ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ: ಮಹಾರಾಷ್ಟ್ರ ಜನತೆಯ ಕ್ಷಮೆ ಕೋರಿದ ಪ್ರಧಾನಿ ಮೋದಿ

ಛತ್ರಪತಿ ಶಿವಾಜಿ ಮಹಾರಾಜರು ನಮಗೆ ಕೇವಲ ಹೆಸರಲ್ಲ... ಇಂದು ನಾನು ನನ್ನ ದೇವರು ಛತ್ರಪತಿ ಶಿವಾಜಿ ಮಹಾರಾಜರಲ್ಲಿ ತಲೆಬಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಮೌಲ್ಯಗಳು ವಿಭಿನ್ನವಾಗಿವೆ. ನಾವು ಭಾರತ ಮಾತೆಯ ಮಹಾನ್ ಮಗ, ಈ ನೆಲದ ಮಗ ವೀರ್ ಸಾವರ್ಕರ್ ಅವರನ್ನು ನಿಂದಿಸುವ ಮತ್ತು ಅವಮಾನಿಸುವ ಜನರಲ್ಲ.

ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ: ಮಹಾರಾಷ್ಟ್ರ ಜನತೆಯ ಕ್ಷಮೆ ಕೋರಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on:Aug 30, 2024 | 5:41 PM

ಮುಂಬೈ ಆಗಸ್ಟ್ 30:  ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ (Sindhudurg) ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ (Chhatrapati Shivaji Maharaj statue) ಉರುಳಿ ಬಿದ್ದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶುಕ್ರವಾರ ಕ್ಷಮೆಯಾಚಿಸಿದ್ದಾರೆ. 2013ರಲ್ಲಿ ಬಿಜೆಪಿ ನನ್ನನ್ನು ಪ್ರಧಾನಿ ಅಭ್ಯರ್ಥಿ ಎಂದು ಹೆಸರಿಸಿತ್ತು. ನಾನು ಮಾಡಿದ ಮೊದಲ ಕೆಲಸವೆಂದರೆ ರಾಯಗಢದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಸಮಾಧಿಯ ಮುಂದೆ ಭಕ್ತನಾಗಿ ಕುಳಿತು ಹೊಸ ಪ್ರಯಾಣವನ್ನು ಪ್ರಾರಂಭಿಸಿದೆ ಎಂದು ಮೋದಿ ಪಾಲ್ಘರ್‌ನಲ್ಲಿ ಹೇಳಿದ್ದಾರೆ

“ಛತ್ರಪತಿ ಶಿವಾಜಿ ಮಹಾರಾಜರು ನಮಗೆ ಕೇವಲ ಹೆಸರಲ್ಲ… ಇಂದು ನಾನು ನನ್ನ ದೇವರು ಛತ್ರಪತಿ ಶಿವಾಜಿ ಮಹಾರಾಜರಲ್ಲಿ ತಲೆಬಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಮೌಲ್ಯಗಳು ವಿಭಿನ್ನವಾಗಿವೆ. ನಾವು ಭಾರತ ಮಾತೆಯ ಮಹಾನ್ ಮಗ, ಈ ನೆಲದ ಮಗ ವೀರ್ ಸಾವರ್ಕರ್ ಅವರನ್ನು ನಿಂದಿಸುವ ಮತ್ತು ಅವಮಾನಿಸುವ ಜನರಲ್ಲ. ಅವರು ಕ್ಷಮೆ ಕೇಳಲು ಸಿದ್ಧರಿಲ್ಲ, ನ್ಯಾಯಾಲಯದ ಮೊರೆ ಹೋಗಿ ಹೋರಾಟಕ್ಕೆ ಸಿದ್ಧರಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಆಗಸ್ಟ್ 26 ರಂದು 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತದ ವಿವಾದದ ನಡುವೆಯೇ ಪ್ರಧಾನಿಯವರ ಪ್ರತಿಕ್ರಿಯೆ ಬಂದಿದೆ.

