೋಗ ದಿನ ಆಚರಿಸಿ ಎಂದಿದ್ದಾರೆ. ಕಳೆದ ಐದು ವರ್ಷಗಳಿಂದ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಆದರೆ ಇದೇ ಮೊದಲ ಬಾರಿಗೆ ವಿಶ್ವಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಡಿಜಿಟಲ್‌ ವೇದಿಕೆಗಳ ಮೂಲಕ ಆಚರಿಸಲಾಗುತ್ತಿದೆ. ವಿಶ್ವದಲ್ಲಿ ಕೊರೊನಾ ಆತಂಕ ಮನೆಮಾಡಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಗಾಗಿ ಆನ್‌ಲೈನ್‌ ಮೂಲಕ […]

ಯೋಗ ದಿನವನ್ನು ಮನೆಯಲ್ಲೇ ಆಚರಿಸಿ -ದೇಶದ ಜನರಿಗೆ ಪ್ರಧಾನಿ ಮೋದಿ ಕರೆ

Updated on: Jun 21, 2020 | 6:40 AM

ದೆಹಲಿ: ಇಂದು 6ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಈ ದಿನವನ್ನು ಮನೆಯಲ್ಲೇ ಆಚರಿಸಿ ಎಂದು ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಮನೆಯಲ್ಲೇ ದೈಹಿಕ ಅಂತರ ಕಾಪಾಡಿಕೊಂಡು ಯೋಗ ದಿನ ಆಚರಿಸಿ ಎಂದಿದ್ದಾರೆ.

ಕಳೆದ ಐದು ವರ್ಷಗಳಿಂದ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಆದರೆ ಇದೇ ಮೊದಲ ಬಾರಿಗೆ ವಿಶ್ವಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಡಿಜಿಟಲ್‌ ವೇದಿಕೆಗಳ ಮೂಲಕ ಆಚರಿಸಲಾಗುತ್ತಿದೆ.

ವಿಶ್ವದಲ್ಲಿ ಕೊರೊನಾ ಆತಂಕ ಮನೆಮಾಡಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಗಾಗಿ ಆನ್‌ಲೈನ್‌ ಮೂಲಕ ಯೋಗಾಭ್ಯಾಸ ಮತ್ತು ಇತರ ಕಾರ್ಯಕ್ರಮಗಳು ನಡೆಯಲಿವೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ಎಲ್ಲ ಗಣ್ಯರು ಆನ್‌ಲೈನ್‌ನಲ್ಲಿ ನೇರಪ್ರಸಾರದ ಮೂಲಕ ಯೋಗದಿನವನ್ನು ಈ ಬಾರಿ ಆಚರಿಸಲಿದ್ದಾರೆ.