
ನವದದೆಹಲಿ, ಮಾರ್ಚ್ 22: ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತೀಯ ರಾಜಕೀಯ ಇತಿಹಾಸದಲ್ಲಿ ಅಭೂತಪೂರ್ವ ಮೈಲಿಗಲ್ಲು ಸಾಧಿಸಿದ್ದಾರೆ. ಅವರು ಭಾರತದಲ್ಲಿ ಸರ್ಕಾರದ ಮುಖ್ಯಸ್ಥರಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಖ್ಯಾತಿಗೆ ಪಾತ್ರರಾಗಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ಐತಿಹಾಸಿಕ ಸಾಧನೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಮಾಹಿತಿಯನ್ನು ಹಂಚಿಕೊಂಡು ಪ್ರಧಾನಿಯನ್ನು ಅಭಿನಂದಿಸಿದ್ದಾರೆ.
ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ 8930 ದಿನಗಳ ಅಧಿಕಾರಾವಧಿಯನ್ನು ಪ್ರಧಾನಿ ಮೋದಿ ಮೀರಿಸಿದ್ದಾರೆ. ಸರ್ಕಾರದ ಮುಖ್ಯಸ್ಥರಾಗಿ ಸಾರ್ವಜನಿಕ ಹುದ್ದೆಯಲ್ಲಿ 8,931 ದಿನಗಳನ್ನು ಪೂರೈಸುವ ಮೂಲಕ ಪ್ರಧಾನಿ ಮೋದಿ ಈ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ. ದೇಶಕ್ಕಾಗಿ ಅವರ ಅಚಲ ಸಮರ್ಪಣೆ ಮತ್ತು ರಾಷ್ಟ್ರ ಮೊದಲು ನೀತಿಯ ಫಲಿತಾಂಶ ಇದು ಎಂದು ರಾಜನಾಥ್ ಸಿಂಗ್ ಬಣ್ಣಿಸಿದ್ದಾರೆ.
ರಕ್ಷಣಾ ಸಚಿವರು ತಮ್ಮ ಸಂದೇಶದಲ್ಲಿ ಪ್ರಧಾನಿಯವರ ಇದುವೆರೆಗಿನ ಪ್ರಯಾಣದ ಬಗ್ಗೆ ಮಾತನಾಡಿದ್ದಾರೆ, ಪ್ರಧಾನಿ ಮೋದಿಯವರ ಜೀವನವು ದೇಶ ಮತ್ತು ಅದರ ಜನರ ಮೇಲಿನ ಸಂಪೂರ್ಣ ಸಮರ್ಪಣೆಗೆ ಒಂದು ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.
ಮತ್ತಷ್ಟು ಓದಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಪ್ರಧಾನಿ ಮೋದಿ ಮಾತುಕತೆ
ಗುಜರಾತ್ ಮುಖ್ಯಮಂತ್ರಿಯಾಗಿ ಅವರ ಅಧಿಕಾರಾವಧಿ ಪ್ರಾರಂಭವಾಯಿತು. ಅಲ್ಲಿ ಅವರು ಅಭಿವೃದ್ಧಿಗೆ ಹೊಸ ಮಾನದಂಡವನ್ನು ಸ್ಥಾಪಿಸಿದ್ದರು. ಮುಖ್ಯಮಂತ್ರಿಯಿಂದ ಪ್ರಧಾನಿವರೆಗಿನ ಅವರ ಪ್ರಯಾಣವು ನಿರಂತರ ಸೇವೆ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಅವರ ಅಚಲ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ರಾಜನಾಥ್ ಸಿಂಗ್ ಪೋಸ್ಟ್
Prime Minister Shri @narendramodi is now the longest-serving head of a government in India.
Pure devotion to the nation and its people defines PM Modi Ji. From his unwavering commitment as the Chief Minister of Gujarat to his dedicated leadership as the Prime Minister, his life… pic.twitter.com/llGPwziZZC
— Rajnath Singh (@rajnathsingh) March 22, 2026
ಪ್ರಧಾನಿಯವರ ಕಾರ್ಯಶೈಲಿಯನ್ನು ಶ್ಲಾಘಿಸಿದ ರಾಜನಾಥ್ ಸಿಂಗ್, ಈ ಸಾಧನೆ ಕೇವಲ ಅಂಕಿ-ಅಂಶಗಳಿಗೆ ಸೀಮಿತವಾಗಿಲ್ಲ, ಆಡಳಿತದಲ್ಲಿ ಅವರ ಸಮಗ್ರತೆ ಮತ್ತು ಪ್ರತಿಯೊಬ್ಬ ನಾಗರಿಕರಿಗಾಗಿ ಅವರ ಅವಿಶ್ರಾಂತ ಪ್ರಯತ್ನಗಳ ಪ್ರತಿಬಿಂಬವಾಗಿದೆ. ಈ ಸಾಧನೆಗಾಗಿ ಅಭಿನಂದನೆಗಳು, ಅವರ ನಾಯಕತ್ವವು ಸಮಗ್ರತೆ ಮತ್ತು ಸೇವಾ ಮನೋಭಾವದಿಂದ ತುಂಬಿದೆ ಎಂದು ಬರೆದಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:41 pm, Sun, 22 March 26