ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ: ಮುಂದೇನು?
ಮೂರು ಕೃಷಿ ಕಾನೂನುಗಳನ್ನು ಕಾರ್ಯಗತಗೊಳಿಸಲಾಗಿಲ್ಲ, ಆದರೆ ಅವು ಸಂಸತ್ತು ಅಂಗೀಕರಿಸಿದ ಕಾನೂನುಗಳಾಗಿವೆ, ಅದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದೆ. ಹಾಗಾಗಿ ಅವುಗಳನ್ನು ಸಂಸತ್ತಿನಲ್ಲಿ ಮಾತ್ರ ರದ್ದುಗೊಳಿಸಬಹುದು ಎಂದು ಮಲ್ಹೋತ್ರಾ ಹೇಳಿದರು.
ಒಂದು ವರ್ಷಗಳ ಕಾಲ ನಡೆದ ಪ್ರತಿಭಟನೆಗಳ ನಂತರ ನವೆಂಬರ್ 19ರ ಶುಕ್ರವಾರದಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನವೆಂಬರ್‌ನಲ್ಲಿ ಪ್ರಾರಂಭವಾಗಲಿರುವ ಚಳಿಗಾಲದ ಸಂಸತ್ತಿನ ಅಧಿವೇಶನದಲ್ಲಿ(Parliament session) ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು(farm laws) ರದ್ದುಗೊಳಿಸಲಾಗುವುದು ಎಂದು ಘೋಷಿಸಿದರು. ಈ ಕಾನೂನುಗಳನ್ನು ಹಿಂಪಡೆಯುವುದು ಸೆಪ್ಟೆಂಬರ್ 2020 ರಲ್ಲಿ ಆಂದೋಲನವನ್ನು ಪ್ರಾರಂಭಿಸಿದ ಪ್ರತಿಭಟನಾಕಾರರ ಪ್ರಾಥಮಿಕ ಬೇಡಿಕೆಯಾಗಿತ್ತು. ಈಗ ಘೋಷಣೆಯನ್ನು ಮಾಡಲಾಗಿದೆ ಕಾನೂನುಗಳನ್ನು ರದ್ದುಗೊಳಿಸಲು ಯಾವ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು? ಎಂಬುದು ಮುಂದಿನ ಪ್ರಶ್ನೆ. ಕಾನೂನು ತಜ್ಞರ ಪ್ರಕಾರ, ಕಾನೂನುಗಳನ್ನು ರದ್ದುಗೊಳಿಸಲು ಸಂಸತ್ತಿನಲ್ಲಿ ಮಸೂದೆಯನ್ನು ಅಂಗೀಕರಿಸಬೇಕು. “ರದ್ದತಿ ಮಾಡಲು ಸಂಸತ್ತಿನ ಅಧಿಕಾರವು ಸಂವಿಧಾನದ ಅಡಿಯಲ್ಲಿ ಕಾನೂನನ್ನು ಜಾರಿಗೊಳಿಸುವಂತೆಯೇ ಇರುತ್ತದೆ” ಎಂದು ಕೇಂದ್ರದ ಮಾಜಿ ಕಾನೂನು ಕಾರ್ಯದರ್ಶಿ ಪಿಕೆ ಮಲ್ಹೋತ್ರಾ (PK Malhotra) ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.
ರದ್ದುಗೊಳಿಸುವ ಒಂದೇ ಮಸೂದೆಯ ಮೂಲಕ ಸರ್ಕಾರವು ಮೂರು ಕಾನೂನುಗಳನ್ನು ರದ್ದುಗೊಳಿಸಬಹುದು ಎಂದು ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಪಿಡಿಟಿ ಆಚಾರ್ಯ ಹೇಳಿದರು. ಮಸೂದೆಯ ಲಕ್ಷ್ಯ ಮತ್ತು ಕಾರಣಗಳ ಹೇಳಿಕೆಯಲ್ಲಿ, ಸರ್ಕಾರವು ಮೂರು ಕಾನೂನುಗಳನ್ನು ರದ್ದುಗೊಳಿಸಲು ಉದ್ದೇಶಿಸಿರುವ ಕಾರಣಗಳನ್ನು ಉಲ್ಲೇಖಿಸಬಹುದು ಎಂದು ಅವರು ಹೇಳಿದರು. “ರದ್ದತಿ ಮಸೂದೆಯನ್ನು ಅಂಗೀಕರಿಸಿದಾಗ ಅದು ಕೂಡಾ ಕಾನೂನು ಎಂದು ಪಿಕೆ ಮಲ್ಹೋತ್ರಾ ಹೇಳಿದರು.
ಮೂರು ಕೃಷಿ ಕಾನೂನುಗಳನ್ನು ಕಾರ್ಯಗತಗೊಳಿಸಲಾಗಿಲ್ಲ, ಆದರೆ ಅವು ಸಂಸತ್ತು ಅಂಗೀಕರಿಸಿದ ಕಾನೂನುಗಳಾಗಿವೆ, ಅದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದೆ. ಹಾಗಾಗಿ ಅವುಗಳನ್ನು ಸಂಸತ್ತಿನಲ್ಲಿ ಮಾತ್ರ ರದ್ದುಗೊಳಿಸಬಹುದು ಎಂದು ಮಲ್ಹೋತ್ರಾ ಹೇಳಿದರು.
ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾನೂನುಗಳು ರೈತರ ಹಿತದೃಷ್ಟಿಯಿಂದ ಇವೆ ಎಂದು ಹೇಳಿದ್ದು ದೇಶದ ಜನರ ಕ್ಷಮೆಯಾಚಿಸಿದರು, ಸರ್ಕಾರವು ರೈತರ ಒಂದು ವರ್ಗವನ್ನು ಮನವರಿಕೆ ಮಾಡಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು.
“ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ ಎಂದು ನಾನು ನಿಮಗೆ ಹೇಳಲು ಬಂದಿದ್ದೇನೆ. ಈ ತಿಂಗಳ ಅಂತ್ಯದಲ್ಲಿ ಪ್ರಾರಂಭವಾಗುವ ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ, ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಸಾಂವಿಧಾನಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ” ಎಂದು ಪ್ರಧಾನಿ ಮೋದಿ ಹೇಳಿದರು.
ಮೂರು ವಿವಾದಾತ್ಮಕ ಕೃಷಿ ಕಾನೂನುಗಳು- ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನೆ ಮತ್ತು ಅನುಕೂಲ) ಕಾಯಿದೆ, 2020, ರೈತರ (ಸಬಲೀಕರಣ ಮತ್ತು ರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯಿದೆ, 2020 ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯಿದೆ 2020. ಈ ಕಾಯ್ದೆಗಳನ್ನು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಅಂಗೀಕರಿಸಿತು.
ಇದನ್ನೂ ಓದಿ: Farm Laws Timeline ಕೃಷಿ ಕಾನೂನು ಅಂಗೀಕಾರದಿಂದ ರದ್ದತಿ ನಿರ್ಧಾರವರೆಗೆ ಏನೆಲ್ಲಾ ನಡೆಯಿತು?