AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಮುಖ್ಯಸ್ಥರಾಗಿ ಸುದೀರ್ಘ ಸೇವೆ ಸಲ್ಲಿಸಿದ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಸರ್ಕಾರದ ಮುಖ್ಯಸ್ಥರಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಹೊಸ ದಾಖಲೆ ನಿರ್ಮಿಸಿದ್ದಾರೆ. ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ ಅಧಿಕಾರಾವಧಿಯನ್ನು ಮೀರಿಸಿದ್ದಾರೆ. ದೇಶಕ್ಕಾಗಿ ಅವರ ಅಚಲ ಸಮರ್ಪಣೆ ಮತ್ತು ರಾಷ್ಟ್ರ ಮೊದಲು ನೀತಿಯ ಫಲಿತಾಂಶವಿದು. ಮುಖ್ಯಮಂತ್ರಿಯಿಂದ ಪ್ರಧಾನಿಯವರೆಗಿನ ಅವರ ಪ್ರಯಾಣವು ನಿರಂತರ ಸೇವೆ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದಿಸಿದ್ದಾರೆ.

ಸರ್ಕಾರದ ಮುಖ್ಯಸ್ಥರಾಗಿ ಸುದೀರ್ಘ ಸೇವೆ ಸಲ್ಲಿಸಿದ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ ಮೋದಿ
ನರೇಂದ್ರ ಮೋದಿ Image Credit source: Indian Express
ನಯನಾ ರಾಜೀವ್
|

Updated on:Mar 22, 2026 | 2:41 PM

Share

ನವದದೆಹಲಿ, ಮಾರ್ಚ್​ 22: ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತೀಯ ರಾಜಕೀಯ ಇತಿಹಾಸದಲ್ಲಿ ಅಭೂತಪೂರ್ವ ಮೈಲಿಗಲ್ಲು ಸಾಧಿಸಿದ್ದಾರೆ. ಅವರು ಭಾರತದಲ್ಲಿ ಸರ್ಕಾರದ ಮುಖ್ಯಸ್ಥರಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಖ್ಯಾತಿಗೆ ಪಾತ್ರರಾಗಿದ್ದಾರೆ. ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಅವರು ಈ ಐತಿಹಾಸಿಕ ಸಾಧನೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಮಾಹಿತಿಯನ್ನು ಹಂಚಿಕೊಂಡು ಪ್ರಧಾನಿಯನ್ನು ಅಭಿನಂದಿಸಿದ್ದಾರೆ.

ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ 8930 ದಿನಗಳ ಅಧಿಕಾರಾವಧಿಯನ್ನು ಪ್ರಧಾನಿ ಮೋದಿ ಮೀರಿಸಿದ್ದಾರೆ. ಸರ್ಕಾರದ ಮುಖ್ಯಸ್ಥರಾಗಿ ಸಾರ್ವಜನಿಕ ಹುದ್ದೆಯಲ್ಲಿ 8,931 ದಿನಗಳನ್ನು ಪೂರೈಸುವ ಮೂಲಕ ಪ್ರಧಾನಿ ಮೋದಿ ಈ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ. ದೇಶಕ್ಕಾಗಿ ಅವರ ಅಚಲ ಸಮರ್ಪಣೆ ಮತ್ತು ರಾಷ್ಟ್ರ ಮೊದಲು ನೀತಿಯ ಫಲಿತಾಂಶ ಇದು ಎಂದು ರಾಜನಾಥ್ ಸಿಂಗ್ ಬಣ್ಣಿಸಿದ್ದಾರೆ.

ರಕ್ಷಣಾ ಸಚಿವರು ತಮ್ಮ ಸಂದೇಶದಲ್ಲಿ ಪ್ರಧಾನಿಯವರ ಇದುವೆರೆಗಿನ ಪ್ರಯಾಣದ ಬಗ್ಗೆ ಮಾತನಾಡಿದ್ದಾರೆ, ಪ್ರಧಾನಿ ಮೋದಿಯವರ ಜೀವನವು ದೇಶ ಮತ್ತು ಅದರ ಜನರ ಮೇಲಿನ ಸಂಪೂರ್ಣ ಸಮರ್ಪಣೆಗೆ ಒಂದು ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಪ್ರಧಾನಿ ಮೋದಿ ಮಾತುಕತೆ

ಗುಜರಾತ್ ಮುಖ್ಯಮಂತ್ರಿಯಾಗಿ ಅವರ ಅಧಿಕಾರಾವಧಿ ಪ್ರಾರಂಭವಾಯಿತು. ಅಲ್ಲಿ ಅವರು ಅಭಿವೃದ್ಧಿಗೆ ಹೊಸ ಮಾನದಂಡವನ್ನು ಸ್ಥಾಪಿಸಿದ್ದರು. ಮುಖ್ಯಮಂತ್ರಿಯಿಂದ ಪ್ರಧಾನಿವರೆಗಿನ ಅವರ ಪ್ರಯಾಣವು ನಿರಂತರ ಸೇವೆ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಅವರ ಅಚಲ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

ರಾಜನಾಥ್ ಸಿಂಗ್ ಪೋಸ್ಟ್​

ಪ್ರಧಾನಿಯವರ ಕಾರ್ಯಶೈಲಿಯನ್ನು ಶ್ಲಾಘಿಸಿದ ರಾಜನಾಥ್ ಸಿಂಗ್, ಈ ಸಾಧನೆ ಕೇವಲ ಅಂಕಿ-ಅಂಶಗಳಿಗೆ ಸೀಮಿತವಾಗಿಲ್ಲ, ಆಡಳಿತದಲ್ಲಿ ಅವರ ಸಮಗ್ರತೆ ಮತ್ತು ಪ್ರತಿಯೊಬ್ಬ ನಾಗರಿಕರಿಗಾಗಿ ಅವರ ಅವಿಶ್ರಾಂತ ಪ್ರಯತ್ನಗಳ ಪ್ರತಿಬಿಂಬವಾಗಿದೆ. ಈ ಸಾಧನೆಗಾಗಿ ಅಭಿನಂದನೆಗಳು, ಅವರ ನಾಯಕತ್ವವು ಸಮಗ್ರತೆ ಮತ್ತು ಸೇವಾ ಮನೋಭಾವದಿಂದ ತುಂಬಿದೆ ಎಂದು ಬರೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:41 pm, Sun, 22 March 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್