ನೂತನ ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ

Narendra Modi calls on new Vice President CP Radhakrishnan: ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ಉಪರಾಷ್ಟ್ರಪತಿ ನಿವಾಸದಲ್ಲಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದರು. ನೂತನ ಉಪರಾಷ್ಟ್ರಪತಿಗಳೊಂದಿಗೆ ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಎರಡು ಬಾರಿಯ ಸಂಸದ ಹಾಗೂ ತಮಿಳುನಾಡು ಬಿಜೆಪಿಯ ಹಿರಿಯ ನಾಯಕ ರಾಧಾಕೃಷ್ಣನ್ ಇತ್ತೀಚೆಗೆ ಉಪರಾಷ್ಟ್ರಪತಿಗಳಾಗಿ ಪ್ರಮಾಣ ಸ್ವೀಕರಿಸಿದ್ದಾರೆ.

ನೂತನ ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ, ರಾಧಾಕೃಷ್ಣನ್

Updated on: Sep 28, 2025 | 9:51 PM

ನವದೆಹಲಿ, ಸೆಪ್ಟೆಂಬರ್ 28: ನೂತನ ಉಪರಾಷ್ಟ್ರಪತಿಯಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ ಸಿ.ಪಿ. ರಾಧಾಕೃಷ್ಣನ್ (CP Radhakrishnan) ಅವರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿಯಾಗಿದ್ದಾರೆ. ದೆಹಲಿಯಲ್ಲಿರುವ ಉಪರಾಷ್ಟ್ರಪತಿಗಳ ನಿವಾಸಕ್ಕೆ ತೆರಳಿ ರಾಧಾಕೃಷ್ಣನ್ ಅವರನ್ನು ಪ್ರಧಾನಿಗಳು ಭಾನುವಾರ ಭೇಟಿ ಮಾಡಿದ್ದಾರೆ. ಉಪರಾಷ್ಟ್ರಪತಿಗಳ ಕಾರ್ಯದರ್ಶಿಗಳು ಈ ಬೆಳವಣಿಗೆಯನ್ನು ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೂ ಕೂಡ ಎಕ್ಸ್​ನಲ್ಲಿ ಇದನ್ನು ಪೋಸ್ಟ್ ಮಾಡಿದ್ದಾರೆ.

‘ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದೆ. ಹಲವಾರು ವಿಷಯಗಳ ಬಗ್ಗೆ ಅವರೊಂದಿಗೆ ಕೂಲಂಕಷ ಚರ್ಚೆ ನಡೆಸಿದೆ’ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ನರೇಂದ್ರ ಮೋದಿ ಎಕ್ಸ್ ಅಕೌಂಟ್​ನಲ್ಲಿ ಆದ ಪೋಸ್ಟ್

ಇದನ್ನೂ ಓದಿ: ವಿಶ್ವಸಂಸ್ಥೆ ರಾಯಭಾರಿ, ಪಿಎಂಒ ನಂಟು… ಸ್ವಾಮಿ ಚೈತನ್ಯಾನಂದರ ನಾನಾ ವೇಷಗಳನ್ನು ಕಂಡ ಪೊಲೀಸರು

ತಮಿಳುನಾಡಿನ ಹಿರಿಯ ಬಿಜೆಪಿ ಮುಖಂಡರಾದ ಸಿ.ಪಿ. ರಾಧಾಕೃಷ್ಣನ್ ಕೆಲ ವಾರಗಳ ಹಿಂದಷ್ಟೇ ಉಪರಾಷ್ಟ್ರಪತಿಗಳಾಗಿ ಪ್ರಮಾಣ ಸ್ವೀಕರಿಸಿದ್ದಾರೆ. ತಮಿಳುನಾಡಿನ ತಿರುಪ್ಪೂರ್​ನಲ್ಲಿ 1957, ಅಕ್ಟೋಬರ್ 20ರಂದು ಜನಿಸಿದ ರಾಧಾಕೃಷ್ಣನ್ ಅವರು ಕೊಯಂಬತ್ತೂರಿನಿಂದ ಎರಡು ಬಾರಿ ಸಂಸದರಾಗಿ ಚುನಾಯಿತರಾಗಿದ್ದರು. ತಮಿಳುನಾಡಿನ ಬಿಜೆಪಿ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೆಲ ವರ್ಷಗಳಿಂದ ವಿವಿಧ ರಾಜ್ಯಗಳಿಗೆ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಇದ್ದಾರೆ. ಉಪರಾಷ್ಟ್ರಪತಿಗಳಾಗುವ ಮುನ್ನ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಬಿಹಾರದಲ್ಲಿ ಸಾಹಿತ್ಯ ಸಮ್ಮೇಳನದಲ್ಲಿ ರಾಧಾಕೃಷ್ಣನ್

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಬಿಹಾರ ರಾಜಧಾನಿ ಪಟ್ನಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಾಹಿತ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಭಾಷಣ ಮಾಡಿದ ಅವರು, ದೇಶದಲ್ಲಿ ಹಲವಾರು ಭಾಷೆಗಳಿದ್ದರೂ ಎಲ್ಲಕ್ಕೂ ಧರ್ಮ ಒಂದು ಸಾಮಾನ್ಯ ಕೊಂಡಿಯಾಗಿದೆ. ಏಕತೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಅಕ್ಟೋಬರ್ 2ರಂದು 1 ಖಾದಿ ಉತ್ಪನ್ನ ಖರೀದಿಸಿ; ಪ್ರಧಾನಿ ಮೋದಿ ಸ್ವದೇಶಿ ಅಭಿಯಾನ

ಬಿಹಾರ ರಾಜ್ಯಪಾಲ ಅರಿಫ್ ಮೊಹಮ್ಮದ್ ಖಾನ್, ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ, ಪ್ರವಾಸೋದ್ಯಮ ಸಚಿವ ರಾಜುಕುಮಾರ್ ಸಿಂಗ್ ಮೊದಲಾದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