ಕಡಲ ರಕ್ಷಣೆ ಮತ್ತು ಭದ್ರತೆಯಲ್ಲಿ ಮರಾಠ ನೌಕಾಪಡೆ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಪರಂಪರೆಯನ್ನು ಗೌರವಿಸುವ ಉದ್ದೇಶದಿಂದ ಸಿಂಧುದುರ್ಗದಲ್ಲಿ ಮೊದಲ ಬಾರಿಗೆ ನಡೆದ ನೌಕಾಪಡೆಯ ದಿನಾಚರಣೆಯ ಅಂಗವಾಗಿ ಕಳೆದ ವರ್ಷ ಡಿಸೆಂಬರ್ 4 ರಂದು ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.

ಪ್ರತಿಮೆ ಉರುಳಿ ಬಿದ್ದ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತ್ತು.

ಪ್ರತಿಮೆ ಕುಸಿತದ ಬಗ್ಗೆ ಕಾಂಗ್ರೆಸ್ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದಕ್ಕಾಗಿ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿತ್ತು.

“ಇಡೀ ಮಹಾರಾಷ್ಟ್ರ ಮತ್ತು ಭಾರತದಲ್ಲಿ ಪೂಜಿಸಲ್ಪಡುವ ಛತ್ರಪತಿ ಶಿವಾಜಿ ಮಹಾರಾಜರನ್ನು ನಾವು “ಸಾರ್ವಜನಿಕರ ರಾಜ” ಎಂದು ಕರೆಯುತ್ತೇವೆ, ಅವರ ಪ್ರತಿಮೆಯನ್ನು ಮಾಲ್ವಾನ್‌ನ ರಾಜ್‌ಕೋಟ್ ಕೋಟೆಯಲ್ಲಿ ನಿರ್ಮಿಸಲಾಗಿದೆ, ಇದನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಮೊದಲನೆಯದಾಗಿ, ಅರಬ್ಬಿ ಸಮುದ್ರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅವರು ಮಾಡಿದ ಭೂಮಿಪೂಜೆಯ ಬಗ್ಗೆ ನಾನು ಪ್ರಧಾನಿ ಮೋದಿ ಜಿ ಅವರನ್ನು ಕೇಳಲು ಬಯಸುತ್ತೇನೆ. ” ಎಂದು ಮುಂಬೈ ಕಾಂಗ್ರೆಸ್ ಮುಖ್ಯಸ್ಥೆ ವರ್ಷಾ ಗಾಯಕ್ವಾಡ್ ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

ಇದನ್ನೂ ಓದಿ: ಪಿಎಂ ಮೋದಿ ಭೇಟಿ ಮಾಡಿದ ಎನ್​ಬಿಎಫ್; ಅರ್ನಾಬ್ ಗೋಸ್ವಾಮಿ ನೇತೃತ್ವದ ನಿಯೋಗದಲ್ಲಿ ಟಿವಿ9 ಸಿಇಒ ಬರುನ್ ದಾಸ್ ಭಾಗಿ

“ಆ ಪ್ರತಿಮೆಯನ್ನು ಪೂರ್ಣಗೊಳಿಸುವ ಮೊದಲು, ಮಾಲ್ವಾನ್‌ನ ರಾಜ್‌ಕೋಟ್ ಕೋಟೆಯಲ್ಲಿನ ಅವರ ಪ್ರತಿಮೆ ಕೇವಲ 8 ತಿಂಗಳಲ್ಲಿ ಕುಸಿದಿದೆ. ಇದರಲ್ಲಿ ಭ್ರಷ್ಟಾಚಾರ ನಡೆದಿರುವುದು ಸ್ಪಷ್ಟವಾಗಿದೆ. ಮೋದಿ ಜೀ, ನೀವು ಯಾವಾಗ ಕ್ಷಮೆ ಕೇಳುತ್ತೀರಿ (ಮೋದಿ ಜಿ ಆಪ್ ಕಬ್ ಮಾಫಿ ಮಾಂಗೆಂಗೆ)?” ಎಂದು ಅವರು ಕೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:39 pm, Fri, 30 August 24

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್